ಕನ್ನಡಪ್ರಭ ವಾರ್ತೆ ಬೆಳಗಾವಿ
ಕಾರ್ಖಾನೆಯಲ್ಲಿ ಐದು ದಿನಗಳ ಹಿಂದೆ ಸಂಭವಿಸಿದ ಟರ್ಬೈನ್ ಸ್ಫೋಟದಿಂದ ಕಬ್ಬು ನುರಿಸುವ ಹಂಗಾಮಿಗೆ ಅಡಚಣೆಯಾಗಿದೆ. ಈಗಾಗಲೇ ಆರ್ಥಿಕ ಸಂಕಷ್ಟದಲ್ಲಿರುವ ಕಾರ್ಖಾನೆಗೆ ಈ ಅವಘಡದಿಂದ ಕೋಟ್ಯಂತರ ರೂಪಾಯಿ ನಷ್ಟವಾಗಿದೆ. ಆಡಳಿತ ಮಂಡಳಿಯ ಅನುಭವದ ಕೊರತೆ, ಮುನ್ನೆಚ್ಚರಿಕೆ ಕ್ರಮಗಳ ನಿರ್ಲಕ್ಷ್ಯ ಹಾಗೂ ಆಡಳಿತ ವೈಫಲ್ಯವೇ ಘಟನೆಗೆ ಕಾರಣ ಎಂದು ಮನವಿಯಲ್ಲಿ ಆರೋಪಿಸಿದ್ದಾರೆ.
ಕಾರ್ಖಾನೆ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮತ್ತು ಆಡಳಿತ ಮಂಡಳಿ ಸದಸ್ಯರು ಈ ಅವಘಡದ ಹೊಣೆ ಹೊತ್ತುಕೊಳ್ಳಬೇಕು. ರಾಜಕೀಯ ಪ್ರಭಾವ ಇರುವುದರಿಂದ ತನಿಖೆ ಯಾವುದೇ ಒತ್ತಡಕ್ಕೆ ಮಣಿಯದೆ ಪಾರದರ್ಶಕವಾಗಿ ನಡೆಯಬೇಕು. ಕಾರ್ಖಾನೆಯ ನಷ್ಟದ ಭಾರವನ್ನು ರೈತರ ಮೇಲೆ ಹೊರಿಸದೆ ಜವಾಬ್ದಾರರನ್ನೇ ಹೊಣೆಗಾರರನ್ನಾಗಿ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.ಟರ್ಬೈನ್ ಸ್ಫೋಟದ ಕುರಿತು ವಿಶೇಷ ತನಿಖಾ ತಂಡ ರಚಿಸಿ ಸಮಗ್ರ ತನಿಖೆ ನಡೆಸಬೇಕು. ಅವಘಡಕ್ಕೆ ಕಾರಣರಾದವರನ್ನು ಪತ್ತೆಹಚ್ಚಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಕಾರ್ಖಾನೆಗೆ ಉಂಟಾಗಿರುವ ಆರ್ಥಿಕ ನಷ್ಟವನ್ನು ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯವರಿಂದಲೇ ಭರಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.