ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಕಳೆದ ಫೆ.24 ರಂದು ಊರಗಡೂರಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಂಕೇತ್ ಹತ್ಯೆಯಾಗಿತ್ತು. ಸಮೀಪದ ಗುಡ್ಡೆಮರಡಿಯ ಹಿಂದೂ ರುದ್ರಭೂಮಿಯಲ್ಲಿ ಸಂಕೇತ್‌ನ ಅಂತ್ಯಕ್ರಿಯೆ ನೆರವೇರಿಸಲಾಗಿತ್ತು.
ಸಂಕೇತ್ ಸಮಾಧಿಗೆ ಕಟ್ಟೆ ನಿರ್ಮಿಸಿ ಫೋಟೊ ಅಳವಡಿಸಲಾಗಿತ್ತು. ಮಂಗಳವಾರ ಸಂಜೆ ಸಮಾಧಿಯ ಒಂದು ಭಾಗ ಒಡೆದಿರುವುದು ಗೊತ್ತಾಗಿದೆ. ಇದರಿಂದ ಬೇಸರ ಮತ್ತು ಆಕ್ರೋಶಗೊಂಡ ಸಂಕೇತ್‌ನ ಪೋಷಕರು ತುಂಗಾ ನಗರ ಠಾಣೆಗೆ ದೂರು ನೀಡಿದ್ದಾರೆ. ಇನ್ನು, ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಸಮಾಧಿಗೆ ಮಗ ಸಂಕೇತ್‌ನ ಫೋಟೋ ಅಳವಡಿಸಲಾಗಿತ್ತು. ಅದನ್ನು ಕಲ್ಲಿನಿಂದ ಜಜ್ಜಿದ್ದಾರೆ. ಹಿಂದೆ ಹಾಕಿದ್ದ ಗ್ರಾನೈಟ್ ಒಡೆದು ಹಾಕಿದ್ದಾರೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಸಂಕೇತ್‌ನ ಸಾವಿನ ಬಳಿಕ ಮನೆಯಲ್ಲಿ ನೆಮ್ಮದಿ ಇಲ್ಲವಾಗಿದೆ. ಈಗ ಇಂತಹ ಘಟನೆ ನಡೆದಿರುವುದು ಮತ್ತಷ್ಟು ಆಘಾತ ತಂದಿದೆ ಎಂದು ಸಂಕೇತ್‌ನ ತಂದೆ ಶಿವಕುಮಾರ್ ಬೇಸರ ವ್ಯಕ್ತಪಡಿಸಿದರು.
ಸಂಕೇತ್‌ಗೆ ಬುಧವಾರ ಅಂದರೆ ಪ್ರೀತಿ. ಆತ ಪ್ರತಿ ಬುಧವಾರ ಬೆಳಿಗ್ಗೆ ಬೇಗ ಎದ್ದು ಸ್ನಾನ ಮುಗಿಸಿ ಪೂಜೆ ಮಾಡುತ್ತಿದ್ದ. ಹಾಗಾಗಿ ಈ ಬುಧವಾರ ಸಮಾಧಿ ಸ್ಥಳಕ್ಕೆ ಕುಟುಂಬದವರೆಲ್ಲ ತೆರಳಿ ಪೂಜೆ ಸಲ್ಲಿಸುವ ಯೋಚನೆಯಲ್ಲಿದ್ದರು. ಆದರೆ, ಮಂಗಳವಾರ ಸಂಜೆ ಸಮಾಧಿ ಒಡೆದ ವಿಷಯ ತಿಳಿದು ಬಂದಿದೆ ಎಂದು ಶಿವಕುಮಾರ್ ಬೇಸರ ವ್ಯಕ್ತಪಡಿಸಿದರು. ಬಾಕ್ಸ್...
ಬಾಲಕನ ಸಮಾಧಿಯನ್ನು ದುಷ್ಕರ್ಮಿಗಳು ಹಾನಿ ಮಾಡಿರುವುದು ತುಂಬಾ ದುಃಖದ ವಿಚಾರ. ಇದೊಂದು ದುಷ್ಕರ್ಮಿಗಳ ಕೃತ್ಯವಾಗಿದ್ದು, ಪೊಲೀಸರು ಬಿಗಿಕ್ರಮ ಕೈಗೊಳ್ಳಬೇಕಾಗಿದೆ ಎಂದು ಮಾಜಿ ಗೃಹಮಂತ್ರಿ ಆರಗ ಜ್ಞಾನೇಂದ್ರ ಹೇಳಿದರು.
ಬಾಲಕನ ಸಮಾದಿ ಎಂದರೆ ಬಹಳ ಜನರ ಭಾವನೆ ಅದರ ಮೇಲಿದೆ. ಅನೇಕರಿಗೆ ಈ ಘಟನೆ ಕಸಿವಿಸಿವುಂಟು ಮಾಡಿದೆ. ಕಾಂಗ್ರೆಸ್ ಸರ್ಕಾರದ ಕಾಲದಲ್ಲಿ ಇಂತಹ ದುಷ್ಕೃತ್ಯ ಎಸಗುವವರಿಗೆ ಹಾಸಿಗೆ ಹಾಸಿಕೊಟ್ಟ ಹಾಗೆ ಆಗಿದೆ. ಪ್ರತಿಭಟನೆ ಮಾಡಿದವರ ಮೇಲೆ ಕೇಸು ಹಾಕಲಾಗುತ್ತಿದೆ. ಈ ನೊಂದ ಕುಟುಂಬಕ್ಕೆ ಸಾವಿನ ನಂತರವೂ ದ್ವೇಷ ಸಾಧನೆ ಮಾಡುತ್ತಿದ್ದಾರೆ ಎಂದರೆ ಅವರೆಷ್ಟು ಕ್ರೂರಿಗಳಿರಬಹುದು. ಇಲಾಖೆ ಏನು ಮಾಡುತ್ತಿದೆ ಎಂದು ಪ್ರಶ್ನಿಸಿದರು.
ಇತ್ತೀಚೆಗೆ ಹಲ್ಲೆಗೊಳಗಾಗಿ ಮೃತಪಟ್ಟ ಸೂಳೆಬೈಲಿನ ಬಾಲಕ ಸಂಕೇತ್‌ನ ಸಮಾಧಿಯನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದು, ಆ ಕಿಡಿಗೇಡಿಗಳನ್ನು ತಕ್ಷಣವೇ ಪತ್ತೆ ಮಾಡಿ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಸರ್ಕಾರವನ್ನು ಆಗ್ರಹಿಸಿದರು.
ರಾಜ್ಯದ ಕಾಂಗ್ರೆಸ್ ಸರ್ಕಾರ ಮುಸ್ಲಿಂ ಓಲೈಕೆಯಲ್ಲಿ ನಿರತವಾಗಿದೆ. ತಾವು ಏನು ಮಾಡಿದರೂ ಕಾಂಗ್ರೆಸ್ ಸರ್ಕಾರ ತಮ್ಮ ಪರವಾಗಿ ನಿಲ್ಲುತ್ತದೆ ಎಂಬ ಭಾವನೆ ಮುಸ್ಲಿಂ ಗೂಂಡಾಗಳಲ್ಲಿ ಬೇರೂರಿದೆ ಎಂದು ಕಿಡಿಕಾರಿದರು.
ಬಿ.ನಿಖಿಲ್ ಎಸ್ಪಿ, ಶಿವಮೊಗ್ಗ.