ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿ ಶಾಸಕ ಕೆ.ಎನ್.ರಾಜಣ್ಣ
ಯಾದವ ಜನಾಂಗ ನಮ್ಮ ಮೇಲೆ ಇಟ್ಟಿರುವ ಪ್ರೀತಿ, ವಿಶ್ವಾಸ ಎಂದಿಗೂ ಮರೆಯಲಾರೆ ಎಂದು ಶಾಸಕ ಕೆ.ಎನ್.ರಾಜಣ್ಣ ತಿಳಿಸಿದರು.
ತಾಲೂಕಿನ ಮಿಡಿಗೇಶಿ ಹೋಬಳಿ ಲಕ್ಲಿಹಟ್ಟಿಯಲ್ಲಿ ಇತ್ತಿಚೆಗೆ ಕಂದಾಯ ಇಲಾಖೆಯಿಂದ ಆಯೋಜಿಸಿದ್ದ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿ ಮಾತನಾಡಿದರು.ನಾನು ಕ್ಷೇತ್ರಕ್ಕೆ ಪಾದರ್ಪಣೆ ಮಾಡಿದ ಅಂದಿನಿಂದಲೂ ಸಹ ಇಲ್ಲಿವರೆಗೂ ಮಧುಗಿರಿ ಕ್ಷೇತ್ರದ ಮತದಾರರು ನನ್ನ ಕೈ ಹಿಡಿದಿದ್ದು, ನಲೇಕಾಮನಹಳ್ಲಿ, ಲಕ್ಲಿಹಟ್ಟಿ ಎಂದು ತಹಸೀಲ್ದಾರ್ ತಮ್ಮ ದಾಖಲೆಗಳಲ್ಲಿ ಬರೆಯುತ್ತಿದ್ದರು. ಆದರೆ ಪ್ರಸ್ತುತ ನಿಮ್ಮ ಗ್ರಾಮವನ್ನು ಲಕ್ಲಿಹಟ್ಟಿ ಗ್ರಾಮವೆಂದು ನಮೂದಿಸುತ್ತಿದ್ದು, ಇಡೀ ರಾಜ್ಯದಲ್ಲಿ ಲಂಬಾಣಿ ತಾಂಡ, ಗೊಲ್ಲರಹಟ್ಟಿ, ವಡ್ಡರಹಟ್ಟಿ ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಕೆಲ ನಾಯಕರ ಹಟ್ಟಿಗಳಿವೆ,
ತಮ್ಮ ಕಷ್ಟ ಕಾರ್ಪಣ್ಯಗಳು ದೂರವಾಗವಾಗಬೇಕಾದರೆ ಪೋಷಕರು ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು. ಮಕ್ಕು ಸಮಾಜಕ್ಕೆ ಆಸ್ತಿಯಾಗಬೇಕು. ಗ್ರಾಮಗಳಲ್ಲಿ ಸಣ್ಣ ಪುಟ್ಟ ಸಮಸ್ಯೆಗಳು ಎದುರದಾಗ ಹಿರಿಯರು ಮಧ್ಯೆ ಪ್ರವೇಶಿಸಿ ಬಗೆಹರಿಸಿಕೊಳ್ಳಿ. ರಾಜಕೀಯ ವೈಷಮ್ಯಗಳನ್ನು ಬೆಳಸಿಕೊಳ್ಳಬೇಡಿ ಎಂದರು.
ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಜಿ.ಜೆ.ರಾಜಣ್ಣ, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಚಂದ್ರಶೇಖರಗೌಡ, ಎಸಿ ಗೋಟೂರು ಶಿವಪ್ಪ, ತಹಸೀಲ್ದಾರ್ ಶ್ರೀನಿವಾಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಪಾಲಯ್ಯ, ಇಒ ಲಕ್ಷ್ಮಣ್, ಎಡಿಒ ಧನಂಜಯ್, ಎಸ್.ಎನ್.ರಾಜು ಇತರರಿದ್ದರು.