ಸಕಲರ ಹಿತ ಕಾಯುವುದೇ ಮೋದಿ ಸರ್ಕಾರದ ಉದ್ದೇಶ

KannadaprabhaNewsNetwork |  
Published : Jun 15, 2026, 02:45 AM IST
01 | Kannada Prabha

ಸಾರಾಂಶ

ದೇವನಹಳ್ಳಿ: ಪ್ರಧಾನಿ ನರೇಂದ್ರ ಮೋದಿಯವರು ನೆಹರು ನಂತರ ಅತಿ ಹೆಚ್ಚು ದಿನಗಳ ಕಾಲ ಆಡಳಿತ ನೀಡಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ತಿಳಿಸಿದರು

ದೇವನಹಳ್ಳಿ: ಪ್ರಧಾನಿ ನರೇಂದ್ರ ಮೋದಿಯವರು ನೆಹರು ನಂತರ ಅತಿ ಹೆಚ್ಚು ದಿನಗಳ ಕಾಲ ಆಡಳಿತ ನೀಡಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ತಿಳಿಸಿದರು.

ತಾಲೂಕಿನ ದೊಡ್ಡಬಳ್ಳಾಪುರ-ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿ ವೀಕ್ಷಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿಯವರು ಪ್ರಧಾನಿಯಾದ ನಂತರ ಅನೇಕ ಜನಪರ ಯೋಜನೆಗಳನ್ನು ಜಾರಿಗೊಳಿಸಿ ಎಲ್ಲಾ ವರ್ಗಗಳ ಹಿತ ಕಾಪಾಡಲು ಮುಂದಾಗಿದ್ದಾರೆ. ಕೇಂದ್ರ ಸರ್ಕಾರದಿಂದ ರಾಜ್ಯಗಳಿಗೆ ತೆರಿಗೆ ಹಂಚಿಕೆ, ಹಣಕಾಸು ಆಯೋಗದ ಅನುದಾನ ಸೇರಿದಂತೆ ಕೇಂದ್ರ ವಲಯದ ಯೋಜನೆಗಳು ಕೇಂದ್ರ ಬಜೆಟ್‌ನ್‌ಲ್ಲಿ ಹಂಚಲಾಗಿದೆ. ಕೇಂದ್ರ ಸರ್ಕಾರದಿಂದ ಹಣಕಾಸು ಆಯೋಗದಿಂದ ಹಂಚಿಕೆಯಾಗುವ ರಾಜ್ಯಗಳ ಪಾಲು ಶೇ.೩೦.೫ ರಿಂದ ಶೇ.೪೧ಕ್ಕೆ ಏರಿಕೆಯಾಗಿದೆ ಎಂದು ಹೇಳಿದರು.

ಕರ್ನಾಟಕದ ಮೂಲಸೌಕರ್ಯಕ್ಕೆ ಆದ್ಯತೆ: ಜೂನ್ ೨೦೨೫ರವರೆಗೆ ರಾಜ್ಯದಲ್ಲಿ ೮೧೯೧ ಕಿಲೋ ಮೀಟರ್‌ಗಿಂತ ಹೆಚ್ಚು ರಾಷ್ಟ್ರೀಯ ಹೆದ್ದಾರಿಗಳನ್ನು ನಿರ್ಮಿಸಲಾಗಿದೆ. ದಾಬಸ್‌ಪೇಟ್ ಹೊಸಕೋಟೆ ರಸ್ತೆ ಅಭಿವೃದ್ಧಿ ಕಾಮಗಾರಿಗೆ ೨೭೫೦ ಕೋಟಿ ವೆಚ್ಚದಲ್ಲಿ ರಸ್ತೆ ಕಾಮಗಾರಿ ಪೂರ್ಣಗೊಳಿಸಲಾಗಿದೆ. ರಾಜ್ಯದಲ್ಲಿ ೮ ಸಾವಿರ ಕೋಟಿ ಮೌಲ್ಯದ ಎನ್.ಎಚ್-೭೪೮ಎ ಬೆಳಗಾವಿ, ಹುನಗುಂದ, ರಾಯಚೂರು ವಿಭಾಗದ ೬ ಪ್ಯಾಕೇಜ್‌ಗಳಿಗೆ ಅಡಿಪಾಯ ಹಾಕಲಾಗಿದೆ. ಅಲ್ಲದೆ ಅನೇಕ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ವಿಮಾನಯಾನ, ರೈಲ್ವೇ ಮೆಟ್ರೋ, ಪ್ರವಾಸೋದ್ಯಮ, ಉನ್ನತ ಶಿಕ್ಷಣ ಮತ್ತು ಸಂಶೋಧನಾ ಮೂಲಸೌಕರ್ಯ, ವಿದ್ಯುತ್ ಮತ್ತು ನವೀಕರಿಸಸಹುದಾದ ಇಂಧನ ಮೂಲಸೌಕರ್ಯ, ಜವಳಿ ಉಡುಪು, ರಕ್ಷಣೆಗೆ ಹೆಚ್ಚು ಆದ್ಯತೆ ನೀಡಲಾಗಿದೆ ಎಂದು ವಿವರಿಸಿದರು.

ಕೇಂದ್ರ ಸರಕಾರದ ಪ್ರಮುಖ ಯೋಜನೆಗಳು:

ಪಿಎಂ ಜನಧನ್ ಯೋಜನೆ, ಜೀವನ ಜ್ಯೋತಿ ವಿಮಾ ಯೋಜನೆ, ಪಿಎಂ ಸುರಕ್ಷಾ ವಿಮಾ ಯೋಜನೆ, ಪಿಎಂ ಮುದ್ರಾ ಯೋಜನೆ, ಅಟಲ್ ಪೆನ್ಸನ್ ಯೋಜನೆ, ಪಿಎಂ ಸ್ವನಿದಿ,ಜಲ ಜೀವನ್ ಮಿಷನ್ ಪಿಎಂ ಉಜ್ವಲ ಯೋಜನೆ ಜನೌಷಧಿ, ಆಯುಷ್ಮಾನ್‌ ಕಾರ್ಡ್‌ಗಳು, ಪಿಎಂ ಗರೀಬ್ ಕಲ್ಯಾಣ್ ಅನ್ನ ಯೋಜನೆ, ರೈತರಿಗೆ ಪಿಎಂ ಕಿಸಾನ್‌ಗೆ ಬೆಂಬಲ ಸೇರಿದಂತೆ ಅನೇಕ ಯೋಜನೆಗಳ ಮೂಲಕ ಎಲ್ಲಾ ವರ್ಗಗಳ ಮಧ್ಯಮ ವರ್ಗದವರನ್ನು ಮೇಲೆತ್ತುವ ಕೆಲಸ ಮಾಡಲಾಗಿದೆ ಎಂದು ತಿಳಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರು ಪ್ರಧಾನಿ ಹುದ್ದೆಯಲ್ಲಿ ಜವಾಹರ್‌ಲಾಲ್ ನೆಹರು ಅವರ ದಾಖಲೆಯನ್ನು ಮುರಿದು ೪೪೦೦ ದಿನಗಳಿಗೂ ಹೆಚ್ಚು ಕಾಲ ಪ್ರಧಾನಿಯಾಗಿ ಮುಂದುವರಿಯುತ್ತಿದ್ದಾರೆ. ದಾಖಲೆ ಮುರಿಯುವುದರ ಜೊತೆ ಜಾಗತಿಕ ಸವಾಲುಗಳ ನಡುವೆ ಭಾರತವನ್ನು ಎಲ್ಲಾ ಕ್ಷೇತ್ರಗಳಲ್ಲೂ ಅಭಿವೃದ್ಧಿಪಡಿಸಿ ಜಗತ್ತಿನ ೪ನೇ ಅತಿ ದೊಡ್ಡ ಅರ್ಥಿಕ ಕ್ಷೇತ್ರವನ್ನಾಗಿ ಮುನ್ನಡೆಸುತ್ತಿದ್ದಾರೆ. ಕಾಂಗ್ರೆಸ್‌ನವರು ನರೇಂದ್ರ ಮೋದಿ ಅವರನ್ನು ಟೀಕೆ ಮಾಡುವುದರಲ್ಲಿ ಅರ್ಥವಿಲ್ಲ. ೨೫ಕ್ಕೂ ಹೆಚ್ಚು ಹಿಂದುಳಿದ ವರ್ಗ ೧೫ಕ್ಕೂ ಹೆಚ್ಚು ಸಚಿವರು ಪರಿಶಿಷ್ಠ ಜಾತಿ ೫ ಪರಿಶಿಷ್ಠ ಪಂಗಡದ ಸಚಿವರಿಗೆ ಕೇಂದ್ರದ ಕ್ಯಾಬಿನೆಟ್‌ನಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಅನುವು ಮಾಡಿಕೊಟ್ಟಿದೆ. ಶೋಷಿತ ಸಮುದಾಯಗಳಿಗೆ ಶಕ್ತಿ ತುಂಬುವ ಕೆಲಸ ಮಾಡಲಾಗಿದೆ. ಬಡವರು, ರೈತರು, ಮಹಿಳೆಯರು ಮತ್ತು ಯುವಕರು ನಾಲ್ಕು ವರ್ಗಗಳಿಗೆ ಎನ್‌ಡಿಎ ಸರ್ಕಾರ ೧೨ ವರ್ಷಗಳಿಂದ ವಿವಿಧ ಯೋಜನೆಗಳಡಿ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತದ ಸಂಸದ ಡಾ.ಸುಧಾಕರ್ ಮಾತನಾಡಿ, ಹೊಸಕೋಟೆ, ನೆಲಮಂಗಲ, ದೇವನಹಳ್ಳಿ ನಾವು ೨ ಮತ್ತು ೩ನೇ ಸ್ಥಾನದಲ್ಲಿದ್ದೇವೆ. ೩ ಕ್ಷೇತ್ರಗಳಿಗೆ ರಾಜ್ಯಾಧ್ಯಕ್ಷರು ಸಹಕಾರ ಮಾರ್ಗದರ್ಶನ ನೀಡಿದರೆ ೩ ಕ್ಷೇತ್ರಗಲ್ಲಿ ಪಕ್ಷ ಸಂಘಟನೆ ಚೆನ್ನಾಗಿದೆ. ೩ ಕ್ಷೇತ್ರಗಳಲ್ಲಿ ಪಕ್ಷದ ಕಾರ್ಯಕರ್ತರಿಗೆ ಅವಕಾಶ ಕಲಿಸಿಕೊಟ್ಟರೆ ನಮ್ಮವರು ಗೆಲ್ಲಲಿಕ್ಕೆ ಸಹಕಾರಿಯಾಗಲಿದೆ. ಚುನಾವಣೆಗೆ ೨ ವರ್ಷ ಉಳಿದಿದೆ. ೪ ರಾಜ್ಯಗಳಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿದೆ. ಕಾಂಗ್ರೆಸ್ ಸರ್ಕಾರ ಅಹಿಂದ ವರ್ಗಕ್ಕೆ ನಾಮ ಹಾಕಿದ್ದಾರೆ. ಬಿಜೆಪಿ ಕಾರ್ಯಕರ್ತರು ಅಹಿಂದದಲ್ಲಿ ನಂಬಿಕೆ ಇಟ್ಟು ನರೇಂದ್ರ ಮೋದಿಯಂತಹ ವ್ಯಕ್ತಿಯನ್ನು ೨೫ ವರ್ಷ ಅಧಿಕಾರದಲ್ಲಿಡಲು ಮುಂದುವರಿಸುತ್ತಿದೆ. ಕಾಂಗ್ರೆಸ್‌ನವರು ಅಹಿಂದ ಮತ್ತು ದಲಿತರನ್ನು ಮತಬ್ಯಾಂಕಾಗಿ ಮಾಡಿಕೊಂಡಿದ್ದಾರೆಯೇ ಹೊರತು ಅವರಿಗೆ ಅಧಿಕಾರ ನೀಡಿಲ್ಲ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ ತಮ್ಮೇಶ್ ಗೌಡ, ಮಾಜಿ ಶಾಸಕ ಚಂದ್ರಣ್ಣ, ದೇವನಹಳ್ಳಿ ಮಂಡಲದ ಅಧ್ಯಕ್ಷ ನೀಲೇರಿ ಅಂಬರೀಶ್‌ಗೌಡ, ವಿಭಾಗ ಪ್ರಭಾರಿ ಬ್ಯಾಟರಂಗೇಗೌಡ, ವಿಧಾನಪರಿಷತ್ ಸದಸ್ಯ ಎಸ್.ಕೇಶವ ಪ್ರಸಾದ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ರಾಮಕೃಷಪ್ಪ ಸೇರಿದಂತೆ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

೧೪ ದೇವನಹಳ್ಳಿ ಚಿತ್ರಸುದ್ದಿ: ೦೧

ದೇವನಹಳ್ಳಿ ಬಿಜೆಪಿ ಕಚೇರಿಯಲ್ಲಿ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದ ಡಾ.ಸುಧಾಕರ್, ರಾಜ್ಯ ಕಾರ್ಯದರ್ಶಿ ತಮ್ಮೇಶ್ ಗೌಡ, ಮಾಜಿ ಶಾಸಕ ಚಂದ್ರಣ್ಣ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವೈದ್ಯ-ಸಿಬ್ಬಂದಿ ಕಾಳಜಿಯಿಂದ ರೋಗಿಗಳಿಗೆ ಉತ್ತಮ ಸೇವೆ: ವಿಶಾಲಾಕ್ಷಿ ಪದ್ಮನಾಬ್
ಪ್ರೊ.ಎ.ಎನ್.ಮೂರ್ತಿರಾವ್‌ ಮನುಷ್ಯನಲ್ಲಿರುವ ತಳಮಳ, ನಂಬಿಕೆ ತೆರೆದಿಟ್ಟಿದ್ದಾರೆ: ಎಂ.ಜಿ.ರೇವಣ್ಣ