ವೈದ್ಯಕೀಯ ಕ್ಷೇತ್ರ ಅತ್ಯಂತ ಪವಿತ್ರವಾದುದು: ಡಾ.ಶುಭಾ

KannadaprabhaNewsNetwork |  
Published : Nov 06, 2026, 01:30 AM IST
ಪೋಟೋ 5 : ದಾಬಸ್‍ಪೇಟೆ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ  ಆಯುಧಪೂಜೆ ಕಾರ್ಯಕ್ರಮದಲ್ಲಿ ಆಸ್ಪತ್ರೆ ಸಿಬ್ಬಂದಿ ವರ್ಗದವರು ಪೂಜಾ ಕಾರ್ಯದಲ್ಲಿ ಭಾಗಿಯಾಗಿರುವುದು | Kannada Prabha

ಸಾರಾಂಶ

ದಾಬಸ್‍ಪೇಟೆ: ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯುಧಪೂಜೆಯನ್ನು ಶ್ರದ್ಧಾ-ಭಕ್ತಿ ಮತ್ತು ಸಡಗರದಿಂದ ಆಚರಿಸಲಾಯಿತು

ದಾಬಸ್‍ಪೇಟೆ: ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯುಧಪೂಜೆಯನ್ನು ಶ್ರದ್ಧಾ-ಭಕ್ತಿ ಮತ್ತು ಸಡಗರದಿಂದ ಆಚರಿಸಲಾಯಿತು.

ವೈದ್ಯಾಧಿಕಾರಿ ಡಾ.ಶುಭಾ ದೇವರಿಗೆ ಪೂಜೆ ಸಲ್ಲಿಸಿ ಮಾತನಾಡಿ ವೈದ್ಯಕೀಯ ಕ್ಷೇತ್ರವು ಅತ್ಯಂತ ಪವಿತ್ರವಾದದ್ದು, ನಮಗೆ ನಾವು ಬಳಸುವ ವೈದ್ಯಕೀಯ ಉಪಕರಣಗಳೇ ದೈವಸ್ವರೂಪ. ಆಸ್ಪತ್ರೆಗೆ ಬರುವ ಪ್ರತಿಯೊಬ್ಬ ರೋಗಿಯೂ ಶೀಘ್ರವಾಗಿ ಗುಣಮುಖರಾಗಲಿ, ಗ್ರಾಮೀಣ ಭಾಗದ ಜನತೆಗೆ ತಾಯಿ ಚಾಮುಂಡೇಶ್ವರಿ ಆಯುಷ್ಯ, ಆರೋಗ್ಯ ಕರುಣಿಸಲಿ ಎಂದು ಪ್ರಾರ್ಥಿಸಲಾಗಿದೆ ಎಂದು ತಿಳಿಸಿದರು.

ಆರೋಗ್ಯ ನಿರೀಕ್ಷಣಾಧಿಕಾರಿ ಅಶ್ವಿನಿ ಮಾತನಾಡಿ, ಆಸ್ಪತ್ರೆಯ ಒಳರೋಗಿಗಳಿಗೆ ಹಬ್ಬದ ವಾತಾವರಣದ ಅನುಭವ ನೀಡಲು ನಾವೆಲ್ಲರೂ ಸೇರಿ ಆಸ್ಪತ್ರೆಯನ್ನು ಅಲಂಕರಿಸಿದ್ದೇವೆ. ರೋಗಿಗಳ ಮುಖದಲ್ಲಿ ನಗು ನೋಡುವುದೇ ನಮಗೆ ನಿಜವಾದ ಹಬ್ಬ. ಆಯುಧಪೂಜೆಯ ಈ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಎಲ್ಲಾ ರೋಗಿಗಳು ಶೀಘ್ರ ಗುಣಮುಖರಾಗಿ ಮನೆಗೆ ಮರಳಲಿ ಎಂದು ದೇವರಲ್ಲಿ ಬೇಡಿಕೊಂಡಿದ್ದೇವೆ ಎಂದರು.

ಪೂಜಾ ಕಾರ್ಯಕ್ರಮದಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಒಳರೋಗಿಗಳಿಗೆ, ಅವರ ಸಂಬಂಧಿಕರಿಗೆ ಹಾಗೂ ಆಸ್ಪತ್ರೆಗೆ ಭೇಟಿ ನೀಡಿದ್ದ ಸಾರ್ವಜನಿಕರಿಗೆ ಹಣ್ಣು, ಸಿಹಿ ಮತ್ತು ಪ್ರಸಾದ ವಿತರಿಸಲಾಯಿತು.

ಈ ಸಂದರ್ಭದಲ್ಲಿ ವೈದ್ಯಾಧಿಕಾರಿ ಡಾ.ರಮೇಶ್, ಆಸ್ಪತ್ರೆಯ ಸಿಬ್ಬಂದಿ ವರ್ಗದವರಾದ ಜಯಲಕ್ಷ್ಮೀ, ಜಯಲಕ್ಷ್ಮಮ್ಮ, ಸುಧಾ, ಕಾಂತಮ್ಮ, ರಮ್ಯಾ ಸೇರಿದಂತೆ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಪೋಟೋ 5 :

ದಾಬಸ್‍ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ಆಯುಧಪೂಜೆ ಕಾರ್ಯಕ್ರಮದಲ್ಲಿ ಆಸ್ಪತ್ರೆ ಸಿಬ್ಬಂದಿ ವರ್ಗದವರು ಪೂಜಾ ಕಾರ್ಯದಲ್ಲಿ ಭಾಗಿಯಾಗಿರುವುದು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಳಸಿದ ಕಪ್‌ನಲ್ಲೇ ಪೆಪ್ಸಿ ಸರ್ವ್‌ ಮಾಡಿದ ಪಿವಿಆರ್ ತಿನಿಸು ಮಳಿಗೆ
ಬಿಎಂಟಿಸಿ ಬಸ್‌ ಪಾಸ್‌ ದರ ಹೆಚ್ಚಳ!