ಕನ್ನಡಪ್ರಭ ವಾರ್ತೆ ಶಿವಮೊಗ್ಗ
ವೇದಿಕೆ ಸೇರಿದಂತೆ ಪೆಂಡಾಲ್ ವ್ಯವಸ್ಥೆ ಕುರಿತು ಪರಿಶೀಲಿಸಿದರು. ಒಂದು ಲಕ್ಷ ಯುವಜನರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅವರಿಗೆ ಯಾವುದೇ ಸಮಸ್ಯೆ ಆಗದಂತೆ ನಿರ್ವಹಣೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.- - -
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾನುವಾರ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳ ಪ್ರಾಂಶುಪಾಲರೊಂದಿಗೆ ಸಚಿವ ಮಧು ಬಂಗಾರಪ್ಪ ಸಭೆ ನಡೆಸಿದರು. ಸೌಲಭ್ಯ ಪಡೆಯುವ ಯುವ ವಿದ್ಯಾರ್ಥಿಗಳು ಚಾಲನಾ ಕಾರ್ಯಕ್ರಮಕ್ಕೆ ಬರುವಂತಾಗಬೇಕು. ಅವರಿಗೆ ಅಗತ್ಯ ಮಾಹಿತಿ ನೀಡಬೇಕು. ಈ ಕಾರ್ಯಕ್ರಮಕ್ಕೆ ಜಿಲ್ಲೆ ಹಾಗೂ ನೆರೆಯ ಜಿಲ್ಲೆಯ ಅಂದಾಜು ಒಂದು ಲಕ್ಷಕ್ಕೂ ಹೆಚ್ಚಿನ ಜನ ಸೇರುವ ನಿರೀಕ್ಷೆ ಇದೆ ಎಂದು ತಿಳಿಸಿದರು.
ಶಿವಮೊಗ್ಗದಲ್ಲಿ ರಾಜ್ಯ ಸರ್ಕಾರದ ಐದನೆ ಪ್ರಮುಖ ಗ್ಯಾರಂಟಿ ಯೋಜನೆ ಯುವನಿಧಿಗೆ ಜ.12ರಂದು ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿರುವ ಹಿನ್ನೆಲೆ ಕಾರ್ಯಕ್ರಮದ ಸಿದ್ಧತೆ ಪರಿಶೀಲನೆಗೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಭಾನುವಾರ ಫ್ರೀಡಂ ಪಾರ್ಕ್‌ಗೆ ಭೇಟಿ ಸ್ಥಳ ಪರಿಶೀಲನೆ ನಡೆಸಿದರು.