ಓಝೋನ್ ಪದರವು ಜೀವಜಗತ್ತಿನ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ

KannadaprabhaNewsNetwork |  
Published : Sep 27, 2026, 02:45 AM IST
ಹಿರೇಕೆರೂರು ಪಟ್ಟಣದ ಬಿ.ಆರ್. ತಂಬಾಕದ ಪ್ರಥಮ ದರ್ಜೆ ಕಾಲೇಜು ಹಾಗೂ ಎಂ.ಕಾಂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ವಿಶ್ವ ಓಝೋನ್ ದಿನಾಚರಣೆ ಹಾಗೂ ವಿಜ್ಞಾನ ವಸ್ತು ಪ್ರದರ್ಶನ ನಡೆಯಿತು. | Kannada Prabha

ಸಾರಾಂಶ

ಪರಿಸರ ಸಂರಕ್ಷಣೆ ಮತ್ತು ವೈಜ್ಞಾನಿಕ ಮನೋಭಾವವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಉದ್ದೇಶದಿಂದ ಇಂತಹ ಕಾರ್ಯಕ್ರಮಗಳು ಅತ್ಯಂತ ಅರ್ಥಪೂರ್ಣ ಎಂದು ಸಿಇಎಸ್ ವಿದ್ಯಾ ಸಂಸ್ಥೆಯ ಆಡಳಿತ ಅಧಿಕಾರಿ ಎಸ್. ವೀರಭದ್ರಯ್ಯ ಹೇಳಿದರು.

ಹಿರೇಕೆರೂರು: ಓಝೋನ್ ಪದರವು ಭೂಮಿಯ ಮೇಲಿನ ಜೀವಜಗತ್ತಿನ ರಕ್ಷಣೆಯಲ್ಲಿ ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ ಹಾಗೂ ಪರಿಸರ ಸಂರಕ್ಷಣೆ ಮತ್ತು ವೈಜ್ಞಾನಿಕ ಮನೋಭಾವವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಉದ್ದೇಶದಿಂದ ಇಂತಹ ಕಾರ್ಯಕ್ರಮಗಳು ಅತ್ಯಂತ ಅರ್ಥಪೂರ್ಣ ಎಂದು ಸಿಇಎಸ್ ವಿದ್ಯಾ ಸಂಸ್ಥೆಯ ಆಡಳಿತ ಅಧಿಕಾರಿ ಎಸ್. ವೀರಭದ್ರಯ್ಯ ಹೇಳಿದರು.

ಪಟ್ಟಣದ ಬಿ.ಆರ್. ತಂಬಾಕದ ಪ್ರಥಮ ದರ್ಜೆ ಕಾಲೇಜು ಹಾಗೂ ಎಂ.ಕಾಂ. ಸ್ನಾತಕೋತ್ತರ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ನಡೆದ ವಿಶ್ವ ಓಝೋನ್ ದಿನಾಚರಣೆ ಹಾಗೂ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.

ಸೂರ್ಯನಿಂದ ಹೊರಹೊಮ್ಮುವ ಹಾನಿಕಾರಕ ಅತಿನೇರಳೆ ಕಿರಣಗಳ ಪರಿಣಾಮದಿಂದ ಮಾನವರು, ಪ್ರಾಣಿಗಳು, ಸಸ್ಯಗಳು ಹಾಗೂ ಪರಿಸರವನ್ನು ರಕ್ಷಿಸುವಲ್ಲಿ ಓಝೋನ್ ಪದರ ಪ್ರಮುಖವಾದ ನೈಸರ್ಗಿಕ ರಕ್ಷಣಾ ಕವಚವಾಗಿದೆ. ಆದ್ದರಿಂದ ಓಝೋನ್ ಪದರದ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದೆ. ಮಾನವನ ವಿವಿಧ ಚಟುವಟಿಕೆಗಳಿಂದ ವಾತಾವರಣದ ಮೇಲೆ ಉಂಟಾಗುತ್ತಿರುವ ಮಾಲಿನ್ಯವು ಪರಿಸರ ಸಮತೋಲನಕ್ಕೆ ಸವಾಲಾಗಿ ಪರಿಣಮಿಸಿದೆ. ಪರಿಸರ ಸ್ನೇಹಿ ಜೀವನಶೈಲಿಯನ್ನು ಅಳವಡಿಸಿಕೊಳ್ಳುವುದು, ಮಾಲಿನ್ಯವನ್ನು ನಿಯಂತ್ರಿಸುವುದು, ಶಕ್ತಿಯ ಮಿತವ್ಯಯ ಮಾಡುವುದು ಹಾಗೂ ಪರಿಸರ ಸಂರಕ್ಷಣೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಇಂದಿನ ಅಗತ್ಯವಾಗಿದೆ ಎಂದು ಕಾರ್ಯಕ್ರಮದಲ್ಲಿ ತಿಳಿಸಲಾಯಿತು. ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಯ ಸಂದೇಶವನ್ನು ಸಮಾಜಕ್ಕೆ ತಲುಪಿಸುವ ರಾಯಭಾರಿಗಳಾಗಬೇಕು ಎಂದು ಕರೆ ನೀಡಲಾಯಿತು.

ಪ್ರಾಚಾರ್ಯ ವಿಜಯಕುಮಾರ ಮುದಿಗೌಡರ ಮಾತನಾಡಿ, ವಿಜ್ಞಾನ ವಸ್ತು ಪ್ರದರ್ಶನವು ವಿದ್ಯಾರ್ಥಿಗಳಲ್ಲಿ ಕೇವಲ ಪಠ್ಯಪುಸ್ತಕದ ಜ್ಞಾನವಷ್ಟೇ ಅಲ್ಲದೆ, ವಿಷಯಗಳನ್ನು ಪ್ರಾಯೋಗಿಕವಾಗಿ ಅರ್ಥಮಾಡಿಕೊಳ್ಳುವ ಸಾಮರ್ಥ್ಯವನ್ನು ಬೆಳೆಸುವಲ್ಲಿ ಸಹಕಾರಿಯಾಗುತ್ತದೆ. ವಿದ್ಯಾರ್ಥಿಗಳ ವೈಜ್ಞಾನಿಕ ಕುತೂಹಲ, ಪ್ರಶ್ನಿಸುವ ಮನೋಭಾವ, ಸಂಶೋಧನಾ ದೃಷ್ಟಿಕೋನ ಹಾಗೂ ಸೃಜನಶೀಲತೆ ಪ್ರದರ್ಶನದ ಮೂಲಕ ವ್ಯಕ್ತವಾಗುತ್ತದೆ. ವಿಶ್ವ ಓಝೋನ್ ದಿನಾಚರಣೆ ಹಾಗೂ ವಿಜ್ಞಾನ ವಸ್ತು ಪ್ರದರ್ಶನವು ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿ ಮೂಡಿಸುವುದರ ಜೊತೆಗೆ ವೈಜ್ಞಾನಿಕ ಮನೋಭಾವ ಮತ್ತು ಸೃಜನಶೀಲತೆಯನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಪರಿಸರವನ್ನು ಸಂರಕ್ಷಿಸುವ ಸಂಕಲ್ಪದೊಂದಿಗೆ ಈ ಕಾರ್ಯಕ್ರಮ ಯಶಸ್ವಿಯಾಗಲಿ ಎಂದರು.

ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ವಿಜ್ಞಾನ ವಸ್ತು ಪ್ರದರ್ಶನ ವಿಶೇಷ ಗಮನ ಸೆಳೆಯಿತು. ಕಾಲೇಜಿನ ವಿವಿಧ ತರಗತಿಗಳ ವಿದ್ಯಾರ್ಥಿಗಳು ತಮ್ಮ ಆಸಕ್ತಿ ಮತ್ತು ಸೃಜನಶೀಲತೆಯಿಂದ ವಿವಿಧ ವಿಜ್ಞಾನ ಮಾದರಿಗಳನ್ನು ಸಿದ್ಧಪಡಿಸಿ ಪ್ರದರ್ಶಿಸಿದರು. ಪರಿಸರ ಸಂರಕ್ಷಣೆ, ಓಝೋನ್ ಪದರದ ಮಹತ್ವ, ಜಲ ಸಂರಕ್ಷಣೆ, ವಾಯುಮಾಲಿನ್ಯ ನಿಯಂತ್ರಣ, ನವೀಕರಿಸಬಹುದಾದ ಇಂಧನ, ಸೌರಶಕ್ತಿ, ತ್ಯಾಜ್ಯ ನಿರ್ವಹಣೆ, ಹಸಿರು ತಂತ್ರಜ್ಞಾನ ಸೇರಿದಂತೆ ವಿವಿಧ ವಿಷಯಗಳಿಗೆ ಸಂಬಂಧಿಸಿದ ಮಾದರಿಗಳನ್ನು ಪ್ರದರ್ಶನದಲ್ಲಿ ಅಳವಡಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಎಸ್.ಟಿ.ಜೆ ಬಿಇಡಿ ಮಹಾವಿದ್ಯಾಲಯದ ಪ್ರಾಚಾರ್ಯ ದಾನೇಶ ತಿಮ್ಮಿನಕಟ್ಟಿ, ಹಿರಿಯ ಉಪನ್ಯಾಸಕರಾದ ಬಿ.ಪಿ. ಹಳ್ಳೇರ, ಸತೀಶ ಬಣಕಾರ, ಶ್ರೀಭಾರತಿ ಆರ್., ಸ್ವೌಮ್ಯ ಯು.ಎಸ್., ಸತೀಶ ಗಿರಿಮಲ್ಲಪ್ಪನವರ, ಕಿರಣ್ ಬಾಗಲರ, ಪೂಜಾ ಅಡಗಂಟಿ, ಸರಸ್ವತಿ ಕಂಬಾಳಿಮಠ, ಅಂಜುತಾ ಬಿ.ಎಂ., ನಂದಿತಾ ಚಿನ್ನಿಕಟ್ಟಿ, ಲೋಕೇಶ ಎಸ್. ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗಣೇಶ ವಿಗ್ರಹ ವಿಸರ್ಜನೆ ಸಂದರ್ಭ ನಾಲ್ಕು ಮಂದಿಗೆ ವಿದ್ಯುತ್ ಸ್ಪರ್ಶ : ಇಬ್ಬರು ಗಂಭೀರ
ಕಾರಿಡರ್‌ ಆವರಣಗೋಡೆ ಕುಸಿತ: ಓರ್ವ ಗಂಭೀರ, ಮೂವರಿಗೆ ಗಾಯ