ಗಡಿ ವಿಷಯದಲ್ಲಿ ಮಹಾಜನ್‌ ವರದಿಯೇ ಅಂತಿಮ

KannadaprabhaNewsNetwork |  
Published : Oct 02, 2026, 03:00 AM IST
ಬೆಳಗಾವಿ  | Kannada Prabha

ಸಾರಾಂಶ

ಗಡಿ ವಿಷಯದಲ್ಲಿ ಮಹಾಜನ್‌ ವರದಿಯೇ ಅಂತಿಮ, ಬೆಳಗಾವಿ ಪಾಲಿಕೆಯ ನಿರ್ಣಯ, ಜಿಲ್ಲಾ ಕನ್ನಡಪರ ಸಂಘಟನೆಗಳ ಕ್ರಿಯಾ ಸಮಿತಿ ಸ್ವಾಗತ, ಆರು ತಿಂಗಳ ಹೋರಾಟಕ್ಕೆ ಸಂದ ಜಯ

ಕನ್ನಡಪ್ರಭ ವಾರ್ತೆ ಬೆಳಗಾವಿ ಗಡಿ ವಿಷಯದಲ್ಲಿ ಮಹಾಜನ್‌ ವರದಿಯೇ ಅಂತಿಮ ಎಂಬ ಐತಿಹಾಸಿಕ ನಿರ್ಣಯವನ್ನು ಬೆಳಗಾವಿ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಅಂಗೀಕರಿಸಿರುವುದು ಆರು ತಿಂಗಳ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ಜಿಲ್ಲಾ ಕನ್ನಡಪರ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬುದನ್ನು ಪ್ರತಿಪಾದಿಸುವ ನಿರ್ಣಯವನ್ನು ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಅಂಗೀಕರಿಸಬೇಕೆಂದು ಕಳೆದ ಆರು ತಿಂಗಳಿಂದ ಹೋರಾಟ ನಡೆಸಲಾಗಿತ್ತು. ವಿವಿಧ ಕಾರಣಗಳಿಂದ ಬೇಡಿಕೆ ಈಡೇರದೆ ವಿಳಂಬವಾಗಿತ್ತು. ಆದರೆ, ಇದೀಗ ರಾಜ್ಯ ಸರ್ಕಾರದ ನಿರ್ದೇಶನದ ಮೇರೆಗೆ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಮಹಾಜನ್‌ ಆಯೋಗದ ಶಿಫಾರಸುಗಳೇ ಅಂತಿಮ ಎಂಬ ನಿರ್ಣಯವನ್ನು ಅಂಗೀಕರಿಸಿರುವುದು ಸ್ವಾಗತಾರ್ಹ ಬೆಳವಣಿಗೆ ಎಂದರು.

ಮಹಾಜನ್‌ ಆಯೋಗದ ಶಿಫಾರಸುಗಳೇ ಅಂತಿಮ ಎಂಬ ಶಾಸಕಾಂಗದ ನಿರ್ಣಯದಂತೆ ಪಾಲಿಕೆಯಲ್ಲೂ ನಿರ್ಣಯ ಅಂಗೀಕರಿಸುವಂತೆ ರಾಜ್ಯ ಸರ್ಕಾರ ಆಗಸ್ಟ್‌ 29ರಂದು ಪಾಲಿಕೆಗೆ ಪತ್ರ ಬರೆದಿತ್ತು. ಅದರಂತೆ ಇದೀಗ ನಿರ್ಣಯ ಅಂಗೀಕರಿಸಲಾಗಿದೆ ಎಂದು ತಿಳಿಸಿದರು.

2005ರಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ ಬೆಂಬಲಿತ ಸದಸ್ಯರು ಬಹುಮತದಲ್ಲಿದ್ದಾಗ ಬೆಳಗಾವಿ ಸೇರಿದಂತೆ ರಾಜ್ಯದ ಇತರೆ ಮರಾಠಿ ಭಾಷಿಕ ಪ್ರದೇಶಗಳನ್ನು ಮಹಾರಾಷ್ಟ್ರದೊಂದಿಗೆ ವಿಲೀನಗೊಳಿಸಬೇಕೆಂದು ಆಗ್ರಹಿಸಿ ಪಾಲಿಕೆಯಲ್ಲಿ ನಿರ್ಣಯ ಅಂಗೀಕರಿಸಲಾಗಿತ್ತು. ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರವು 2004ರಲ್ಲಿ ಸುಪ್ರೀಂಕೋರ್ಟ್‌ನಲ್ಲಿ ದಾಖಲಿಸಿರುವ ದಾವೆಯಲ್ಲಿ ಆ ನಿರ್ಣಯವನ್ನು ದಾಖಲೆಯಾಗಿ ಬಳಸಲಾಗಿದೆ. ಇದೀಗ ಪಾಲಿಕೆಯಲ್ಲಿ ಅಂಗೀಕರಿಸಿರುವ ನಿರ್ಣಯ ಅದಕ್ಕೆ ಪ್ರತ್ಯುತ್ತರ ನೀಡಲಿದೆ ಎಂದು ಅಭಿಪ್ರಾಯಪಟ್ಟರು.

ಮಹಾನಗರ ಪಾಲಿಕೆಯ ನಿರ್ಣಯದ ಪ್ರತಿಯಲ್ಲಿ ‘ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ’ ಎಂಬುದನ್ನು ಸ್ಪಷ್ಟವಾಗಿ ಉಲ್ಲೇಖಿಸಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಗಡಿ ವಿಷಯದಲ್ಲಿ ಮಹಾಜನ್‌ ವರದಿಯೇ ಅಂತಿಮ ಎಂಬ ನಿರ್ಣಯದ ಅರ್ಥವೂ ಅದೇ ಆಗಿದೆ. ಮಹಾರಾಷ್ಟ್ರದ ಕೆಲವು ನಾಯಕರ ಒತ್ತಡದಿಂದಲೂ ಪಾಲಿಕೆಯಲ್ಲಿ ನಾಡಿನ ಪರ ನಿರ್ಣಯ ಅಂಗೀಕಾರಕ್ಕೆ ವಿಳಂಬವಾಗಿದೆ ಎಂದು ಚಂದರಗಿ ಆರೋಪಿಸಿದರು.ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಮಹಾದೇವ ತಳವಾರ, ಬಲರಾಮ ಮಾಸೇನಟ್ಟಿ, ಮಹೇಶ ಶೀಗಿಹಳ್ಳಿ, ಸಯ್ಯದ್‌ ಮನ್ಸೂರ್‌, ವೀರೇಂದ್ರ ಗೊಬರಿ ಇದ್ದರು.

----

ಬಾಕ್ಸ್‌ಶ್ರವಣ ನಾಯಕ ನೇಮಕ ಕಾನೂನು ಬಾಹಿರ

ಪಾಲಿಕೆಯ ಸಾಮಾನ್ಯ ಸಭೆಗೆ ಬೆಳಗಾವಿ ಉಪವಿಭಾಗಾಧಿಕಾರಿ ಶ್ರವಣ ನಾಯಕ ಅವರನ್ನು ವೀಕ್ಷಕರಾಗಿ ನೇಮಿಸಿದ ಜಿಲ್ಲಾಧಿಕಾರಿ ಕ್ರಮ ಕಾನೂನುಬಾಹಿರ ಎಂದು ಮೇಯರ್‌ ಪ್ರೀತಿ ಕಾಮಕರ್‌ ನಿರ್ಣಯ ಅಂಗೀಕರಿಸಿರುವುದನ್ನು ಖಂಡಿಸಿದರು. ಪಾಲಿಕೆಯು ಸರ್ಕಾರದ ವ್ಯಾಪ್ತಿಗೆ ಒಳಪಡುವ ಸಂಸ್ಥೆಯಾಗಿರುವುದರಿಂದ ಸಭೆಗೆ ವೀಕ್ಷಕರನ್ನು ಜಿಲ್ಲಾಧಿಕಾರಿ ನಿಯೋಜಿಸಿದ್ದಾರೆ. ಈ ವಿಚಾರದಲ್ಲಿ ಮೇಯರ್‌ ಮತ್ತು ಉಪಮೇಯರ್‌ ಪಾಲಿಕೆ ಸ್ವತಂತ್ರ ಸಂಸ್ಥೆಯಂತೆ ವರ್ತಿಸುತ್ತಿದ್ದಾರೆ. ಅಲ್ಲದೇ, 15 ದಿನಗಳ ಒಳಗೆ ಮೇಯರ್‌, ಉಪಮೇಯರ್‌ ಅವರನ್ನು ಬದಲಿಸಬೇಕು. ಇಲ್ಲದಿದ್ದರೆ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯಿಂದ ಹೋರಾಟ ಅನಿವಾರ್ಯವಾಗಲಿದೆ ಎಂದು ಅಶೋಕ ಚಂದರಗಿ ಎಚ್ಚರಿಕೆಯನ್ನು ನೀಡಿದರು.ಕನ್ನಡಪ್ರಭ ವಾರ್ತೆ ಬೆಳಗಾವಿ ಗಡಿ ವಿಷಯದಲ್ಲಿ ಮಹಾಜನ್‌ ವರದಿಯೇ ಅಂತಿಮ ಎಂಬ ಐತಿಹಾಸಿಕ ನಿರ್ಣಯವನ್ನು ಬೆಳಗಾವಿ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಅಂಗೀಕರಿಸಿರುವುದು ಆರು ತಿಂಗಳ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ಜಿಲ್ಲಾ ಕನ್ನಡಪರ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿಫಲತೆಯಿಂದ ಕುಗ್ಗದೆ ನಿರಂತರ ಪ್ರಯತ್ನವೇ ಯಶಸ್ಸಿನ ಗುಟ್ಟು
ಮಕ್ಕಳಿಗೆ ಗೂಗಲ್‌ ಗುರುವಿನ ಜ್ಞಾನ ಅಗತ್ಯ