ಗ್ರಾಮೀಣ ವಿದ್ಯಾರ್ಥಿಗಳ ಶಿಕ್ಷಣ ಗುಣಮಟ್ಟ ಸುಧಾರಣೆಗೆ ಹಾಸ್ಟೆಲ್‌ಗಳ ಅಗತ್ಯ ಹೆಚ್ಚಿದೆ

KannadaprabhaNewsNetwork |  
Published : Nov 15, 2024, 12:31 AM IST
13 ಎಚ್‍ಆರ್‍ಆರ್ 02ಹರಿಹರದಲ್ಲಿ ನೂತನವಾಗಿ ಮಂಜೂರಾದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮ್ಯಾಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ವಸತಿ ನಿಲಯಕ್ಕೆ ಶಾಸಕ ಬಿ.ಪಿ. ಹರೀಶ್ ಪೂಜೆ ಸಲ್ಲಿಸಿ ಉದ್ಘಾಟಿಸಿದರು. | Kannada Prabha

ಸಾರಾಂಶ

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆಯಲು ವಸತಿ ನಿಲಯಗಳ ಅವಶ್ಯಕತೆ ಮುಖ್ಯ ಎಂದು ಶಾಸಕ ಬಿ.ಪಿ. ಹರೀಶ್ ಹರಿಹರದಲ್ಲಿ ಹೇಳಿದ್ದಾರೆ.

- ಹಾಸ್ಟೆಲ್‌ ಆರಂಭಕ್ಕೆ ಚಾಲನೆ ನೀಡಿ ಶಾಸಕ ಹರೀಶ್ ಅಭಿಮತ - - - ಹರಿಹರ: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆಯಲು ವಸತಿ ನಿಲಯಗಳ ಅವಶ್ಯಕತೆ ಮುಖ್ಯ ಎಂದು ಶಾಸಕ ಬಿ.ಪಿ. ಹರೀಶ್ ಹೇಳಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ನೂತನವಾಗಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ವಸತಿ ನಿಲಯ ಮಂಜೂರಾಗಿದ್ದು, ನಗರದ ಎಸ್‍ಜೆವಿಪಿ ಪಾಲಿಟೆಕ್ನಿಕ್ ಕಾಲೇಜು ಪಕ್ಕದ ಬಾಡಿಗೆ ಕಟ್ಟಡದಲ್ಲಿ ಹಾಸ್ಟೆಲ್‌ ಆರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಬಡ ವಿದ್ಯಾರ್ಥಿಗಳಿಗೆ ಶಿಕ್ಷಣದಿಂದ ವಂಚಿತರಾಗಬಾರದು. ನಗರ ಮತ್ತು ಗ್ರಾಮೀಣ ಪ್ರದೇಶ ಸೇರಿದಂತೆ ಗುಣಮಟ್ಟದ ಅಭ್ಯಾಸಕ್ಕಾಗಿ ಇತರೆ ಊರುಗಳಿಂದ ಬರುವ ವಿದ್ಯಾರ್ಥಿಗಳಿಗೆ ಇದರಿಂದ ಹೆಚ್ಚಿನ ಅನುಕೂಲವಾಗಲಿದೆ. ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಂಡು ಉತ್ತಮ ಅಂಕಗಳ ಪಡೆದು ತಾಲೂಕು, ಜಿಲ್ಲೆ ಹಾಗೂ ರಾಜ್ಯಕ್ಕೆ ಉತ್ತಮ ಹೆಸರು ತರಬೇಕು. ಉತ್ತಮ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಪ್ರಯತ್ನಿಸಬೇಕು ಎಂದು ತಿಳಿಸಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಕೆ.ಎಚ್. ಗಾಯತ್ರಿ, ತಾಲೂಕು ಅಧಿಕಾರಿ ಆಸ್ಮ ಬಾನು, ವಿಸ್ತರಣಾಧಿಕಾರಿ ಎಚ್.ಬಿ. ಪಾಟೀಲ್, ನಿಲಯ ಪಾಲಕ ಪಿ.ರಂಗನಾಥ್, ಎಂ.ಎಸ್. ಹೇಮಾವತಿ, ಎ.ಎಂ. ಯಶೋದಮ್ಮ, ಎಸ್.ಪಿ. ಸುಮಲತಾ, ಎಂ. ಮಲ್ಲಿಕಾರ್ಜುನಯ್ಯ, ಸಿ.ಅನ್ವರ್, ಎಚ್.ಎಂ. ಸಂಪತ್ ಕುಮಾರ್, ಜಿ.ಎಸ್. ಶಿವಕುಮಾರ್, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.

- - - -13ಎಚ್‍ಆರ್‍ಆರ್02:

ಹರಿಹರದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ನೂತನ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ವಸತಿ ನಿಲಯ ಮಂಜೂರಾಗಿದ್ದು, ಎಸ್‍ಜೆವಿಪಿ ಪಾಲಿಟೆಕ್ನಿಕ್ ಕಾಲೇಜು ಪಕ್ಕದ ಬಾಡಿಗೆ ಕಟ್ಟಡದಲ್ಲಿ ಹಾಸ್ಟೆಲ್‌ ಆರಂಭಕ್ಕೆ ಶಾಸಕ ಬಿ.ಪಿ. ಹರೀಶ್ ಚಾಲನೆ ನೀಡಿದರು.

PREV

Recommended Stories

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...