ಕನ್ನಡಪ್ರಭ ವಾರ್ತೆ ಮಡಿಕೇರಿ
ಸೂರ್ಲಬ್ಬಿ ಸರ್ಕಾರಿ ಪ್ರೌಢಶಾಲೆಯಲ್ಲಿ 2023-24 ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಶಾಲೆಯಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿನಿ ಯು.ಎಸ್.ಮೀನ ತೇರ್ಗಡೆ ಹೊಂದಿದ ಪರಿಣಾಮ ಶಾಲೆಗೆ ಶೇ.100 ಫಲಿತಾಂಶ ಲಭಿಸಿದ್ದು ಗುರುವಾರ ಗ್ರಾಮದಲ್ಲಿ ಸಂತೋಷಕ್ಕೆ ಕಾರಣ ಆಗಿತ್ತು.
ಸೂರ್ಲಬ್ಬಿ ಶಾಲೆಯಲ್ಲಿ ಏಕೈಕ ವಿದ್ಯಾರ್ಥಿನಿ ಮೀನ ಮಾತ್ರ ಕಲಿಯುತ್ತಿದ್ದಳು. ಏಕೈಕ ವಿದ್ಯಾರ್ಥಿಯನ್ನು ಹೊಂದಿದ್ದ ಈ ಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಮೀನ ತೇರ್ಗಡೆಯಾಗಿರುವುದು ಶಿಕ್ಷಣ ಇಲಾಖೆಗೆ ಪುಷ್ಠಿ ನೀಡಿದೆ ಎಂದು ಸಂಭ್ರಮ ಪಡುತ್ತಿರುವಾಗಲೆ ಇದೀಗ ಆಕೆಯ ಹತ್ಯೆ ನಡೆದಿದೆ.ಹತ್ಯೆಗೆ ಕಾರಣ ತಿಳಿದು ಬಂದಿಲ್ಲ, ಅಪ್ರಾಪ್ತ ಬಾಲಕಿ ಹತ್ಯೆ ಬಗ್ಗೆ ಕೊಡಗು ಪೊಲೀಸರು ಬಿರುಸಿನ ತನಿಖೆ ಕೈಗೊಂಡಿದ್ದಾರೆ.