ಹಾನಗಲ್ಲಿನಲ್ಲಿ ಬಹುದಿನಗಳ ಕನಸಿನ ಇಂದಿರಾ ಕ್ಯಾಂಟೀನ್‌ ಪ್ರಾರಂಭ

KannadaprabhaNewsNetwork |  
Published : Jun 03, 2025, 12:14 AM IST
ಫೋಟೋ : 2ಎಚ್‌ಎನ್‌ಎಲ್2 | Kannada Prabha

ಸಾರಾಂಶ

ಜನಸಾಮಾನ್ಯರ ಅನುಕೂಲಕ್ಕಾಗಿಯೇ ಇರುವ ಈ ಇಂದಿರಾ ಕ್ಯಾಂಟೀನ್ ಸದುಪಯೋಗ ಮಾಡಿಕೊಳ್ಳುವ ಮೂಲಕ ಸಾರ್ವಜನಿಕರು ಸಹಕರಿಸಬೇಕು.

ಹಾನಗಲ್ಲ: ಬಹುದಿನಗಳ ಕನಸಿನ ಇಂದಿರಾ ಕ್ಯಾಂಟೀನ್‌ ಅರಂಭಗೊಂಡಿದ್ದು, ಶಾಸಕ ಶ್ರೀನಿವಾಸ ಮಾನೆ ಹಾಗೂ ಗಣ್ಯರು ಇಂದಿರಾ ಕ್ಯಾಂಟೀನನಲ್ಲಿ ಉಪಾಹಾರ ಸವಿದರು.ಮೂರು ವರ್ಷಗಳಿಂದ ಪಟ್ಟಣದಲ್ಲಿ ಇಂದಿರಾ ಕ್ಯಾಂಟೀನ್ ಆರಂಭವಾಗಬೇಕು ಎಂಬ ಬೇಡಿಕೆ ಈಡೇರಿದ್ದು, ಸೋಮವಾರ ಶಾಸಕ ಶ್ರೀನಿವಾಸ ಮಾನೆ ಅವರು ಪಟ್ಟಣದ ಕಚೇರಿಗಳ ಸಂಕೀರ್ಣ, ಕೇಂದ್ರ ಸ್ಥಾನವೇ ಆಗಿರುವ ನೂತನ ಆಡಳಿತ ಭವನದ ಬಳಿ ಇಂದಿರಾ ಕ್ಯಾಂಟೀನ್‌ಗೆ ಚಾಲನೆ ನೀಡಿದರು. ಗಣ್ಯರೊಂದಿಗೆ ಚೌಚೌ ಬಾತ್ ಸವಿದರು.ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಶ್ರೀನಿವಾಸ ಮಾನೆ ಅವರು, ಕಚೇರಿ ಕೆಲಸ ಕಾರ್ಯಗಳಿಗಾಗಿ ದೂರದ ಊರಿನಿಂದ ಬಂದ ನೂರಾರು ಜನರಿಗೆ ಅತ್ಯಂತ ಕಡಿಮೆ ದರದಲ್ಲಿ ಬೆಳಗಿನ ಉಪಾಹಾರ, ಮಧ್ಯಾಹ್ನ ಹಾಗೂ ರಾತ್ರಿಯ ಊಟ ದೊರೆಯುತ್ತದೆ. ಕಾಂಗ್ರೆಸ್ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಲ್ಲೊಂದಾಗಿದೆ. ಜನಸಾಮಾನ್ಯರು ಅನುಕೂಲಕ್ಕಾಗಿಯೇ ಇರುವ ಈ ಇಂದಿರಾ ಕ್ಯಾಂಟೀನ್ ಸದುಪಯೋಗ ಮಾಡಿಕೊಳ್ಳುವ ಮೂಲಕ ಸಾರ್ವಜನಿಕರು ಸಹಕರಿಸಬೇಕು ಎಂದರು.ಪುರಸಭೆ ಪ್ರಭಾರ ಅಧ್ಯಕ್ಷೆ ವೀಣಾ ಗುಡಿ ಮಾತನಾಡಿ, ಇಂದಿರಾ ಕ್ಯಾಂಟೀನ್‌ ಬಡವರ ಬಂಧು. ಇಲ್ಲಿ ಅತ್ಯುತ್ತಮ ಉಪಾಹಾರ ಊಟ ಅತ್ಯಂತ ಕಡಿಮೆ ದರದಲ್ಲಿ ರುಚಿ ಶುಚಿಯಾಗಿ ಸಿಗುತ್ತದೆ. ಇದು ಹಸಿದವನ ಅನ್ನಭಾಗ್ಯ. ಕಾಂಗ್ರೆಸ್ ಸರ್ಕಾರ ಜನಸಾಮಾನ್ಯರ ಕಷ್ಟಗಳಲ್ಲಿ ಸಹಕಾರಿಯಾಗಿ ಸೇವೆ ಸಲ್ಲಿಸುತ್ತದೆ ಎಂಬುದಕ್ಕೆ ಇದೂ ಒಂದು ಸಾಕ್ಷಿ. ಶಾಸಕ ಶ್ರೀನಿವಾಸ ಮಾನೆ ಅತ್ಯಂತ ಆಸಕ್ತಿಯಿಂದ ಬಡವರಿಗಾಗಿ ಈ ಕ್ಯಾಂಟೀನ್ ಆರಂಭಿಸಲು ಪರಿಶ್ರಮಿಸಿದ್ದಾರೆ ಎಂದರು.

ಪುರಸಭೆ ಮಾಜಿ ಅಧ್ಯಕ್ಷರಾದ ನಾಗಪ್ಪ ಸವದತ್ತಿ, ಪರಶುರಾಮ ಖಂಡೂನವರ, ಮಮತಾ ಆರೆಗೊಪ್ಪ, ಖುರ್ಷಿದ ಹುಲ್ಲತ್ತಿ, ರವಿ ದೇಶಪಾಂಡೆ, ಪುರಸಭೆ ಮುಖ್ಯಾಧಿಕಾರಿ ವೈ.ಕೆ. ಜಗದೀಶ ಸೇರಿದಂತೆ ಗಣ್ಯರು ಇಂದಿರಾ ಕ್ಯಾಂಟೀನ್ ಚಾಲನೆಯಲ್ಲಿ ಪಾಲ್ಗೊಂಡಿದ್ದರು.ಇಂದು ಕಾರ್ಮಿಕ ಭವನ ಕಾಮಗಾರಿಗೆ ಭೂಮಿಪೂಜೆ

ಹಾವೇರಿ: ನಗರದಲ್ಲಿ ನೂತನ ಕಾರ್ಮಿಕ ಕಚೇರಿ ಸಂಕೀರ್ಣ(ಕಾರ್ಮಿಕ ಭವನ)ದ ಕಾಮಗಾರಿಯ ಭೂಮಿಪೂಜೆ ಮತ್ತು ಶಿಲಾನ್ಯಾಸ ಕಾರ್ಯಕ್ರಮ ಜೂ. 3ರಂದು ಬೆಳಗ್ಗೆ 10.30ಕ್ಕೆ ನಗರದ ಎಪಿಎಂಸಿ ಹಿಂಭಾಗದಲ್ಲಿ ಜರುಗಲಿದೆ.

ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ, ಕಾರ್ಮಿಕ ಸಚಿವ ಸಂತೋಷ ಲಾಡ್, ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಅವರ ಉಪಸ್ಥಿತಿಯಲ್ಲಿ, ಶಾಸಕ ಹಾಗೂ ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅವರು ಶಂಕುಸ್ಥಾಪನೆ ನೆರವೇರಿಸಿ ಅಧ್ಯಕ್ಷತೆ ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ವಿಧಾನಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಮುಖ್ಯ ಅತಿಥಿಗಳಾಗಿ ಬ್ಯಾಡಗಿ ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸವರಾಜ ಶಿವಣ್ಣನವರ, ಹೆಸ್ಕಾಂ ಅಧ್ಯಕ್ಷ ಅಜೀಮ್‌ಪೀರ ಖಾದ್ರಿ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷ ಎಸ್.ಆರ್. ಪಾಟೀಲ, ವಿಧಾನಪರಿಷತ್ ಸದಸ್ಯರಾದ ಎಸ್.ವಿ. ಸಂಕನೂರ, ಪ್ರದೀಪ ಶೆಟ್ಟರ, ಶಾಸಕರಾದ ಶ್ರೀನಿವಾಸ ಮಾನೆ, ಯು.ಬಿ. ಬಣಕಾರ, ಪ್ರಕಾಶ ಕೋಳಿವಾಡ, ಯಾಸಿರ್ ಅಹ್ಮದ್‌ಖಾನ್ ಪಠಾಣ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸೋಮಣ್ಣ ಬೇವಿನಮರದ, ನಗರಸಭೆ ಅಧ್ಯಕ್ಷೆ ಶಶಿಕಲಾ ರಾಮು ಮಾಳಗಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್. ಗಾಜಿಗೌಡ್ರ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಎಂ. ಹಿರೇಮಠ, ನಗರಸಭೆ ಉಪಾಧ್ಯಕ್ಷ ಮಲ್ಲಿಕಾರ್ಜುನ ಸಾತೇನಹಳ್ಳಿ ಹಾಗೂ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಎಂ.ಎಂ. ಮೈದೂರ ಪಾಲ್ಗೊಳ್ಳಲಿದ್ದಾರೆ.

PREV

Recommended Stories

ರಾಜ್ಯದಲ್ಲಿ 3 ದಿನ ಭಾರೀ ಮಳೆ: 15 ಜಿಲ್ಲೆಗೆ ಯೆಲ್ಲೋ ಅಲರ್ಟ್‌
ವರ್ಗಾವಣೆ ಬಳಿಕ ಪೊಲೀಸರು ವರದಿ ಮಾಡಿಕೊಳ್ಳದಿದ್ದರೆ ಸಂಬಳ ಕಟ್‌ : ವೈದ್ಯಕೀಯ ರಜೆಗೆ ಬ್ರೇಕ್