ದೇಶ ಮೊದಲೆನ್ನುವ ರಾಷ್ಟ್ರ ಭಕ್ತರಿಗೆ ಸಲ್ಲುತ್ತದೆ ಏಕತಾ ನಡಿಗೆ: ಕೋಟಾ ಶ್ರೀನಿವಾಸ್‌ ಪೂಜಾರಿ

KannadaprabhaNewsNetwork |  
Published : Nov 14, 2025, 01:00 AM IST
ಚಿಕ್ಕಮಗಳೂರು ನಗರದಲ್ಲಿ ಗುರುವಾರ ನಡೆದ ಏಕತಾ ನಡಿಗೆಗೆ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಚಾಲನೆ ನೀಡಿದರು. | Kannada Prabha

ಸಾರಾಂಶ

ಚಿಕ್ಕಮಗಳೂರು, ನನಗಿಂತ, ನನ್ನ ಜಾತಿಗಿಂತ, ನನ್ನ ಧರ್ಮಕ್ಕಿಂತ ನನ್ನ ದೇಶ ಮೊದಲು ಎನ್ನುವ ರಾಷ್ಟ್ರ ಭಕ್ತರಿಗೆ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ 150 ನೇ ಜನ್ಮ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಈ ಏಕತಾ ನಡಿಗೆ ಸಲ್ಲುತ್ತದೆ ಎಂದು ಉಡುಪಿ - ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದರು.

- ಪ್ರಮುಖ ರಸ್ತೆಗಳಲ್ಲಿ ನಡೆದ ಏಕತಾ ಯಾತ್ರೆ । ಸಾರ್ವಜನಿಕರು, ಶಾಲಾ ಕಾಲೇಜು ವಿದ್ಯಾರ್ಥಿಗಳು ಭಾಗಿ,

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರುನನಗಿಂತ, ನನ್ನ ಜಾತಿಗಿಂತ, ನನ್ನ ಧರ್ಮಕ್ಕಿಂತ ನನ್ನ ದೇಶ ಮೊದಲು ಎನ್ನುವ ರಾಷ್ಟ್ರ ಭಕ್ತರಿಗೆ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ 150 ನೇ ಜನ್ಮ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಈ ಏಕತಾ ನಡಿಗೆ ಸಲ್ಲುತ್ತದೆ ಎಂದು ಉಡುಪಿ - ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದರು.ಕೇಂದ್ರ ಹಾಗೂ ರಾಜ್ಯ ಸರ್ಕಾರ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ, ಮೈ ಭಾರತ್ ಕೇಂದ್ರ (ಯುವ ವ್ಯವಹಾರಗಳು ಹಾಗೂ ಕ್ರೀಡಾ ಸಚಿವಾಲಯ) ಕುವೆಂಪು ವಿಶ್ವವಿದ್ಯಾನಿಲಯದ ಎನ್‌ಎಸ್‌ಎಸ್ ಘಟಕಗಳ ಸಹಯೋಗದಲ್ಲಿ ನಗರದ ಟೌನ್ ಕ್ಯಾಂಟೀನ್ ಸಮೀಪದಿಂದ ಹೊಸಮನೆ ಬಡಾವಣೆ ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕದವರೆಗೆ ಗುರುವಾರ ಆಯೋಜಿಸ ಲಾಗಿದ್ದ ಏಕತಾ ನಡಿಗೆಗೆ ಹಸಿರು ನಿಶಾನೆ ತೋರಿ ಮಾತನಾಡಿದರು. ಇಡೀ ರಾಷ್ಟ್ರ, ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಸಮಾಜ ಹೆಮ್ಮೆ ಪಡುವ ಏಕತಾ ನಡಿಗೆ ಕಾರ್ಯಕ್ರಮ ಹಮ್ಮಿಕೊಳ್ಳ ಲಾಗಿದೆ. ಹರಿದು ಹಂಚಿಹೋಗಿರುವ ಅನೇಕ ರಾಜರು, ರಾಜ್ಯಗಳನ್ನು ಅಗತ್ಯವಿದ್ದಾಗ ದಂಡ ಪ್ರಯೋಗದ ಮೂಲಕವೂ ಒಗ್ಗೂಡಿಸಿ ಭಾರತದ ಏಕತೆ ಕಾಪಾಡಿದವರು ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್. ಈ ಸಂದರ್ಭದಲ್ಲಿ ಅವರ ಹೆಸರು ನೆನಪಿಸಿಕೊಂಡು ಎಲ್ಲರೂ ಏಕತಾ ನಡಿಗೆಯಲ್ಲಿ ಪಾಲ್ಗೊಳ್ಳುವ ಮೂಲಕ ರಾಷ್ಟ್ರ ಮೊದಲು ಎನ್ನುವ ಕಲ್ಪನೆಗೆ ಒತ್ತು ಕೊಟ್ಟು ಕೆಲಸ ಮಾಡುವ ಕಾರ್ಯಕ್ರಮ ಇದಾಗಿದೆ ಎಂದರು. ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಮಾತನಾಡಿ, ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮ ದಿನಾಚರಣೆ ಪ್ರಯುಕ್ತ ಏಕತಾ ನಡಿಗೆ ಒಂದೆಡೆಯಾದರೆ, ಇನ್ನೊಂದೆಡೆ ಈ ದೇಶದ ವಂದೇ ಮಾತರಂ ಗೀತೆಗೂ 150 ವರ್ಷ ತುಂಬಿದೆ. ಆತ್ಮ ನಿರ್ಭರ ಭಾರತ ಎಂದು ನಮ್ಮ ಪ್ರಧಾನಿ ಘೋಷಣೆ ಮಾಡಿದ್ದಾರೆ. ಆತ್ಮನಿರ್ಭರ ಭಾರತ ಆಗಬೇಕೆನ್ನುವುದು ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಉದ್ದೇಶವಾಗಿದ್ದು, ನಮ್ಮೆಲ್ಲರ ಆಶಯವೂ ಆಗಿದೆ. ಯುವ ಪೀಳಿಗೆ ಎತ್ತ ಸಾಗಿದೆ ಎನ್ನುವ ಬಗ್ಗೆಯೂ ನಾವು ಅವಲೋಕನ ಮಾಡಬೇಕಾಗಿದೆ. 8 ಜ್ಞಾನಪೀಠ ಪ್ರಶಸ್ತಿಗಳನ್ನು ಪಡೆದಿರುವ ಕನ್ನಡ ಶ್ರೇಷ್ಠ ಭಾಷೆ. ರಾಷ್ಟ್ರ ಕವಿ ನೀಡಿರುವ ನಾಡಗೀತೆ ನಮ್ಮ ಸಂವಿಧಾನದ ಆಶಯ. ಸಂವಿಧಾನದ ಆಶಯದ ಬಗ್ಗೆ ಸರ್ದಾರ್ ವಲ್ಲಭಬಾಯಿ ಪಟೇಲ್ ರಾಷ್ಟ್ರದಲ್ಲಿ ಏಕತೆ ಮೂಡಿಸಿ ರಾಷ್ಟ್ರ ಪ್ರೇಮದ ಬಗ್ಗೆ ನಮ್ಮ ಯುವ ಪೀಳಿಗೆಯಲ್ಲಿ ಅಗತ್ಯ ವಿಚಾರಗಳನ್ನು ಪ್ರೇರೇಪಿಸಲು ಏಕತಾ ನಡಿಗೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು. ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಪ್ರಾಸ್ತಾವಿಕ ಮಾತನಾಡಿ, ಈ ಏಕತಾ ನಡಿಗೆ ಕಾರ್ಯಕ್ರಮ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮ ದಿನಾಚರಣೆ ಅಂಗವಾಗಿ ರಾಷ್ಟ್ರಾದ್ಯಂತ ನಡೆಯುತ್ತಿದ್ದು, ‘ಒನ್ ನೇಷನ್, ಒನ್ ವಿಷನ್’ ಇತ್ತೀಚಿನ ದಿನಗಳಲ್ಲಿ ಪ್ರಸ್ತುತವಾಗಿದೆ. ಪಟೇಲ್ ಅವರ ದೀರ್ಘ ದೃಷ್ಟಿಯನ್ನು ಸಾರುವ ಸಲುವಾಗಿ ಈ ನಡಿಗೆಯಲ್ಲಿ ಅವರ ಧ್ಯೇಯವನ್ನು ಜೀವನವಿಡೀ ಅಳವಡಿಸಿಕೊಳ್ಳುವಂತಾಗಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು. ಏಕತಾ ನಡಿಗೆಯಲ್ಲಿ ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಚ್.ಎಸ್.ಕೀರ್ತನಾ, ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ, ಪೌರಾಯುಕ್ತ ಬಿ.ಸಿ. ಬಸವರಾಜ್, ಮುಖಂಡರಾದ ಎಚ್.ಸಿ.ಕಲ್ಮರುಡಪ್ಪ, ಬೆಳವಾಡಿ ರವೀಂದ್ರ, ದೀಪಕ್ ದೊಡ್ಡಯ್ಯ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಸಾರ್ವಜನಿಕರು, ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. 13 ಕೆಸಿಕೆಎಂ 1ಚಿಕ್ಕಮಗಳೂರು ನಗರದಲ್ಲಿ ಗುರುವಾರ ನಡೆದ ಏಕತಾ ನಡಿಗೆಗೆ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಚಾಲನೆ ನೀಡಿದರು.

PREV

Recommended Stories

ಬೆಂಗಳೂರು 2ನೇ ದೆಹಲಿ ಆಗುವುದು ಸನ್ನಿಹಿತ!
ಏರ್‌ಪೋರ್ಟ್‌ನಿಂದ ದಾವಣಗೆರೆಗೆ ನೇರ ಫ್ಲೈಬಸ್‌ ಶುರು