ಕನ್ನಡಪ್ರಭ ವಾರ್ತೆ ಮಂಗಳೂರು
ಮಂಗಳೂರು ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಶುಕ್ರವಾರ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನಾ ಸಭೆ ನಡೆಸಿದರು.
ಸಭೆಯಲ್ಲಿ ಮಾಹಿತಿ ನೀಡಿದ ಸ್ಮಾರ್ಟ್ ಸಿಟಿ ಜನರಲ್ ಮ್ಯಾನೇಜರ್ ಅರುಣ್ ಪ್ರಭ, ವಾಟರ್ ಫ್ರಂಟ್ ಯೋಜನೆಯಡಿ ನದಿ ಕಿನಾರೆಯ 2.1 ಕಿಮೀ ವ್ಯಾಪ್ತಿಯಲ್ಲಿ ತಡೆಗೋಡೆ, ವಾಕಿಂಗ್ ಟ್ರ್ಯಾಕ್, ಯೋಗ ಸೆಂಟರ್, ಕಿಯಾಸ್ಕ್‌ಗಳನ್ನು ಮಾಡಲಾಗುತ್ತಿದ್ದು, ಶೇ.10ರಷ್ಟು ಕಾಮಗಾರಿ ಆಗಿದೆ, ಅದಕ್ಕಾಗಿ 70 ಕೋಟಿ ರು. ನಿಗದಿಪಡಿಸಲಾಗಿದೆ ಎಂದು ತಿಳಿಸಿದರು.ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಸಚಿವ ಬೈರತಿ, ಕೇವಲ 2.1 ಕಿ.ಮೀ. ಅಭಿವೃದ್ಧಿಗೆ 70 ಕೋಟಿ ರು. ಅಂದರೆ ಏನರ್ಥ? ಇದರ ಡಿಪಿಆರ್ ಮಾಡಿದ್ದು ಯಾರು? 100 ಅಡಿ ಅಗಲದ ರಸ್ತೆ ಮಾಡಿದರೂ ಇಷ್ಟು ಹಣ ಬೇಡ. ಇದಕ್ಕೆ ಐಡಿಯಾ ಕೊಟ್ಟವರು ಯಾರು? ಏನೇನು ಚಮತ್ಕಾರ ಮಾಡ್ತೀರೊ ಎಂದು ಹರಿಹಾಯ್ದರಲ್ಲದೆ, ಯೋಜನೆಯ ಸಂಪೂರ್ಣ ಮಾಹಿತಿ ತನಗೆ ಕೊಡಬೇಕು, ಇದು ಕಾರ್ಯಸಾಧ್ಯವೇ, ಇಲ್ಲವೇ ಎಂಬುದನ್ನು ಪರಿಶೀಲಿಸುತ್ತೇನೆ. ಅಲ್ಲಿಯವರೆಗೆ ಕಾಮಗಾರಿ ತಡೆಹಿಡಿಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ದ್ವೀಪ ಅಭಿವೃದ್ಧಿ ಪ್ರಸ್ತಾವನೆ ಬದಲು:
ಸಮಗ್ರ ಅಭಿವೃದ್ಧಿ ಯೋಜನೆ ವಿಳಂಬ:10 ವರ್ಷಕ್ಕೊಮ್ಮೆ ಮಾಡಬೇಕಾಗಿರುವ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮೂಡ)ದ ಸಮಗ್ರ ಅಭಿವೃದ್ಧಿ ಯೋಜನೆ (ಸಿಡಿಪಿ) 15 ವರ್ಷ ಕಳೆದರೂ ಪೂರ್ಣವಾಗದೆ ಇರುವ ಬಗ್ಗೆ ಸಚಿವರು ಅಸಮಾಧಾನ ವ್ಯಕ್ತಪಡಿಸಿದರು. ಮಾರ್ಚ್‌ಗೆ ಪೂರ್ಣಗೊಳಿಸುವುದಾಗಿ ಮೂಡ ಆಯುಕ್ತ ಮನ್ಸೂರ್ ಅಲಿ ಹೇಳಿದರು. ಮುಗಿಸದೆ ಇದ್ದರೆ ಶಿಸ್ತುಕ್ರಮ ಕೈಗೊಳ್ಳುವುದಾಗಿ ಸಚಿವರು ಎಚ್ಚರಿಸಿದರು.
ಯುಜಿಡಿ ಮಿಸ್ಸಿಂಗ್ ಲಿಂಕ್‌ಗೆ 40 ಕೋಟಿ: ಪಾಲಿಕೆ ವ್ಯಾಪ್ತಿಯಲ್ಲಿ ಒಳಚರಂಡಿ ಮಿಸ್ಸಿಂಗ್ ಲಿಂಕ್ ಸರಿಪಡಿಸಲು 40 ಕೋಟಿ ರು. ನೀಡಲು ಗುರುವಾರದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಈ ಕೆಲಸವನ್ನು ಸರಿಯಾಗಿ ಮಾಡಬೇಕು ಎಂದು ಸೂಚಿಸಿದರು.
ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ (ಕೆಯುಐಡಿಎಫ್‌ಸಿ) ಚೀಫ್ ಎಂಜಿನಿಯರ್‌ಗೆ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ‘ಗೆಟ್ ಔಟ್’ ಎಂದು ಸಭೆಯಿಂದ ಹೊರಹಾಕಿದ ಘಟನೆ ನಡೆಯಿತು. ಕೆಯುಐಡಿಎಫ್‌ಸಿ ಕಾಮಗಾರಿಗಳು ತೀವ್ರ ವಿಳಂಬಗತಿಯಲ್ಲಿ ನಡೆಯುತ್ತಿದೆ. ಶೇ.60ರಷ್ಟು ಕಾಮಗಾರಿ ನಡೆಸಲು 4 ವರ್ಷ ಹಿಡಿದಿದೆ. ಇನ್ನುಳಿದ ಶೇ.40ರಷ್ಟು ಕಾಮಗಾರಿ ಇನ್ನು ನಾಲ್ಕೈದು ತಿಂಗಳಲ್ಲಿ ಸಂಪೂರ್ಣಗೊಳಿಸಲು ಆಗುತ್ತಾ? ಎಂದು ಚೀಫ್ ಎಂಜಿನಿಯರ್ ಜಯರಾಮ್ ಅವರನ್ನು ಸಚಿವರು ಪ್ರಶ್ನಿಸಿದರಲ್ಲದೆ, ತೀವ್ರ ತರಾಟೆಗೆ ತೆಗೆದುಕೊಂಡರು. ಈ ವೇಳೆ ಜಯರಾಮ್ ‘ಹಾಗಾದರೆ ನಾನು ರಿಸೈನ್ ಮಾಡ್ತೇನೆ’ ಎಂದರು. ಇದರಿಂದ ತೀವ್ರ ಕೆರಳಿದ ಸಚಿವ ಬೈರತಿ ಸುರೇಶ್, ಗೆಟ್ ಔಟ್ ಫ್ರಂ ಹಿಯರ್ ಎಂದು ಆಜ್ಞೆ ಮಾಡಿದರು. ಕೊನೆಗೆ ಅಧಿಕಾರಿ ಸಭೆಯಿಂದ ಹೊರನಡೆದರು. ಜಯರಾಮ್ ಅವರು ಕೆಯುಐಡಿಎಫ್‌ಸಿ ಚೀಫ್ ಎಂಜಿನಿಯರ್ ಆಗಿ ನಿವೃತ್ತರಾದ ಬಳಿಕ ಗುತ್ತಿಗೆ ಆಧಾರದಲ್ಲಿ ಮುಂದುವರಿದಿದ್ದರು.