ಪಕ್ಷಕ್ಕೊಸ್ಕರ ದುಡಿದರೆ ಅಧಿಕಾರ ಹುದ್ದೆ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ. ಚುನಾವಣೆಯಲ್ಲಿ ನಿಯತ್ತಿನಿಂದ ಸ್ವಾರ್ಥರಹಿತ ಕೆಲಸ ಮಾಡಿದವರನ್ನು ಪಕ್ಷ ಗುರುತಿಸುತ್ತದೆ ಎಂದು ಪಶ್ಚಿಮ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೋಹನ ಲಿಂಬಿಕಾಯಿ ಮಾತನಾಡಿದರು.
ಗುತ್ತಲ: ಪಕ್ಷಕ್ಕೊಸ್ಕರ ದುಡಿದರೆ ಅಧಿಕಾರ ಹುದ್ದೆ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ. ಚುನಾವಣೆಯಲ್ಲಿ ನಿಯತ್ತಿನಿಂದ ಸ್ವಾರ್ಥರಹಿತ ಕೆಲಸ ಮಾಡಿದವರನ್ನು ಪಕ್ಷ ಗುರುತಿಸುತ್ತದೆ ಎಂದು ಪಶ್ಚಿಮ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೋಹನ ಲಿಂಬಿಕಾಯಿ ಮಾತನಾಡಿದರು.ಪಟ್ಟಣದ ಸಂಗನಬಸವ ಕಲ್ಯಾಣ ಮಂಟಪದಲ್ಲಿ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣಾ ಪೂರ್ವಭಾವಿ ಸಭೆಯನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.
ಹಾವೇರಿ ಜಿಲ್ಲೆಯಲ್ಲಿ ಬಿಜೆಪಿ ತನ್ನ ಅಸ್ತಿತ್ವ ಕಳೆದುಕೊಂಡಿದೆ, ಬಿಜೆಪಿಯಲ್ಲಿ ಯಾವುದೇ ಸಮರ್ಥ ನಾಯಕನಿಲ್ಲದ ಪಕ್ಷವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಮುಖ್ಯಮಂತ್ರಿ ಆದ ನಂತರ ಮೊದಲ ಚುನಾವಣೆ ಇದಾಗಿದೆ. ಕಾಂಗ್ರೆಸ್ ಪಕ್ಷದ ರಾಷ್ಟ್ರ ಮತ್ತು ರಾಜ್ಯ ನಾಯಕರಲ್ಲದೇ ಸ್ಥಳೀಯ ಶಾಸಕರ ಒಮ್ಮತದ ಅಭ್ಯರ್ಥಿಯಾಗಿ ನನ್ನನ್ನು ಆಯ್ಕೆ ಮಾಡಿದ್ದಾರೆ. ಪದವೀಧರರ ಸಮಸ್ಯೆಗಳ ಬಗ್ಗೆ ಸರ್ಕಾರದಿಂದ ಪರಿಹಾರ ದೊರಕಿಸಿಕೊಡುವ ಕಾರ್ಯ ಮಾಡುವೆ. ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಈ ಚುನಾವಣೆಯಲ್ಲಿ ನನ್ನ ಗೆಲುವಿಗೆ ಶ್ರಮಿಸುತ್ತಿದ್ದಾರೆ. ಮತದಾರರ ಒಲವು ಸಹ ನನ್ನ ಮೇಲಿದೆ. ಗುತ್ತಲ ಮತಗಟ್ಟೆಯಲ್ಲಿ ವಿವಿಧ ಗ್ರಾಮಗಳ ಸುಮಾರು 997 ಮತದಾರರಿದ್ದು, ಎಲ್ಲರೂ ತಪ್ಪದೆ ಬಂದು ನನಗೆ ಮೊದಲ ಪ್ರಾಶಸ್ತ್ಯದ ಮತ ನೀಡುವಂತೆ ಕೋರಿದರು.ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಮಾತನಾಡಿ, ಲಿಂಬಿಕಾಯಿ ಅವರು ಪದವೀಧರರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಸಮರ್ಥ ವ್ಯಕ್ತಿಯಾಗಿದ್ದು ಇವರಿಗೆ ಪ್ರಥಮ ಪ್ರಾಶಸ್ತದ ಮತವನ್ನು ನೀಡಿ ಗೆಲ್ಲಿಸಬೇಕೆಂದು ಕರೆ ನೀಡಿದರು.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಜಿಲ್ಲಾ ಕಾಂಗ್ರೆಸ್ ಹಿರಿಯ ಉಪಾಧ್ಯಕ್ಷ ಸಿ.ಬಿ. ಕುರವತ್ತಿಗೌಡರ, ಪ.ಪಂ. ಸದಸ್ಯ ಎಸ್.ಜಿ. ಹೊನ್ನಪ್ಪನವರ ಮಾತನಾಡಿದರು. ಜಿಲ್ಲಾ ಗ್ಯಾರಂಟಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎಂ.ಎಂ. ಹಿರೇಮಠ, ಹಾವೇರಿ ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಭುಗೌಡ ಬಿಷ್ಟನಗೌಡ್ರ, ಕೆಸಿಸಿ ಬ್ಯಾಂಕ್ ನಿರ್ದೇಶಕ ಕೊಟ್ರೇಶಪ್ಪ ಬಸೇಗಣ್ಣಿ, ಆಶ್ರಯ ಕಮಿಟಿ ಸದಸ್ಯ ಶಹಜಾನಸಾಬ ಅಗಡಿ, ಪ.ಪಂ. ಸದಸ್ಯರು, ವಿವಿಧ ಗ್ರಾಮಗಳ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಪದವಿಧರ ಮತದಾರರು ಉಪಸ್ಥಿತರಿದ್ದರು
ತಾಲೂಕು ಕಾಂಗ್ರೆಸ್ ಅಧ್ಯಕ್ಷ ಎಂ.ಎಂ. ಮೈದೂರ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ.ಪಂ. ಸದಸ್ಯ ಪ್ರದೀಪ ಸಾಲಗೇರಿ ಸ್ವಾಗತಿಸಿದರು. ಪಿ.ಎನ್. ಹೇಮಗಿರಿಮಠ ಕಾರ್ಯಕ್ರಮ ನಿರೂಪಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.