ಕರ್ನಾಟಕ ಸುವರ್ಣ ಸ್ತಂಭಕ್ಕೆ ಪೂಜೆ ಸಲ್ಲಿಸಿದ ಸಚಿವ ಡಾ. ಎಚ್.ಕೆ.ಪಾಟೀಲ

KannadaprabhaNewsNetwork |  
Published : Nov 03, 2023, 12:31 AM IST
ಪೋಟೋ ಇದೆ. | Kannada Prabha

ಸಾರಾಂಶ

ಕರ್ನಾಟಕ ನಾಮಕರಣಗೊಂಡು 50 ವರ್ಷಗಳ ಸವಿನೆನಪಿಗಾಗಿ ಗದಗ ನಗರದ ಭೂಮರಡ್ಡಿ ವೃತ್ತದಲ್ಲಿ ನಿರ್ಮಿಸಲಾದ 31 ಅಡಿ ಎತ್ತರದ ಕರ್ನಾಟಕ ಸುವರ್ಣ ಸ್ತಂಭಕ್ಕೆ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ. ಪಾಟೀಲ ಅವರು ಪೂಜೆ ಸಲ್ಲಿಸಿದರು.

ಗದಗ: ಮೈಸೂರು ರಾಜ್ಯ ನಾಮಕರಣಗೊಂಡು 50 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಗದಗ ನಗರದ ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮವನ್ನು ಮರುಸೃಷ್ಟಿಸಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಕರ್ನಾಟಕ ನಾಮಕರಣಗೊಂಡು 50 ವರ್ಷಗಳ ಸವಿನೆನಪಿಗಾಗಿ ಗದಗ ನಗರದ ಭೂಮರಡ್ಡಿ ವೃತ್ತದಲ್ಲಿ ನಿರ್ಮಿಸಲಾದ 31 ಅಡಿ ಎತ್ತರದ ಕರ್ನಾಟಕ ಸುವರ್ಣ ಸ್ತಂಭಕ್ಕೆ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ. ಪಾಟೀಲ ಅವರು ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ರೋಣ ಶಾಸಕರಾದ ಜಿ.ಎಸ್. ಪಾಟೀಲ, ಗದಗ-ಬೆಟಗೇರಿ ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ, ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್., ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡರ, ಯುವಜನಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಶರಣು ಗೊಗೇರಿ, ಜನಪ್ರತಿನಿಧಿಗಳು, ಗಣ್ಯರು, ಸಾರ್ವಜನಿಕರು ಉಪಸ್ಥಿತರಿದ್ದರು.

PREV

Recommended Stories

ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ
ಡಾ.ರಾಜ್‌ಕುಮಾರ್‌ರ ನೆಚ್ಚಿನ ಸಹೋದರಿ ನಾಗಮ್ಮ ನಿಧನ