ಕನ್ನಡಪ್ರಭ ವಾರ್ತೆ ಮೈಸೂರು
ನಗರದ ವಿದ್ಯಾವರ್ಧಕ ಎಂಜಿನಿಯರಿಂಗ್ ಕಾಲೇಜಿನ ಸಾಹುಕಾರ್ ಚೆನ್ನಯ್ಯ ಸಭಾಂಗಣದಲ್ಲಿ ಶನಿವಾರ ನಡೆದ ಕಾಲೇಜಿನ ಮೂರನೇ ಸ್ನಾತಕೋತ್ತರ ಪದವಿ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.
ಪದವಿ ಶಿಕ್ಷಣವೂ ಒಂದು ಚೌಕಟ್ಟಿನೊಳಗೆ ಇರುತ್ತದೆ. ಆದರೆ ನಾವು ಒಂದು ಸಮಸ್ಯೆಯನ್ನು ಪರಿಹರಿಸಲು ಬಯಸಿದಾಗ ಆ ಚೌಕಟ್ಟನ್ನು ದಾಟಿ ಹೋಗಬೇಕಾಗುತ್ತದೆ. ಇದಕ್ಕಾಗಿ ತರಗತಿಯ ಆಚೆಗೂ ಯೋಚನೆ ಮಾಡುವ ಅವಶ್ಯಕತೆ ಇರುತ್ತದೆ. ಇಂತಹ ಆಲೋಚನೆಗಳು ವಿದ್ಯಾರ್ಥಿಗಳ ಸಾಧನೆಗೆ ಪೂರಕವಾಗುವುದಲ್ಲದೇ ಅವರ ಭವಿಷ್ಯಕ್ಕೆ ಏಣಿಯಾಗುತ್ತದೆ ಎಂದರು.ಪ್ರಸ್ತುತ ಜಾಗತಿಕ ವಲಯದಲ್ಲಿ ಮಾಲಿನ್ಯ ನಿಯಂತ್ರಣ, ತ್ಯಾಜ್ಯ ನಿರ್ವಹಣೆ ಹಾಗೂ ಸುಸ್ಥಿರತೆಯ ಸವಾಲು ಇವೆ. ಇಂತಹ ನೈಜ ಸಮಸ್ಯೆಗ ಪರಿಹಾರ ಮಾಡಬೇಕಾದರೆ ಪದವಿ ಪಡೆದ ವಿದ್ಯಾರ್ಥಿಗಳು ತಾವು ಗಳಿಸಿಕೊಂಡಿರುವ ಶೈಕ್ಷಣಿಕ ಜ್ಞಾನವನ್ನು ಉಪಯೋಗಿಸಿಕೊಳ್ಳುವ ಅವಶ್ಯಕತೆ ಇದೆ. ಇದರಿಂದಾಗಿ ನಾವೀನ್ಯತೆ ಮತ್ತು ಸುಸ್ಥಿರತೆಯನ್ನು ಸಬಲೀಕರಣಗೊಳಿಸಬಹುದು ಎಂದರು.
ವಿದ್ಯಾರ್ಥಿಗಳು ಸಾಧನೆಯ ಗುರಿ ತಲುಪಲು ಅವರು ಹೊಂದಿರುವ ಮನೋಭಾವ ಅವಲಂಬಿಸಿರುತ್ತದೆ. ಆದ್ದರಿಂದ ಎಲ್ಲರೂ ಸಾಧಿಸುವ ಛಲ ಹೊಂದಿರಬೇಕು. ಆಗ ಮಾತ್ರ ಜೀವನದಲ್ಲಿ ಯಶಸ್ಸು ಸಿಗುತ್ತದೆ ಎಂದರು.
ವಿದ್ಯಾವರ್ಧಕ ಸಂಘದ ಅಧ್ಯಕ್ಷ ಗುಂಡಪ್ಪ ಗೌಡ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಬಿ. ಶಿವಲಿಂಗಪ್ಪ, ಉಪ ಪ್ರಾಂಶುಪಾಲೆ ಡಾ. ಶೋಭಾ ಶಂಕರ್, ಪರೀಕ್ಷಾ ನಿಯಂತ್ರಕ ಎಲ್.ಜೆ. ಸುದೇವ್ ಮೊದಲಾದವರು ಪಾಲ್ಗೊಂಡಿದ್ದರು.
ಪದವಿ ಪ್ರದಾನ ಸಮಾರಂಭದಲ್ಲಿ 111 ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣಪತ್ರ ನೀಡಲಾಯಿತು. ಇಬ್ಬರು ಎಂ.ಟೆಕ್ ಪದವಿ ಪಡೆದರು. 109 ಮಂದಿ ಎಂಬಿಎ ಪದವಿ ಪಡೆದರು. ಅತ್ಯುನ್ನತವಾಗಿ ಅಂಕಗಳಿಸಿದ ಹತ್ತು ವಿದ್ಯಾರ್ಥಿಗಳಿಗೆ ರ್ಯಾಂಕ್ ನೀಡಲಾಯಿತು. ಹತ್ತು ಮಂದಿಯಲ್ಲಿ ಎಂಟು ಮಂದಿ ವಿದ್ಯಾರ್ಥಿನಿಯರೇ ಆಗಿರುವುದು ವಿಶೇಷ.