ಊರಿನ ಹೆಸರು ಉತ್ತುಂಗಕ್ಕೇರಿಸಿದ್ದಾರೆ

KannadaprabhaNewsNetwork |  
Published : Nov 14, 2024, 12:50 AM IST
ರಾಜ್ಯಮಟ್ಟದ ಖೋ-ಖೋ ಪಂದ್ಯಾವಳಿಯಲ್ಲಿ ಭಾಗವಹಿಸಲು ತೆರಳುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳನ್ನು ಬೀಳ್ಕೂಟ್ಟ ಮುರಳೀಧರ ಹಾಲಪ್ಪ | Kannada Prabha

ಸಾರಾಂಶ

ತಾಲೂಕಿನ ಮೇಳೆಹಳ್ಳಿ ಗ್ರಾಮದ ಮಕ್ಕಳು ನಿರಂತರವಾಗಿ ರಾಜ್ಯ ಮತ್ತು ರಾಷ್ಟ್ರಮಟ್ಟದ ಕ್ರೀಡೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಊರಿನ ಹೆಸರನ್ನು ಉತ್ತುಂಗಕ್ಕೆ ತೆಗೆದುಕೊಂಡು ಹೋಗಿದ್ದಾರೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಮಾಜಿ ಅಧ್ಯಕ್ಷ ಮುರುಳೀಧರ ಹಾಲಪ್ಪ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ತುಮಕೂರು ತಾಲೂಕಿನ ಮೇಳೆಹಳ್ಳಿ ಗ್ರಾಮದ ಮಕ್ಕಳು ನಿರಂತರವಾಗಿ ರಾಜ್ಯ ಮತ್ತು ರಾಷ್ಟ್ರಮಟ್ಟದ ಕ್ರೀಡೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಊರಿನ ಹೆಸರನ್ನು ಉತ್ತುಂಗಕ್ಕೆ ತೆಗೆದುಕೊಂಡು ಹೋಗಿದ್ದಾರೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಮಾಜಿ ಅಧ್ಯಕ್ಷ ಮುರುಳೀಧರ ಹಾಲಪ್ಪ ತಿಳಿಸಿದ್ದಾರೆ. ನಗರಕ್ಕೆ ಸಮೀಪದ ಮೇಳೆಹಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ರಾಜ್ಯಮಟ್ಟದ ಖೋ-ಖೋ ಪಂದ್ಯಾವಳಿಯಲ್ಲಿ ಭಾಗವಹಿಸಲು ತೆರಳುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳನ್ನು ಬೀಳ್ಕೂಡುವ ಸಮಾರಂಭದಲ್ಲಿ ಮಾತನಾಡಿದರು.

ಮೇಳೆಹಳ್ಳಿ ಶಾಲೆಯ ಮಕ್ಕಳು ಹತ್ತಾರು ವರ್ಷಗಳಿಂದ ಖೋ-ಖೋ ಆಟದಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದ ಪಂದ್ಯಾವಳಿಗಳಲ್ಲಿ ಭಾಗವಹಿಸಿ ಜಿಲ್ಲೆಗೆ ಹೆಸರು ತಂದಿದ್ದಾರೆ. ಕಳೆದ ವರ್ಷದ ರಾಷ್ಟ್ರಮಟ್ಟದ ಸ್ಕೂಲ್ ಗೇಮ್ಸ್ ನಲ್ಲಿ ಮೇಳೆಹಳ್ಳಿ ಶಾಲೆಯ ಮೂವರು ಮಕ್ಕಳು ರಾಷ್ಟ್ರಮಟ್ಟದಲ್ಲಿ ಭಾಗವಹಿಸಿ ಕಂಚಿನ ಪದಕ ಪಡೆದಿದ್ದಾರೆ. ಈ ಬಾರಿಯೂ ಸಹ ಈ ಶಾಲೆಯ ಮಕ್ಕಳು ರಾಷ್ಟ್ರಮಟ್ಟದಲ್ಲಿ ಪಾಲ್ಗೊಳ್ಳುವಂತೆ ಅವರನ್ನು ಹರಸಿ, ಆಶೀರ್ವದಿಸುವುದರ ಜೊತೆಗೆ,ಸೂಕ್ತ ತರಬೇತಿಯೊಂದಿಗೆ ಹಣಕಾಸಿನ ನೆರವನ್ನು ನೀಡಬೇಕಾಗಿದೆ. ಈ ನಿಟ್ಟಿನಲ್ಲಿ ಹಾಲಪ್ಪ ಪ್ರತಿಷ್ಠಾನ ಎಲ್ಲಾ ನೆರವನ್ನು ನೀಡಲಿದೆ ಎಂದು ನುಡಿದರು. ವೇದಿಕೆಯಲ್ಲಿ ಹಿಮಾಲಯ ಸಂಸ್ಥೆಯ ಜನರಲ್ ಮ್ಯಾನೇಜರ್ ಸಂಜೀವ್ ಖನ್ನಾ,ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಪರಮೇಶ್ವರಪ್ಪ,ಬಿಇಓ ಹನುಮಂತಪ್ಪ,ಗ್ರಾಮದ ಮುಖಂಡರಾದ ಯದು, ಮಲ್ಲಿಕಾರ್ಜುನಯ್ಯ,ಗಂಗರಾಜಯ್ಯ,ನಿವೃತ್ತ ದೈಹಿಕ ಶಿಕ್ಷಣಾಧಿಕಾರಿ ಸಿದ್ದಗಂಗಯ್ಯ,ರಾಷ್ಟ್ರೀಯ ಕಬ್ಬಡಿ ತರಬೇತಿದಾರರಾದ ವÀಜ್ರಪ್ಪ,ನಿವೃತ್ತ ದೈಹಿಕ ಶಿಕ್ಷಕರು, ಮೆಳೆಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯರುಗಳು,, ಶಿಕ್ಷಕರು ಹಾಗೂ ಹಿರಿಯ ವಿದ್ಯಾರ್ಥಿಗಳ ಸಂಘದ ಸದಸ್ಯರುಗಳು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಲ್‌ಪಿಜಿ ಪೂರೈಕೆ ಸುಧಾರಣೆ: ಸಪ್ಲೈ ಶೇ.20ರಷ್ಟು ಏರಿಕೆ
ಬಾಗಲಕೋಟೆ, ದಾವಣಗೆರೆ ಕ್ಷೇತ್ರಕ್ಕೆ ಏ.9ಕ್ಕೆ ಉಪಸಮರ