ಎತ್ತರಕ್ಕೆ ಏರಲು ಕಷ್ಟಪಟ್ಟು ಕೆಲಸ ಮಾಡೋದೊಂದೇ ದಾರಿ

KannadaprabhaNewsNetwork |  
Published : Jan 26, 2025, 01:31 AM IST
ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಇನ್ಫೋಸಿಸ್ ಸಹಸಂಸ್ಥಾಪಕ ಎನ್.ಆರ್. ನಾರಾಯಣಮೂರ್ತಿಯವರ ಪ್ರೇರಣಾಉಪನ್ಯಾಸ ಕಾರ್ಯಕ್ರಮವನ್ನು ಪಾವಗಡ ರಾಮಕೃಷ್ಣ ಸೇವಾಶ್ರಮದ ಅಧ್ಯಕ್ಷ ಸ್ವಾಮಿಜಪಾನಂದಜೀ ಉದ್ಘಾಟಿಸಿದರು.ಪ್ರೊ.ಎಂ.ವೆಂಕಟೇಶ್ವರಲು, ನಾಹಿದಾಜಮ್‌ಜಮ್, ಪ್ರೊ.ಕೆ.ಪ್ರಸನ್ನಕುಮಾರ್, ಪ್ರೊ. ಬಿ. ರವೀಂದ್ರಕುಮಾರ್, ಪ್ರೊ. ಕೆ.ಜಿ. ಪರಶುರಾಮಇದ್ದಾರೆ. | Kannada Prabha

ಸಾರಾಂಶ

ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಹಮ್ಮಿಕೊಂಡಿದ್ದ ಪ್ರೇರಣಾ ಉಪನ್ಯಾಸ ಕಾರ್ಯಕ್ರಮಕ್ಕೆ ಇನ್ಫೋಸಿಸ್ ಸಹ ಸಂಸ್ಥಾಪಕ ಎನ್. ಆರ್.ನಾರಾಯಣ ಮೂರ್ತಿ ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ತುಮಕೂರುನೀವು ಎತ್ತರಕ್ಕೆ ಏರಬೇಕೆಂದರೆ ಕಷ್ಟಪಟ್ಟು ಕೆಲಸ ಮಾಡುವುದೊಂದೇ ದಾರಿ. ಯಾವ ಕ್ಷೇತ್ರದಲ್ಲಿ ನಿಮಗೆ ಅಭಿರುಚಿ, ಸಾಮರ್ಥ್ಯ ಇದೆಯೋ ಅದನ್ನು ಕಂಡುಕೊಂಡು ಅದರಲ್ಲಿ ಸಮರ್ಪಣಾ ಭಾವದಿಂದ ದುಡಿಯಿರಿ. ಯಾವ ದೇಶದಲ್ಲಿಯೂ ಸರ್ಕಾರವೇ ಎಲ್ಲರಿಗೂ ಉದ್ಯೋಗ ಕೊಡುತ್ತಿಲ್ಲ ಎಂದು ಇನ್ಫೋಸಿಸ್ ಸಹ ಸಂಸ್ಥಾಪಕ ಎನ್. ಆರ್.ನಾರಾಯಣ ಮೂರ್ತಿ ಹೇಳಿದರು.ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪ್ರೇರಣಾ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದರು.ನಾಯಕತ್ವ ಗುಣವುಳ್ಳವನನ್ನು ಸಮಾಜ ಗೌರವಿಸುತ್ತದೆ. ಉತ್ತಮ ಮೌಲ್ಯಗಳು, ಪ್ರಾಮಾಣಿಕತೆಯುಳ್ಳ ಶಿಕ್ಷಣವು ನಿಮ್ಮನ್ನು ಉತ್ತಮ ನಾಯಕನನ್ನಾಗಿಸುತ್ತದೆ. ಆ ನಾಯಕತ್ವವು ಉದ್ಯೋಗವನ್ನು ಕಲ್ಪಿಸುತ್ತದೆ. ಆಹಾರ, ವಸತಿ, ಶಿಕ್ಷಣ ಇವುಗಳ ಅಭಿವೃದ್ಧಿಯಾಗದ ಹೊರತು ದೇಶವು ಅಭಿವೃದ್ಧಿಯಾಗದು ಎಂದರು.ಪಾವಗಡದ ಶ್ರೀ ರಾಮಕೃಷ್ಣ ಸೇವಾಶ್ರಮದ ಅಧ್ಯಕ್ಷ ಸ್ವಾಮಿ ಜಪಾನಂದ ಮಹಾರಾಜ್ ಮಾತನಾಡಿ, ಇನ್ಫೋಸಿಸ್ ಸಂಸ್ಥೆಯು ಅನೇಕ ಯುವಕರಿಗೆ ಜೀವನವನ್ನುಕಟ್ಟಿಕೊಟ್ಟಿದೆ. ಯುವಜನತೆ ನಾರಾಯಣಮೂರ್ತಿಯಂತಹ ಮಹನೀಯರನ್ನು ಆದರ್ಶವಾಗಿ ತೆಗೆದುಕೊಳ್ಳಬೇಕು ಎಂದರು.

ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ಮಾತನಾಡಿ, ಮೂವತ್ತು ಸಾವಿರಕ್ಕೂ ಹೆಚ್ಚು ಯೋಜನೆಗಳನ್ನು ಇನ್ಫೋಸಿಸ್ ಸಂಸ್ಥೆಯು ನಡೆಸುತ್ತಿದೆ. ತುಮಕೂರು ವಿಶ್ವವಿದ್ಯಾನಿಲಯವು ಸಹ ಇನ್ಫೋಸಿಸ್ ಯೋಜನೆಯ ಸದುಪಯೋಗ ಪಡೆದುಕೊಂಡಿದೆ. ನಾರಾಯಣ ಮೂರ್ತಿ ತಮ್ಮ ಇಳಿ ವಯಸ್ಸಿನಲ್ಲೂ ಸಮಯಕ್ಕೆ ಹೆಚ್ಚಿನ ಮಹತ್ವವನ್ನು ನೀಡುತ್ತಾರೆ. ಅವರ ಶಿಸ್ತು, ಸಮಯ ಪಾಲನೆ, ಸರಳ ವ್ಯಕ್ತಿತ್ವ ಅನುಕರಣೀಯ ಎಂದರು.

ಕುಲಸಚಿವೆ ನಾಹಿದಾಜಮ್‌ಜಮ್, ಪರೀಕ್ಷಾಂಗ ಕುಲಸಚಿವ ಪ್ರೊ.ಪ್ರಸನ್ನಕುಮಾರ್ ಕೆ., ಪ್ರೇರಣಾ ಉಪನ್ಯಾಸ ಸಮಿತಿ ಅಧ್ಯಕ್ಷ ಪ್ರೊ. ಬಿ. ರವೀಂದ್ರಕುಮಾರ್, ಕೌಶಲ್ಯಾಭಿವೃದ್ಧಿ ಕೇಂದ್ರದ ಸಂಚಾಲಕ ಪ್ರೊ. ಕೆ.ಜಿ. ಪರಶುರಾಮ ಉಪಸ್ಥಿತರಿದ್ದರು.

ಸರ್ಕಾರ ಉದ್ಯೋಗ ಸೃಷ್ಟಿಗೆ ಸಹಕಾರ ನೀಡಲಿ:

ನಾವು ವರ್ತಮಾನದ ತಂತ್ರಜ್ಞಾನವನ್ನುಅರಿಯುವ ಪ್ರಯತ್ನ ಮಾಡಬೇಕು. ಸಮಯದ ಸದುಪಯೋಗ, ನಾಳೆಗೆ ನಮ್ಮನ್ನು ಉತ್ತಮ ಪಡಿಸಿಕೊಳ್ಳುವತ್ತ ಗಮನವಹಿಸಬೇಕು. ಸರ್ಕಾರದ ಕೆಲಸ ಉದ್ಯೋಗವನ್ನು ಸೃಷ್ಟಿ ಮಾಡುವುದರ ಜೊತೆಗೆ ಉತ್ತಮ ಉದ್ಯೋಗದ ವಾತಾವರಣವನ್ನು ನಿರ್ಮಿಸುವುದು ಸಹ ಆಗಿರುತ್ತದೆ. ಹೂಡಿಕೆದಾರರನ್ನು ಆಕರ್ಷಿಸಿ ಉದ್ಯೋಗ ಸೃಷ್ಟಿಗೆ ಸಹಕಾರವನ್ನು ನೀಡಬೇಕು. ರಾಜ್ಯದ ತೆರಿಗೆಯನ್ನು ಸಮತೋಲನದಲ್ಲಿ ಇರಿಸಿ ಮೂಲಭೂತ ಸೌಕರ್ಯಗಳನ್ನು ನೀಡುವುದು ಸರ್ಕಾರದ ಕಾರ್ಯ ಆಗಬೇಕು ಎಂದು ಇನ್ಫೋಸಿಸ್ ಸಹ ಸಂಸ್ಥಾಪಕ ಎನ್. ಆರ್.ನಾರಾಯಣ ಮೂರ್ತಿ ಹೇಳಿದರು.ಖಾಸಗಿ ವಲಯ ಬಡತನವನ್ನು ದೂರ ಮಾಡುವಲ್ಲಿ ತಕ್ಕಮಟ್ಟಿಗೆ ಕಾರ್ಯನಿರ್ವಹಿಸುತ್ತಿದೆ. ಭಾರತೀಯ ಜನಸಂಖ್ಯೆಯಲ್ಲಿ ಇಂದಿಗೂ ಶೇ.60ರಷ್ಟು ಜನರಲ್ಲಿ ಬಡತನ ಕಾಡುತ್ತಿದ್ದು ಅದನ್ನು ದೂರ ಮಾಡಲು ಸಾಧ್ಯವಾಗಿಲ್ಲ.

ಎನ್. ಆರ್.ನಾರಾಯಣ ಮೂರ್ತಿ ಇನ್ಫೋಸಿಸ್ ಸಹ ಸಂಸ್ಥಾಪಕ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ