ಪರಿವರ್ತಿತ ವಾಲ್ಮೀಕಿ ಜೀವನ ಸಮಾಜಕ್ಕೆ ಪ್ರೇರಣೆ

KannadaprabhaNewsNetwork |  
Published : Oct 27, 2026, 01:45 AM IST
ಮಾಗಡಿ ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ  ಸರಳವಾಗಿ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ನಡೆಯಿತು. | Kannada Prabha

ಸಾರಾಂಶ

ಮಾಗಡಿ: ರತ್ನಾಕರನಿಂದ ಮಹರ್ಷಿ ವಾಲ್ಮೀಕಿಯಾಗಿ ಪರಿವರ್ತನೆಗೊಂಡ ಅವರ ಜೀವನ ಪ್ರತಿಯೊಬ್ಬರಿಗೂ ಪ್ರೇರಣೆ ಎಂದು ತಹಸೀಲ್ದಾರ್ ಕೆ.ಆರ್.ರಂಜಿತ್ ಹೇಳಿದರು

ಮಾಗಡಿ: ರತ್ನಾಕರನಿಂದ ಮಹರ್ಷಿ ವಾಲ್ಮೀಕಿಯಾಗಿ ಪರಿವರ್ತನೆಗೊಂಡ ಅವರ ಜೀವನ ಪ್ರತಿಯೊಬ್ಬರಿಗೂ ಪ್ರೇರಣೆ ಎಂದು ತಹಸೀಲ್ದಾರ್ ಕೆ.ಆರ್.ರಂಜಿತ್ ಹೇಳಿದರು.

ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮನುಷ್ಯ ತನ್ನ ಮನಸ್ಸನ್ನು ಪರಿವರ್ತಿಸಿಕೊಂಡು ಉತ್ತಮ ಮಾರ್ಗದಲ್ಲಿ ನಡೆದರೆ ಸಮಾಜಕ್ಕೆ ಮಾದರಿಯಾಗಬಹುದು ಎಂಬುದನ್ನು ಅವರ ಬದುಕು ತೋರಿಸಿಕೊಟ್ಟಿದೆ. ವಾಲ್ಮೀಕಿ ಮಹರ್ಷಿಗಳ ಆದರ್ಶಗಳನ್ನು ಇಂದಿನ ಯುವಜನರು ಹಾಗೂ ಮುಂದಿನ ಪೀಳಿಗೆಗೆ ಪರಿಚಯಿಸುವ ಕೆಲಸವಾಗಬೇಕು ಎಂದು ಹೇಳಿದರು.

ಮುಖಂಡ ಚಿಕ್ಕಹನುಮಂತಯ್ಯ ಮಾತನಾಡಿ, ಮಹರ್ಷಿ ವಾಲ್ಮೀಕಿ ರಾಮಾಯಣ ರಚಿಸಿ ಮಾನವತ್ವದ ಗುಣಗಳ ತಿಳಿಸಿದರೆ, ಡಾ.ಅಂಬೇಡ್ಕರ್ ಸಂವಿಧಾನದ ಮೂಲಕ ದೇಶದ ಜನರಿಗೆ ಹಕ್ಕು- ಕರ್ತವ್ಯಗಳನ್ನು ಗಳಿಸಿಕೊಟ್ಟರು. ಮನುಷ್ಯ ಹೇಗೆ ಬದುಕಬೇಕು, ಜೀವನದಲ್ಲಿ ಯಾವ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂಬುದನ್ನು ಜಗತ್ತಿಗೆ ಸಾರಿದ್ದಾರೆ ಎಂದು ಹೇಳಿದರು.

ಮುಖಂಡ ಗಂಗಹನುಮಯ್ಯ ಮಾತನಾಡಿ, ಮಾಗಡಿಯಲ್ಲಿ ವಾಲ್ಮೀಕಿ ಸಮುದಾಯಕ್ಕೆ ಸಂಬಂಧಿಸಿದ ದೇವಸ್ಥಾನ ಹಾಗೂ ಅರವಂಟಿಗೆ ಜಾಗದ ವಿಚಾರವಾಗಿ ಸಮಸ್ಯೆ ಎದುರಿಸುತ್ತಿದ್ದೇವೆ. ಜಾಗದ ವಿಚಾರವಾಗಿ ನ್ಯಾಯಾಲಯದ ಆದೇಶದ ಪ್ರತಿ ತಮ್ಮ ಬಳಿ ಇದೆ. ಆದರೂ ದೇವಸ್ಥಾನಕ್ಕೆ ಬರುವ ಭಕ್ತರಿಗೆ ಪ್ರಸಾದ ವಿತರಿಸಲು ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಜಾಗದ ಸಮಸ್ಯೆ ಎದುರಾಗಿದೆ. ಈ ಕುರಿತು ತಾಲೂಕು ಆಡಳಿತ, ಪುರಸಭೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಿ, ದಾಖಲೆಗಳು ಮತ್ತು ನ್ಯಾಯಾಲಯದ ಆದೇಶದ ಆಧಾರದಲ್ಲಿ ಸಮಸ್ಯೆ ಬಗೆಹರಿಸಿ ಸಮುದಾಯಕ್ಕೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾ ಇಲಾಖೆ ಉಮಾದೇವಿ, ತಾಲೂಕು ಆರೋಗ್ಯ ವೈಧ್ಯಾಧಿಕಾರಿ ಡಾ.ರಾಮಚಂದ್ರ, ಬಿಇಒ ರಾಜೇಗೌಡ, ಸಮುದಾಯದ ಮುಖಂಡರಾದ ಪ್ರಶಾಂತ್, ಪ್ರೇಮ, ಸತೀಶ್, ರಾಜಣ್ಣ, ಪಂಚ ಗ್ಯಾರಂಟಿಗಳ ಮಾಜಿ ಅಧ್ಯಕ್ಷ ಕಲ್ಕೆರೆ ಶಿವಣ್ಣ, ಕೃಷ್ಣ, ವನಜ ಇತರರು ಉಪಸ್ಥಿತರಿದ್ದರು.

(ಫೋಟೋ ಕ್ಯಾಫ್ಷನ್‌)

ಮಾಗಡಿ ತಾಲೂಕು ಕಚೇರಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಕೆ.ಆರ್.ರಂಜಿತ್ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಾಲ್ಮೀಕಿ ರಾಮಾಯಣದಿಂದ ಸಮಾಜಕ್ಕೆ ಸಂದೇಶ
ರುದ್ರಭೂಮಿ ಸ್ವಚ್ಛಗೊಳಿಸಿದ ಹಿಂದೂ ಸಂಘಟನೆ ಕಾರ್ಯಕರ್ತರು