ಕನ್ನಡಪ್ರಭ ವಾರ್ತೆ ಗದಗ
ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅವರ ಚಿಂತನೆಗಳು ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ. ಸಮಾಜದ ಎಲ್ಲ ವರ್ಗಗಳ ಜನರಿಗೂ ಮಾರ್ಗದರ್ಶನ ನೀಡುವ ಶಕ್ತಿಯನ್ನು ಹೊಂದಿವೆ. ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸಮಾನತೆ, ಸಹೋದರತ್ವ ಮತ್ತು ಸಾಮಾಜಿಕ ಸಾಮರಸ್ಯವನ್ನು ಬೆಳೆಸಲು ಪ್ರತಿಯೊಬ್ಬರೂ ಮುಂದಾಗಬೇಕು ಎಂದರು.
ಬಿಜೆಪಿ ಜಿಲ್ಲಾಧ್ಯಾಕ್ಷ ರಾಜು ಕುರಡಗಿ ಮಾತನಾಡಿ, ರಾಮಾಯಣವು ಭಾರತೀಯರ ಜೀವನ ಮೌಲ್ಯಗಳನ್ನು ಪ್ರತಿಬಿಂಬಿಸುವ ಮಹಾಕಾವ್ಯವಾಗಿದೆ. ಶ್ರೀರಾಮನ ಆದರ್ಶ ಜೀವನ, ಸೀತೆಯ ಸಹನೆ, ಲಕ್ಷ್ಮಣನ ಕರ್ತವ್ಯನಿಷ್ಠೆ ಹಾಗೂ ಹನುಮಂತನ ಸೇವಾ ಮನೋಭಾವದಂತಹ ಮೌಲ್ಯಗಳು ಇಂದಿನ ಸಮಾಜಕ್ಕೂ ಪ್ರಸ್ತುತವಾಗಿವೆ. ಇಂತಹ ಮಹಾನ್ ಕೃತಿಯನ್ನು ರಚಿಸಿದ ಮಹರ್ಷಿ ವಾಲ್ಮೀಕಿ ಅವರ ವಿಚಾರಧಾರೆಗಳನ್ನು ಯುವಜನತೆ ಅರಿತುಕೊಂಡು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದರು.ಬಿಜೆಪಿ ಯುವ ಮುಖಂಡ ವಸಂತ ಪಡಗದ ಮಾತನಾಡಿ, ಸಮಾಜದಲ್ಲಿ ಶಿಕ್ಷಣ, ಸಂಘಟನೆ ಮತ್ತು ಜಾಗೃತಿಗೆ ಹೆಚ್ಚಿನ ಆದ್ಯತೆ ನೀಡುವ ಅಗತ್ಯವಿದೆ. ವಿಶೇಷವಾಗಿ ಯುವಜನರು ಶಿಕ್ಷಣದ ಮೂಲಕ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು. ಮಹನೀಯರ ಜಯಂತಿಗಳನ್ನು ಕೇವಲ ಆಚರಣೆಗೆ ಸೀಮಿತಗೊಳಿಸದೆ, ಅವರ ಜೀವನದ ಸಂದೇಶಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಕಾರ್ಯಕ್ರಮಗಳನ್ನಾಗಿ ರೂಪಿಸಬೇಕು ಎಂದು ತಿಳಿಸಿದರು.