2028ರಲ್ಲಿ ಕರ್ನಾಟಕದಲ್ಲಿ ಅರಳಲಿದೆ ಕಮಲ: ಹರೀಶ್ ದ್ವಿವೇದಿ

KannadaprabhaNewsNetwork |  
Published : Nov 30, 2026, 02:15 AM IST
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಉಸ್ತುವಾರಿ ಹರೀಶ್ ದ್ವಿವೇದಿ ನೇತೃತ್ವದಲ್ಲಿ, ಯಾದಗಿರಿ ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಭಾನುವಾರ ಸಂಜೆ ವಿಭಾಗ ಮಟ್ಟದ ಪ್ರಮುಖರ ಸಭೆ ಆಯೋಜಿಸಲಾಗಿತ್ತು.  | Kannada Prabha

ಸಾರಾಂಶ

2028ರ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಕೂಟ ಪ್ರಚಂಡ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ಹರೀಶ್ ದ್ವಿವೇದಿ ವಿಶ್ವಾಸ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಯಾದಗಿರಿ

2028ರ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಕೂಟ ಪ್ರಚಂಡ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ಹರೀಶ್ ದ್ವಿವೇದಿ ವಿಶ್ವಾಸ ವ್ಯಕ್ತಪಡಿಸಿದರು.

ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಭಾನುವಾರ ಸಂಜೆ ನಡೆದ ವಿಭಾಗ ಮಟ್ಟದ ಪ್ರಮುಖರ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷವು ಇತ್ತೀಚೆಗೆ ಕರ್ನಾಟಕ ರಾಜ್ಯ ಉಸ್ತುವಾರಿಯಾಗಿ ಜವಾಬ್ದಾರಿ ನೀಡಿದ್ದು, ಅದರ ಭಾಗವಾಗಿ ರಾಜ್ಯದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಪರಿಚಯ ಸಭೆಗಳನ್ನು ನಡೆಸಲಾಗುತ್ತಿದೆ. ಮುಂಬರುವ 2028ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಸಂಘಟನೆಯ ಸಿದ್ಧತೆಗಳನ್ನು ಪರಿಶೀಲಿಸಲಾಗುತ್ತಿದೆ ಎಂದರು.

ಪಕ್ಷದ ಸಂಘಟನಾತ್ಮಕ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವುದು, ಜನಪರ ಸಮಸ್ಯೆಗಳನ್ನು ಗುರುತಿಸಿ ಹೋರಾಟ ನಡೆಸುವುದು ಹಾಗೂ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿವಿಧ ಜನಪರ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವುದು ನಮ್ಮ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ಚುನಾವಣೆಗೂ ಮುನ್ನ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ. ಕಾಂಗ್ರೆಸ್ ಸರ್ಕಾರದ ವಾಗ್ದಾನ ಭಂಗ ಹಾಗೂ ಆಡಳಿತ ವೈಫಲ್ಯಗಳನ್ನು ಜನರ ಮುಂದಿಡುವ ಮೂಲಕ ಪಕ್ಷದ ಹೋರಾಟವನ್ನು ಮುಂದುವರಿಸಲಾಗುವುದು ಎಂದರು.

ಮುಂಬರುವ ದಿನಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ಎನ್‌ಡಿಎ ಮೈತ್ರಿಕೂಟ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿ ಜನರ ವಿಶ್ವಾಸ ಗಳಿಸಲಿದೆ. ಕರ್ನಾಟಕದ ಜನತೆ ಮತ್ತೊಮ್ಮೆ ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ ಪ್ರಚಂಡ ಬಹುಮತದ ಆಶೀರ್ವಾದ ಮಾಡಲಿದ್ದಾರೆ ಎಂಬ ವಿಶ್ವಾಸವಿದೆ ಎಂದರು.

ಮಾಜಿ ಸಂಸದ ಡಾ. ಉಮೇಶ್‌ ಜಾಧವ್‌, ಸಹ ಉಸ್ತುವಾರಿ ಕಾಸಂ ವೆಂಕಟೇಶ್ವರ, ರಾಜ್ಯ ಕಾರ್ಯದರ್ಶಿ ಪಿ.ರಾಜೀವ, ಯಾದಗಿರಿ ಜಿಲ್ಲಾಧ್ಯಕ್ಷ ಬಸವರಾಜಪ್ಪ ವಿಭೂತಿಹಳ್ಳಿ, ಮಾಜಿ ಸಚಿವ ರಾಜೂಗೌಡ, ಕಲಬುರಗಿ ಜಿಲ್ಲಾಧಕ್ಷ ಅಶೋಕ ಬಗಲಿ, ಬೀದರ್‌ ಜಿಲ್ಲಾಧ್ಯಕ್ಷ ಸೊಮನಾಥ ಪಾಟೀಲ್, ಶಾಸಕರಾದ ಶೈಲೇಂದ್ರ ಬೆಲ್ದಾಳೆ, ಸಿದ್ದು ಪಾಟೀಲ್, ಎಂಎಲ್ಸಿ ಬಿ.ಜಿ. ಪಾಟೀಲ್, ಮಾಜಿ ಶಾಸಕ ಸುಭಾಷ್ ಗುತ್ತೆದಾರ, ದತ್ತಾತ್ರೇಯ ಪಾಟೀಲ, ರಾಜ್ಯ ಕಾರ್ಯದರ್ಶಿ ಲಲಿತಾ ಅನಪುರ, ಹಿರಿಯ ಮುಖಂಡ ರಾಚನಗೌಡ ಮುದ್ನಾಳ, ರಾಜ್ಯ ಕಾರ್ಯಕಾರಿಣಿ ಸದಸ್ಯ ಮಹೇಶರಡ್ಡಿ ಮುದ್ನಾಳ, ನಿಕಟಪೂರ್ವ ಜಿಲ್ಲಾಧ್ಯಕ್ಷ ಅಮೀನರೆಡ್ಡಿ ಯಾಳಗಿ, ದೇವಿಂದ್ರನಾಥ ನಾದ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೇಲಪ್ಪ ಗುಳಗಿ ಮತ್ತು ಪರುಶುರಾಮ ಕುರಕುಂದಿ, ಶಿವರಾಜ್ ದೇಶಮುಖ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾಲೀಕರ ಮನೆ ಬೀಗ ಕದ್ದು ನಕಲಿಕೀ ಮಾಡಿಸಿ ಚಿನ್ನ ದೋಚಿದ ದಂಪತಿ
1154 ಮಸಾಜ್ ಪಾರ್ಲರ್, ಸ್ಪಾ ಮೇಲೆ ದಾಳಿ