ದೇಶದ ಜನತೆ ಪ್ರಧಾನಿ ಮೋದಿ ಆಡಳಿತ ಮೆಚ್ಚಿಕೊಂಡಿದ್ದಾರೆನರಗುಂದ: 3 ರಾಜ್ಯ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ಅಭೂತಪೂರ್ವ ಜಯವನ್ನು ಸಾಧಿಸುವ ಮೂಲಕ ಕಾಂಗ್ರೆಸ್ ಗ್ಯಾರಂಟಿ ಭಾಗ್ಯಗಳನ್ನು ಧಿಕ್ಕರಿಸಿ ಕಮಲವನ್ನು ಎತ್ತಿ ಹಿಡಿದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಬೆನ್ನಿಗೆ ದೇಶದ ಮತದಾರರು ಸದಾ ಇರುತ್ತಾರೆಂಬುದು ಸಾಬೀತಾಗಿದೆ ಎಂದು ಶಾಸಕ ಸಿ.ಸಿ. ಪಾಟೀಲ ಎಂದು ಹೇಳಿದರು. ಅವರು ಭಾನುವಾರ ಪಟ್ಟಣದ ಸ್ವಗೃಹದಲ್ಲಿನ ಬಿಜೆಪಿ ಸಭಾಭವನದಲ್ಲಿ ಮಾತನಾಡಿ, ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಛತ್ತೀಸ್‌ಗಢ ರಾಜ್ಯಗಳಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಜಯಭೇರಿ ಗಳಿಸಿದೆ. ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣೆ ಹಿಡಿದಿದ್ದರೂ ಬಿಜೆಪಿ ಕಳೆದ ಬಾರಿಗಿಂತ 8 ಸ್ಥಾನ ಹೆಚ್ಚು ಗಳಿಸಿದೆ. ದೇಶದ ಜನತೆ ಪ್ರಧಾನಿ ಮೋದಿಯವರ ಆಡಳಿತ ಮೆಚ್ಚಿಕೊಂಡಂತಾಗಿದೆ. ದೇಶದಲ್ಲಿ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್‌ಗೆ ಭವಿಷ್ಯವಿಲ್ಲ ಎಂದರು. ಮುಂಬರುವ ಲೋಕಸಭೆಯ 28 ಸ್ಥಾನಗಳನ್ನು ಬಿಜೆಪಿ ಗೆಲ್ಲುತ್ತದೆ. ರಾಜಸ್ಥಾನ ಹಾಗೂ ಛತ್ತೀಸ್‌ಗಢ ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿ ಇದ್ದರೂ ಸೋತಿದೆ. ಹೀನಾಯವಾಗಿ ಸೋತ ಕಾಂಗ್ರೆಸ್‌ನಲ್ಲಿ ರಾಜ್ಯದಲ್ಲಿ ಇನ್ಮುಂದಾದರೂ ಅಭಿವೃದ್ಧಿ ಕಾರ್ಯಗಳಿಗಾಗಿ ಭೂಮಿಪೂಜೆ ಹಮ್ಮಿಕೊಂಡು ಎಲ್ಲ ಮತಕ್ಷೇತ್ರಗಳಿಗೂ ಅನುದಾನವನ್ನು ಬಿಡುಗಡೆ ಮಾಡಿ, ಸುಧಾರಿಸಿಕೊಳ್ಳಿರೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲಹೆ ನೀಡಿದರು.