ಸ್ವಾತಂತ್ರ‍್ಯಕ್ಕೆ ಹೋರಾಡಿದ ಚೇತನರ ಸ್ಮರಣೆ ಅಗತ್ಯ

KannadaprabhaNewsNetwork |  
Published : Aug 17, 2024, 12:56 AM IST
ಚಿತ್ರದುರ್ಗ ಎರಡನೇ ಪುಟದ ಮಿಡ್ಲ್  | Kannada Prabha

ಸಾರಾಂಶ

ಸ್ವಾತಂತ್ರ‍್ಯಕ್ಕೆ ಹೋರಾಡಿದ ಮಹಾನ್ ಚೇತನಗಳನ್ನು ಸ್ಮರಿಸಿಕೊಳ್ಳುವುದರ ಮೂಲಕ, ಅವರ ತ್ಯಾಗ ಬಲಿದಾನದ ಬಗ್ಗೆ ನಾಟಕ ರೂಪದಲ್ಲಿ ಯುವ ಜನರಿಗೆ ತಿಳಿಸುವ ಕೆಲಸ ಮಾಡಲಾಗುತ್ತಿರುವುದು ಉತ್ತಮ ಕಾರ್ಯವೆಂದು ಸಂಸದ ಗೋವಿಂದ ಎಂ.ಕಾರಜೋಳ ಹೇಳಿದರು.

ಕನ್ನಡಪ್ರಭವಾರ್ತೆ ಚಿತ್ರದುರ್ಗಸ್ವಾತಂತ್ರ‍್ಯಕ್ಕೆ ಹೋರಾಡಿದ ಮಹಾನ್ ಚೇತನಗಳನ್ನು ಸ್ಮರಿಸಿಕೊಳ್ಳುವುದರ ಮೂಲಕ, ಅವರ ತ್ಯಾಗ ಬಲಿದಾನದ ಬಗ್ಗೆ ನಾಟಕ ರೂಪದಲ್ಲಿ ಯುವ ಜನರಿಗೆ ತಿಳಿಸುವ ಕೆಲಸ ಮಾಡಲಾಗುತ್ತಿರುವುದು ಉತ್ತಮ ಕಾರ್ಯವೆಂದು ಸಂಸದ ಗೋವಿಂದ ಎಂ.ಕಾರಜೋಳ ಹೇಳಿದರು.78ನೇ ಸ್ವಾತಂತ್ರ‍್ಯ ಮಹೋತ್ಸವದ ಅಂಗವಾಗಿ ನವದೆಹಲಿಯ ಕೇಂದ್ರ ಸಂಸ್ಕೃತಿ ಮಂತ್ರಾಲಯ, ತಾಂಜಾವೂರಿನ ದಕ್ಷಿಣ ವಲಯ ಸಾಂಸ್ಕೃತಿಕ ಕೇಂದ್ರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ತರಾಸು ರಂಗಮಂದಿರದಲ್ಲಿ ಆಯೋಜಿಸಲಾದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಾಟಕ ಹಾಗೂ ದೇಶಭಕ್ತಿ ಗೀತೆ ಗಾಯನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ದೇಶಕ್ಕಾಗಿ ಹೋರಾಡಿದ ಸೇನಾನಿ ಹಾಗೂ ಯೋಧರು, ಕಲೆ, ಕ್ರೀಡೆ ಸೇರಿದಂತೆ ಇನ್ನೀತರ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಸ್ವಾತಂತ್ರ‍್ಯ ಮಹೋತ್ಸವ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಗುತ್ತಿದೆ. ಈ ಮೂಲಕ ಇನ್ನಷ್ಟು ಸಾಧನೆ ಮಾಡಲು ಪ್ರೇರೇಪಿಸಲಾಗುತ್ತಿದೆ. ನಾಡಿನ ಪರಂಪರೆ ಕಲೆ ಸಂಸ್ಕೃತಿಗಳನ್ನು ಅನಾವರಣ ಮಾಡಲು ಅನೇಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ.

ಹರ್ ಘರ್ ತಿರಂಗಾ ಎನ್ನುವ ಪ್ರಧಾನಿ ನರೇಂದ್ರ ಮೋದಿ ಅವರ ಕರೆಗೆ ಓಗೊಟ್ಟು, ದೇಶದ ಜನತೆ ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸಿ ದೇಶಪ್ರೇಮ ಮೆರೆದಿದ್ದಾರೆ ಎಂದರು.ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಮಾತನಾಡಿ, ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸುವುದರೊಂದಿಗೆ ನಮ್ಮ ಮನಗಳಲ್ಲಿಯೂ ರಾಷ್ಟ್ರಭಕ್ತಿ ಅನಾವರಣ ಆಗಬೇಕು. ದೇಶದ ಸಂವಿಧಾನಕ್ಕೆ ಗೌರವ ಸಲ್ಲಿಸುವುದರ ಜತೆಗೆ, ದೇಶದ ಪ್ರತಿಯೊಬ್ಬರನ್ನು ಭಾವೈಕ್ಯತೆ ಮನೋಭಾವದಿಂದ ಕಾಣಬೇಕು ಎಂದರು. ಕಾರ್ಯಕ್ರಮದಲ್ಲಿ ವಿವಿಧ ಕಲಾತಂಡಗಳಿಂದ ಪ್ರಸ್ತುತ ಪಡಿಸಿದ ದೇಶಭಕ್ತಿ ಗೀತೆಗಳು, ಸಭಿಕರಲ್ಲಿ ದೇಶಪ್ರೇಮ ಹಾಗೂ ದೇಶಭಕ್ತಿ ಅನುರಣಿಸುವಂತೆ ಮಾಡಿದವು. ಇದೇ ಸಂದರ್ಭದಲ್ಲಿ ವೀರ ಸಂಗೊಳ್ಳಿ ರಾಯಣ್ಣ ನಾಟಕ ಪ್ರದರ್ಶಿಸಲಾಯಿತು.

ಜಿಲ್ಲಾ ವಾರ್ತಾಧಿಕಾರಿ ಬಿ.ವಿ. ತುಕಾರಾಂ ರಾವ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ್, ಆಹಾರ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ. ಮಲ್ಲಿಕಾರ್ಜುನ್, ಸಾಂಸ್ಕೃತಿಕ ಸಂಘಟಕ ಮಂಜುನಾಥ್, ಕಲಾವಿದರಾದ ಡಿ.ಓ. ಮುರಾರ್ಜಿ, ಹರೀಶ್, ಶೋಭಾರಾಣಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಕಲಾವಿದರು ಇದ್ದರು.-

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ