ನುರಿತ ಆರ್ಥಿಕ ತಜ್ಞರನ್ನು ಸೃಷ್ಟಿಸುವ ಹೊಣೆ ಉಪನ್ಯಾಸಕರ ಮೇಲಿದೆ

KannadaprabhaNewsNetwork |  
Published : Dec 09, 2025, 01:30 AM IST
8ಎಚ್‌ವಿಆರ್3 | Kannada Prabha

ಸಾರಾಂಶ

ಅರ್ಥಶಾಸ್ತ್ರದ ಜ್ಞಾನವು ನಾಗರಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ತಲುಪಿದರೆ ತಮ್ಮ ದೈನಂದಿನ ಆರ್ಥಿಕ ನಿರ್ಧಾರಗಳನ್ನು ಸರಿಯಾಗಿ ತೆಗೆದುಕೊಳ್ಳಲು ಶಕ್ತರಾಗುತ್ತಾರೆ. ಆದ್ದರಿಂದ ಅಭಿವೃದ್ಧಿ ಹೊಂದಿದ ದೇಶ ಕಟ್ಟಲು ನುರಿತ ಆರ್ಥಿಕ ತಜ್ಞರನ್ನು ಸೃಷ್ಟಿಸುವ ಹೊಣೆಗಾರಿಕೆ ಉಪನ್ಯಾಸಕರ ಮೇಲಿದೆ ಎಂದು ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆಯ ಉಪನಿರ್ದೇಶಕ ಅಶೋಕ ಶಾಸ್ತ್ರಿ ಹೇಳಿದರು.

ಹಾವೇರಿ: ಅರ್ಥಶಾಸ್ತ್ರದ ಜ್ಞಾನವು ನಾಗರಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ತಲುಪಿದರೆ ತಮ್ಮ ದೈನಂದಿನ ಆರ್ಥಿಕ ನಿರ್ಧಾರಗಳನ್ನು ಸರಿಯಾಗಿ ತೆಗೆದುಕೊಳ್ಳಲು ಶಕ್ತರಾಗುತ್ತಾರೆ. ಆದ್ದರಿಂದ ಅಭಿವೃದ್ಧಿ ಹೊಂದಿದ ದೇಶ ಕಟ್ಟಲು ನುರಿತ ಆರ್ಥಿಕ ತಜ್ಞರನ್ನು ಸೃಷ್ಟಿಸುವ ಹೊಣೆಗಾರಿಕೆ ಉಪನ್ಯಾಸಕರ ಮೇಲಿದೆ ಎಂದು ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆಯ ಉಪನಿರ್ದೇಶಕ ಅಶೋಕ ಶಾಸ್ತ್ರಿ ಹೇಳಿದರು.ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಾವೇರಿ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಅರ್ಥಶಾಸ್ತ್ರ ಉಪನ್ಯಾಸಕರ ವೇದಿಕೆ ವತಿಯಿಂದ ನಡೆದ ಜಿಲ್ಲೆಯ ಅರ್ಥಶಾಸ್ತ್ರ ಉಪನ್ಯಾಸಕರಿಗೆ ಶೈಕ್ಷಣಿಕ ಕಾರ್ಯಗಾರ, ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಪ್ರತಿಯೊಬ್ಬರ ಜೀವನಮಟ್ಟ ಸುಧಾರಣೆಗೆ ಆರ್ಥಿಕ ಶಿಸ್ತು ತುಂಬಾ ಮುಖ್ಯ. ಆರ್ಥಿಕ ವ್ಯವಸ್ಥೆಯ ಅವ್ಯವಸ್ಥೆಯಿಂದ ದೇಶದಲ್ಲಿ ಬಡತನ ಇನ್ನೂ ತೊಲಗಿಲ್ಲ. ಆರ್ಥಿಕ ಅಸಮಾನತೆಯಿಂದ ದೇಶದ ಅಭಿವೃದ್ಧಿ ಕುಂಠಿತವಾಗಿದೆ. ಅರ್ಥಶಾಸ್ತ್ರದ ಫಲಗಳು ಕಟ್ಟ ಕಡೆಯ ಸಾಮಾನ್ಯ ಮನುಷ್ಯನಿಗೂ ತಲುಪಬೇಕು. ಜೀವನ ಮಟ್ಟ ಸುಧಾರಣೆಗೆ ಆರ್ಥಿಕತೆಯೇ ಮೂಲವಾಗಿದೆ. ಸರ್ವರನ್ನು ಆರ್ಥಿಕವಾಗಿ ಸಶಕ್ತಗೊಳಿಸಲು ಉಪನ್ಯಾಸಕರು ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ನೀಡಿದರೆ ಪರೀಕ್ಷಾ ಫಲಿತಾಂಶದ ಜೊತೆಗೆ ಅವರ ಬದುಕನ್ನು ಸುಧಾರಿಸಿಕೊಳ್ಳಲು ಅನುಕೂಲವಾಗುತ್ತದೆ ಎಂದು ಕಿವಿಮಾತು ಹೇಳಿದರು.ಅತಿಥಿಗಳಾಗಿದ್ದ ಜಿಲ್ಲಾ ಪ್ರಾಚಾರ್ಯರ ಸಂಘದ ಅಧ್ಯಕ್ಷ ನಾಗರಾಜ ದ್ಯಾಮನಕೊಪ್ಪ ಮಾತನಾಡಿ, ಉಪನ್ಯಾಸಕರು ಮಾನವನ ಯೋಗಕ್ಷೇಮಕ್ಕೆ ಆದ್ಯತೆ ನೀಡಿ ಆರ್ಥಿಕ ನಿರೂಪಣೆಗಳಿಗೆ ವಿದ್ಯಾರ್ಥಿಗಳನ್ನು ಸನ್ನದ್ಧಗೊಳಿಸಬೇಕೆಂದು ಸಲಹೆ ನೀಡಿದರು. ಪ್ರಾಚಾರ್ಯ ಬಸವರಾಜ ಇಟ್ಟಿಗುಡಿ ಮಾತನಾಡಿ, ಅರ್ಥಶಾಸ್ತ್ರ ವಿಷಯ ಬದುಕಿನೊಂದಿಗೆ ನೇರ ಸಂಬಂಧ ಹೊಂದಿದೆ. ಬದುಕಿನ ಏರಿಳಿತಗಳಿಗೆ ಆರ್ಥಿಕತೆಯೇ ಪ್ರಮುಖ ಕಾರಣ. ವಿದ್ಯಾರ್ಥಿಗಳಿಗೆ ಈ ವಿಷಯವನ್ನು ಪರಿಣಾಮಕಾರಿಯಾಗಿ ಬೋಧಿಸಿದರೆ ಉತ್ತಮ ಜೀವನ ಕಟ್ಟಿಕೊಳ್ಳಲು ಆರ್ಥಿಕ ಶಿಸ್ತು ಹೊಂದುತ್ತಾರೆ. ಈ ವಿಷಯವಾಗಿ ನಾವೆಲ್ಲಾ ಪ್ರಯತ್ನಿಸಬೇಕಿದೆ ಎಂದರು.ಇದೇ ವೇಳೆ ''''''''ಆರ್ಥಿಕ ಚೇತನ'''''''' ಎಂಬ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು.ನಂತರ ಕಳೆದ ಸಾಲಿನಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅರ್ಥಶಾಸ್ತ್ರ ವಿಷಯದಲ್ಲಿ ನೂರಕ್ಕೆ ನೂರು ಅಂಕ ಪಡೆದ ಜಿಲ್ಲೆಯ ವಿದ್ಯಾರ್ಥಿಗಳನ್ನು ಅಭಿನಂದಿಸಿ ಸತ್ಕರಿಸಲಾಯಿತು. ಜಿಲ್ಲೆಯಲ್ಲಿ ನಿವೃತ್ತಗೊಂಡ ಅರ್ಥಶಾಸ್ತ್ರ ಉಪನ್ಯಾಸಕರನ್ನೂ ಈ ವೇಳೆ ಸನ್ಮಾನಿಸಿ ಗೌರವಿಸಲಾಯಿತು.ಕಾರ್ಯಗಾರಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ದಾವಣಗೆರೆ ಜಿಲ್ಲೆಯ ಮಂಜಪ್ಪ ಆರ್., ಇಬ್ರಾಹಿಂ ಕಲಿಲುಲ್ಲಾ ಹಾಗೂ ಹಾವೇರಿಯ ರಮೇಶ ತಳವಾರ ಅವರನ್ನು ಗೌರವಿಸಲಾಯಿತು. ಜೊತೆಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಚಕೋರ ಸಾಹಿತ್ಯ ವಿಚಾರ ವೇದಿಕೆಯ ಜಿಲ್ಲಾ ಸಂಚಾಲಕರಾಗಿ ನೇಮಕಗೊಂಡ ಉಪನ್ಯಾಸಕ ಹಾಗೂ ಸಾಹಿತಿ ಶೇಖರ ಭಜಂತ್ರಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.ಅಧ್ಯಕ್ಷತೆ ವಹಿಸಿದ್ದ ಅರ್ಥಶಾಸ್ತ್ರ ಉಪನ್ಯಾಸಕರ ವೇದಿಕೆಯ ಜಿಲ್ಲಾಧ್ಯಕ್ಷ ಎಚ್.ಡಿ.ಗಂಟೇರ ಮಾತನಾಡಿ, ಎಲ್ಲಾ ಅರ್ಥಶಾಸ್ತ್ರ ಉಪನ್ಯಾಸಕರು ಕಾರ್ಯಗಾರದಲ್ಲಿ ಚರ್ಚಿಸುವ ವಿಷಯಗಳನ್ನು ಮನನ ಮಾಡಿಕೊಂಡು ಸ್ವಯಂ ಸಂಪನ್ಮೂಲ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು. ಕಾಲೇಜು ಫಲಿತಾಂಶವನ್ನು ನೂರಕ್ಕೆ ನೂರರಷ್ಟು ಮಾಡುವುದು ಉಪನ್ಯಾಸಕರ ಗುರುತರವಾದ ಜವಾಬ್ದಾರಿಯಾಗಿದೆ ಎಂದರು. ಅರ್ಥಶಾಸ್ತ್ರ ವಿಷಯದಲ್ಲಿ ನೂರಕ್ಕೆ ನೂರು ಅಂಕ ಪಡೆದ ವಿದ್ಯಾರ್ಥಿಗಳನ್ನು ಮತ್ತು ಅವರ ಮಾರ್ಗದರ್ಶಕ ಉಪನ್ಯಾಸಕರನ್ನು ಅಭಿನಂದಿಸಿದರು. ಸಿಂಡಿಕೇಟ್ ಸದಸ್ಯರು ಸಿಂಡಿಕೇಟ್ ಸದಸ್ಯ ರಮೇಶ ಲಮಾಣಿ, ಉಪನ್ಯಾಸಕರ ಸಂಘದ ಅಧ್ಯಕ್ಷ ಎಸ್. ಎಸ್.ನಿಸ್ಸಿಮಗೌಡ್ರು, ಎನ್‌ಎಸ್‌ಎಸ್ ಅಧಿಕಾರಿ ರವಿಕುಮಾರ ಅಂಬೋರೆ, ವೇದಿಕೆ ಕಾರ್ಯದರ್ಶಿ ಮಂಜುನಾಥ ಹಟ್ಟಿಯವರ, ಖಜಾಂಚಿ ಎನ್.ಎನ್. ದ್ಯಾಮನಗೌಡ್ರು, ಇಂದಿರಮ್ಮ ಹಳೇಮನಿ ಮತ್ತು ಇತರರು ಇದ್ದರು.ಡಾ.ಕೆ.ಎಸ್.ಬರದೇಲಿ ಸ್ವಾಗತಿಸಿದರು. ಇಂದಿರಮ್ಮ ಹಳೇಮನಿ ನಿರೂಪಿಸಿದರು. ರೇಖಾ ಪೂಜಾರ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶರಣರ ಸಂದೇಶಗಳು ಮನುಕುಲದ ಬೆಳವಣಿಗೆಗೆ ಮಾರ್ಗದರ್ಶಿ-ಸ್ವಾಮೀಜಿ
ಮಕ್ಕಳಸ್ನೇಹಿ ವಾತಾವರಣ ನಿರ್ಮಿಸುವುದು ಅಗತ್ಯ: ಶೇಖರಗೌಡ ರಾಮತ್ನಾಳ