ಕನ್ನಡಪ್ರಭ ವಾರ್ತೆ ವಿಜಯಪುರ
ನಗರದ ಜ್ಞಾನಯೋಗಾಶ್ರಮದಲ್ಲಿ ಸೋಮವಾರ ಜ್ಞಾನಯೋಗಿ ಸಿದ್ದೇಶ್ವರ ಮಹಾಸ್ವಾಮಿಗಳವರ ಗುರುನಮನ ಮಹೋತ್ಸವ ಅಂಗವಾಗಿ ಜಾಗತಿಕ ಆಧ್ಯಾತ್ಮಿಕ ಚಿಂತನೆ ವಿಷಯದ ಕುರಿತು ನಡೆದ 3ನೇ ಗೋಷ್ಠಿಗೆ ಚಾಲನೆ ನೀಡಿ ಅವರು ಮಾತನಾಡಿದರು.ಅಪ್ಪನವರು ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಯಾವುದೇ ಅಪೇಕ್ಷೆ ಪಡದೆ ನಾವು ಬದುಕಬೇಕು. ಸಣ್ಣ-ಪುಟ್ಟ ವಿಷಯಗಳಿಗೆ ಜಗಳವಾಡುವುದನ್ನು ಬಿಟ್ಟು ನಿಸ್ವಾರ್ಥದಿಂದ ಬದುಕಬೇಕು. ಅಂದಾಗ ನಮ್ಮ ಬದುಕು ಸುಂದರವಾಗಲು ಸಾಧ್ಯ ಎನ್ನುತ್ತಿದ್ದರು. ಅವರು ಹೇಳಿದ ಮಾತು ನಾವು ಪಾಲಿಸಿದ್ದೇ ಆದಲ್ಲಿ ಉತ್ತಮ ಬದುಕು, ಸದೃಢ ಸಮಾಜ ಕಟ್ಟಲು ಸಾಧ್ಯ ಎಂದು ಹೇಳಿದರು.
ಧರ್ಮ ನಮ್ಮನ್ನು ಸಂಘಟಿಸಲು ಇದೆ. ಬೇರೆ ಧರ್ಮಗಳನ್ನು ಪ್ರೀತಿಸಿ, ವಿಶ್ವಾಸದಿಂದ ಬದುಕಬೇಕು. ನಾವು ಸತ್ತ ಮೇಲೆ ನಮಗೆ ಯಾವ ಜಾತಿ ಧರ್ಮವೂ ಇರುವುದಿಲ್ಲ. ನನ್ನ ಸಾವಿನ ನಂತರ ನಮ್ಮ ಹೆಸರು ಸಹ ಉಳಿಯುವುದಿಲ್ಲ. ಹೀಗಾಗಿ ನಾವು ಎಂದಿಗೂ ಪ್ರೀತಿ, ವಿಶ್ವಾಸದಿಂದ ಬದುಕಬೇಕು. ಈ ನಿಟ್ಟಿನಲ್ಲಿ ಸದಾಕಾಲ ಪ್ರೇರೇಪಿಸುತ್ತಿದ್ದ ಶ್ರೀ ಸಿದ್ಧೇಶ್ವರ ಸ್ವಾಮೀಜಿಯವರಿಗೆ ನಾವೆಲ್ಲರೂ ಸದಾ ಚಿರಋಣಿ ಎಂದರು.ತೇರದಾಳ ಮತಕ್ಷೇತ್ರದ ಶಾಸಕ ಸಿದ್ದು ಸವದಿ ಮಾತನಾಡಿ, ಮಕ್ಕಳು ಮೊಬೈಲ್ ಗೀಳಿಗೆ ಬಿದ್ದು ಎಲ್ಲವನ್ನು ಮರೆಯುತ್ತಿದ್ದಾರೆ. ಅದರಿಂದ ಅವರನ್ನು ಹೊರತಂದು ನಮ್ಮ ಸಂಸ್ಕೃತಿ, ಅಧ್ಯಾತ್ಮದತ್ತ ಚಿತ್ತ ಕೊಡುವಂತೆ ನೋಡಿಕೊಳ್ಳಬೇಕು ಎಂದರು.
ಬೀದರನ ಚಿದಂಬರ ಆಶ್ರಮದ ಶಿವಕುಮಾರ ಮಹಾಸ್ವಾಮೀಜಿಯವರು ಆಶೀರ್ವಚನ ನೀಡಿದರು. ಆಶ್ರಮದ ಅಧ್ಯಕ್ಷ ಬಸವಲಿಂಗ ಸ್ವಾಮೀಜಿ, ಅಖಿಲ ಭಾರತೀಯ ವೀರಶೈವ ಮಹಾಸಭಾ ಅಧ್ಯಕ್ಷ ವಿ.ಸಿ. ನಾಗಠಾಣ,ಶ್ರದ್ಧಾನಂದ ಮಹಾಸ್ವಾಮೀಜಿ ಇತರರು ಇದ್ದರು.