ಮೀಸಲಾತಿ ಒದಗಿಸಿಕೊಟ್ಟ ಏಕೈಕ ನಾಯಕ ಅರಸು

KannadaprabhaNewsNetwork |  
Published : Sep 04, 2025, 01:00 AM IST
3ಕೆಜಿಎಲ್83ಕೊಳ್ಳೇಗಾಲದ ತಾಪಂ ಸಭಾಂಗದಣದಲ್ಲಿ ಅಯೋಜಿಸಿದ್ದ   ದೇವರಾಜ ಅರಸು ಅವರ ಜಯಂತಿ ಸಮಾರಂಭವನ್ನು ಶಾಸಕ ಎ ಆರ್ ಕೃಷ್ಣಮೂರ್ತಿ ಉದ್ಘಾಟಿಸಿದರು. | Kannada Prabha

ಸಾರಾಂಶ

ದೇವರಾಜ ಅರಸು ರಾಜಕೀಯ ಕ್ಷೇತ್ರದಲ್ಲಿ ದಿಟ್ಟತನದಿಂದ ರಾಜಕಾರಣ ಮಾಡಿದವರು. ಮಾಜಿ ಪ್ರಧಾನಿ ದಿ.ಇಂದಿರಾಗಾಂಧಿ ಅವರನ್ನು ಚಿಕ್ಕಮಗಳೂರು ಕ್ಷೇತ್ರದಲ್ಲಿ ನಿಲ್ಲಿಸಿ ಗೆಲ್ಲಿಸುವ ಮೂಲಕ ಅವರಿಗೆ ರಾಜಕೀಯ ಪುನರ್ ಜನ್ಮ ಕೊಟ್ಟವರು. ಅಂತಹ ಮೇರು ವ್ಯಕ್ತಿತ್ವದ ರಾಜಕಾರಣಿಗಳು ಇತ್ತೀಚಿನ ದಿನಗಳಲ್ಲಿ ಬಹಳ ವಿರಳ, ಅವರಂತಹ ಮೇರು ವ್ಯಕ್ತಿತ್ವವಿರುವ ನಾಯಕರನ್ನು ಚುನಾವಣೆಯಲ್ಲಿ ಜನತೆ ಆಯ್ಕೆಮಾಡುವ ಅಗತ್ಯವಿದೆ ಎಂದು ಶಾಸಕ ಎ.ಆರ್‌. ಕೃಷ್ಣಮೂರ್ತಿ ಹೇಳಿದರು

ಕನ್ನಡಪ್ರಭ ವಾರ್ತೆ ಕೊಳ್ಳೇಗಾಲ

ದೇವರಾಜ ಅರಸು ರಾಜಕೀಯ ಕ್ಷೇತ್ರದಲ್ಲಿ ದಿಟ್ಟತನದಿಂದ ರಾಜಕಾರಣ ಮಾಡಿದವರು. ಮಾಜಿ ಪ್ರಧಾನಿ ದಿ.ಇಂದಿರಾಗಾಂಧಿ ಅವರನ್ನು ಚಿಕ್ಕಮಗಳೂರು ಕ್ಷೇತ್ರದಲ್ಲಿ ನಿಲ್ಲಿಸಿ ಗೆಲ್ಲಿಸುವ ಮೂಲಕ ಅವರಿಗೆ ರಾಜಕೀಯ ಪುನರ್ ಜನ್ಮ ಕೊಟ್ಟವರು. ಅಂತಹ ಮೇರು ವ್ಯಕ್ತಿತ್ವದ ರಾಜಕಾರಣಿಗಳು ಇತ್ತೀಚಿನ ದಿನಗಳಲ್ಲಿ ಬಹಳ ವಿರಳ, ಅವರಂತಹ ಮೇರು ವ್ಯಕ್ತಿತ್ವವಿರುವ ನಾಯಕರನ್ನು ಚುನಾವಣೆಯಲ್ಲಿ ಜನತೆ ಆಯ್ಕೆಮಾಡುವ ಅಗತ್ಯವಿದೆ ಎಂದು ಶಾಸಕ ಎ.ಆರ್‌. ಕೃಷ್ಣಮೂರ್ತಿ ಹೇಳಿದರು.

ಇಲ್ಲಿನ ತಾ.ಪಂ.ಸಭಾಂಗಣದಲ್ಲಿ ನಡೆದ ಸಾಮಾಜಿಕ ಕ್ರಾಂತಿಯ ಹರಿಕಾರ, ಹಿಂದುಳಿದ ವರ್ಗಗಳ ನೇತಾರ, ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸುರವರ 110ನೇ ಜನ್ಮ ದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ದೇಶದಲ್ಲಿ ಮೀಸಲಾತಿ ಒದಗಿಸಿಕೊಟ್ಟ ಏಕೈಕ ಮುಖ್ಯಮಂತ್ರಿ ಎಂದರೆ ದೇವರಾಜ ಅರಸುರವರು. ಇಂದಿನ ರಾಜಕಾರಣಿಗಳು ನೆನಪು ಮಾಡಿಕೊಳ್ಳುವ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದಾರೆ. ಅವರ ಕಾಲದಲ್ಲಿ ಅನೇಕ ಸುಧಾರಣೆಯನ್ನು ತಂದರು. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಮೀಸಲಾತಿಯನ್ನು ಕೇವಲ ಅತಿ ಶೂದ್ರರಿಗೆ ಮಾತ್ರ ಕೊಟ್ಟಿಲ್ಲ ಎಲ್ಲಾ ಸಮುದಾಯದವರಿಗೂ ಸಮಾನವಾಗಿ ಮೀಸಲಾತಿಯನ್ನು ಒದಗಿಸಿಕೊಟ್ಟಿದ್ದಾರೆ ಎಂದರು.

ಡಿ.ದೇವರಾಜು ಅರಸು ಬಹಳ ನಿಷ್ಠೆ, ಪ್ರಾಮಾಣಿಕತೆಯಿಂದ ರಾಜ್ಯದ ಅಭಿವೃದ್ಧಿಗೆ ಶ್ರಮಿಸಿದ್ದವರು. ಅವರು 1952 ರಲ್ಲಿ ಡಿ ದೇವರಾಜ ಅರಸುರವರು ಹುಣಸೂರು ಕ್ಷೇತ್ರದಿಂದ ಪ್ರಥಮ ಭಾರಿಗೆ ಆಯ್ಕೆ ಯಾಗುವ ಮೂಲಕ ರಾಜಕೀಯ ಕ್ಷೇತ್ರಕ್ಕೆ ಕಾಲಿಟ್ಟರು. ಅದೇ ವೇಳೆ ನಮ್ಮ ತಂದೆ ದಿವಂಗತ ಬಿ.ರಾಚಯ್ಯರವರು ಸಹ ಯಳಂದೂರು ಮೀಸಲು ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಅವರೊಡನೆ ದಿ. ರಾಜಶೇಖರಮೂರ್ತಿ, ದಿ.ಗುರುಪಾದಸ್ವಾಮಿರವರು ಸೇರಿದಂತೆ ಇನ್ನೂ ಅನೇಕ ನಾಯಕರು ಜೊತೆಗಿದ್ದರು. ಅವರ ಚಿಂತನೆಗಳು ಯುವ ಪೀಳಿಗೆ ಕಿಂಚಿತ್ತಾದರೂ ಜೀವನದಲ್ಲಿ ಅಳವಡಿಸಿಕೊಳ್ಳುವಂತಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ನಗರಸಭಾಧ್ಯಕ್ಷೆ ರೇಖಾ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಾಜೇಂದ್ರ ಕುಂತೂರು, ಜಿ.ಪಂ ಮಾಜಿ ಉಪಾಧ್ಯಕ್ಷ ಯೋಗೀಶ್, ಡಿ. ವೈ.ಎಸ್.ಪಿ ಧರ್ಮೇಂದ್ರ, ಜಿಲ್ಲಾ ಬಿ.ಸಿ.ಎಂ ಅಧಿಕಾರಿ ವಿಶ್ವನಾಥ್, ತಾಲ್ಲೂಕು ಅಧಿಕಾರಿ ಶಿವರಾಜು, ಇ.ಓ ಗುರುಶಾಂತಪ್ಪ ಬೆಳ್ಳುಂಡಗಿ, ಗ್ರೇಡ್ 2 ತಹಸೀಲ್ದಾರ್ ಕುಮಾರ್, ಬಿ.ಇ.ಓ ಎಂ.ಮಂಜುಳ, ಕೆ.ಆರ್.ಐ.ಡಿ.ಎಲ್ ನ ಸಹಾಯಕ ಕಾರ್ಯ ಪಾಲಕ ಅಭಿಯಂತರ ಚಿಕ್ಕಲಿಂಗಯ್ಯ,ಹೆಚ್. ಡಿ. ವಿಶ್ವನಾಥ್ ಇದ್ದರು.

PREV

Recommended Stories

ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?
ಜಿಎಸ್ಟಿ ಕಡಿತದ ಲಾಭ ಜನರಿಗೆ ಸಿಗುವಂತಾಗಲಿ: ಸಿಎಂ ಆಶಯ