ಔಷಧ ವ್ಯಾಪಾರಿಗಳ, ವಿತರಕರ ಅಭಿವೃದ್ಧಿಗೆ ಸಂಸ್ಥೆ ಸದಾ ಬೆನ್ನುಲುಬಾಗಿದೆ: ಬಿ.ಲೋಕೇಶ್

KannadaprabhaNewsNetwork |  
Published : Sep 29, 2026, 01:45 AM IST
28ಕೆಎಂಎನ್ ಡಿ26 | Kannada Prabha

ಸಾರಾಂಶ

ಸಂಘದ ಸದಸ್ಯರ ಮಕ್ಕಳಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಅಂಕ ಗಳಿಸಿದವರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಹಾಯಧನ ಹಾಗೂ ನೆನಪಿನ ಕಾಣಿಕೆ ನೀಡಿ ಗೌರವಿಸಲಾಗುತ್ತಿದೆ. ಅಲ್ಲದೇ, 25 ವರ್ಷದ ನಿರಂತರವಾಗಿ ಸೇವೆ ಸಲ್ಲಿಸಿರುವ ಸದಸ್ಯರನ್ನು ಸನ್ಮಾನಿಸಲಾಗುತ್ತಿದೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಜಿಲ್ಲಾ ಔಷಧ ವ್ಯಾಪಾರಿಗಳ ಮತ್ತು ವಿತರಕರ ಸಂಸ್ಥೆ ಕೇವಲ ನಾಮ ಮಾತ್ರದ ಸಂಸ್ಥೆಯಾಗಿರದೆ ಸದಸ್ಯರ ಅಭಿವೃದ್ಧಿಗೆ ಸದಾ ಬೆನ್ನೆಲುಬಾಗಿ ನಿಂತಿದೆ ಎಂದು ಸಂಸ್ಥೆ ಜಿಲ್ಲಾಧ್ಯಕ್ಷ ಬಿ.ಲೋಕೇಶ್ ಹೇಳಿದರು.

ತಾಲೂಕಿನ ಹೊಸಬೂದನೂರು ಗ್ರಾಮದ ಲೆಮನ್‌ಗ್ರಾಸ್‌ನಲ್ಲಿ ಆಯೋಜಿಸಿದ್ದ ಸರ್ವ ಸದಸ್ಯರ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಆರಂಭದಿಂದಲೂ ಸದಸ್ಯರ ಹಿತಾಸಕ್ತಿ ಹಾಗೂ ಅಭಿವೃದ್ಧಿಗೆ ಹಲವು ಜನಪರ ಕಾರ್ಯಕ್ರವ ಹಮ್ಮಿಕೊಂಡು ಬರುತ್ತಿದೆ ಎಂದರು.

ಸಂಘದ ಸದಸ್ಯರ ಮಕ್ಕಳಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಅಂಕ ಗಳಿಸಿದವರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಹಾಯಧನ ಹಾಗೂ ನೆನಪಿನ ಕಾಣಿಕೆ ನೀಡಿ ಗೌರವಿಸಲಾಗುತ್ತಿದೆ. ಅಲ್ಲದೇ, 25 ವರ್ಷದ ನಿರಂತರವಾಗಿ ಸೇವೆ ಸಲ್ಲಿಸಿರುವ ಸದಸ್ಯರನ್ನು ಸನ್ಮಾನಿಸಲಾಗುತ್ತಿದೆ ಎಂದರು.

ಸಂಸ್ಥೆ ಸದಸ್ಯರು ನಿಧನರಾಗಿ ಅವರ ಕುಟುಂಬದವರಿಗೆ 25 ಸಾವಿರ ರು. ಸಹಾಯಧನ ನೀಡುವ ಮೂಲಕ ಸಂಕಷ್ಟದ ಸಮಯದಲ್ಲಿ ನೆರವಾಗಲಾಗುತ್ತಿದೆ. ಔಷಧ ವ್ಯಾಪಾರಕ್ಕೆ ಸಂಬಂಧಿಸಿದ ಕಾನೂನು ವಿಚಾರಗಳಲ್ಲಿಯೂ ಸದಸ್ಯರಿಗೆ ಅಗತ್ಯ ಕಾನೂನು ಸಲಹೆ ಮತ್ತು ಮಾರ್ಗದರ್ಶನ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಸಂಸ್ಥೆ ಜಿಲ್ಲಾ ಕಚೇರಿಯನ್ನು ಪ್ರಾರಂಭಿಸುವ ಉದ್ದೇಶವಿದೆ ಎಂದರು.

ಸಭೆಯಲ್ಲಿ ಉಪಾಧ್ಯಕ್ಷರಾದ ಬಿ.ರಾಜಣ್ಣ, ಸುರೇಶ್ ಕಾರಂತ, ಜಂಟಿ ಕಾರ್ಯದರ್ಶಿಗಳಾದ ಕೆ.ಮಹೇಶ್‌, ಎಂ.ಡಿ.ಸುರೇಶ್‌, ಸಂಘಟನಾ ಕಾರ್ಯದರ್ಶಿ ಜಿ.ಎನ.ಕೃಷ್ಣೇಗೌಡ, ಖಜಾಂಚಿ ಮುನಿಸಿಗೌಡ, ಗಿರೀಶ, ನಂಜೇಗೌಡ, ಎಸ.ಡಿ.ಮಂಜುನಾಥ, ಭೀಮರಾಜ, ಹಿರಿಯ ಸದಸ್ಯ ಕೆ.ಪ್ರಭಾಕರನ, ನಿರ್ದೇಶಕ ಶ್ರೀರಂಗಪಟ್ಟಣದ ಎಂ.ನಂದೀಶ್ ಇತರರಿದ್ದರು.

ಸಂಸ್ಥೆ ಕಾರ್ಯದರ್ಶಿ ಸಿ.ಎಸ್.ಶಾಂತಿಬಾಬು ಸಭೆಯಲ್ಲಿ ವಾರ್ಷಿಕ ವರದಿ ಮಂಡಿಸಿದರು. ಇದೇ ವೇಳೆ ಎಸ್ಸೆಸ್ಸೆಲ್ಸಿ ಹಾಗೂ

ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸದಸ್ಯರ ಮಕ್ಕಳು ಹಾಗೂ 25 ವರ್ಷದ ನಿರಂತರ ಸೇವೆ ಸಲ್ಲಿಸಿದ ಸದಸ್ಯರನ್ನು ಸನ್ಮಾನಿಸಲಾಯಿತು.ಅತ್ಯುತ್ತಮ ಕ್ರೀಡಾ ಪ್ರಶಸ್ತಿ ವಿದ್ಯಾರ್ಥಿಗಳಿಗೆ ಅಭಿನಂದನೆ

ಮಳವಳ್ಳಿ: ಪಟ್ಟಣದ ಹೊರವಲಯದ ರಾಗಿಬೊಮ್ಮನಹಳ್ಳಿ ಗೇಟ್ ಬಳಿಯ ಎಂ.ಜೆ.ಎಕ್ಸಲೆನ್ಸ್ ಪಿಯು ಕಾಲೇಜು ಆವರಣದಲ್ಲಿ ಈಚೆಗೆ ನಡೆದ ತಾಸೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಶಾಂತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಬಾಲಕಿಯರ ಹಾಗೂ ಬಾಲಕರ ವಿಭಾಗದ ಸಮಗ್ರ ಪ್ರಶಸ್ತಿ ಮತ್ತು ಬಾಲಕ ವಿಭಾಗದ ಅತ್ಯುತ್ತಮ ಕ್ರೀಡಾಪಟು ಪ್ರಶಸ್ತಿ ಪಡೆದಿದ್ದಾರೆ. ಎಲ್ಲ ಕ್ರೀಡಾಪಟುಗಳನ್ನು ಶಾಂತಿ ಶಿಕ್ಷಣ ಸಂಸ್ಥೆ ಆಡಳಿತ ಮಂಡಳಿ, ಪ್ರಾಂಶುಪಾಲ ಎಂ.ಸಿ.ಶಿವಪ್ಪ, ದೈಹಿಕ ಶಿಕ್ಷಣ ಉಪನ್ಯಾಸಕರು, ಉಪನ್ಯಾಸಕರು ಹಾಗೂ ಸಿಬ್ಬಂದಿ ಅಭಿನಂದಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೀರಾವರಿ ಯೋಜನೆ ಜಾರಿಗೆ ಸರ್ಕಾರ ಬದ್ಧ
ಕೆರೆಗಳ ಸಂರಕ್ಷಣೆ, ಅಭಿವೃದ್ಧಿಗೆ ಅಗತ್ಯ ಕ್ರಮ