ಬಿಜೆಪಿ ದುರಾಡಳಿತದಿಂದ ಜಿಲ್ಲೆ ಜನತೆ ಬೇಸರ

KannadaprabhaNewsNetwork |  
Published : Jun 05, 2024, 12:31 AM IST
ಹೊನ್ನಾಳಿ ಫೋಟೋ 4ಎಚ್.ಎಲ್.ಐ1. ದಾವಣಗೆರೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೇಸ್ ಅಭ್ಯರ್ಥಿ ಡಾ.ಪ್ರಭಾಮಲ್ಲಿಕಾರ್ಜುನ್ ಅವರು ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಹೊನ್ನಾಳಿಯ ಯುವ ಕಾಂಗ್ರೇಸ್ ಮುಖಂಡರು ಸಂಗೊಳ್ಳಿ ರಾಯಣ್ಣ  ವೃತ್ತದ ಬಳಿ ಪಟಾಕಿ ಸಿಡಿಸಿ,ಸಿಹಿ ವಿತರಿಸಿ ವಿಜಯೋತ್ಸವ ಆಚರಿಸಿದರು.  | Kannada Prabha

ಸಾರಾಂಶ

ದಾವಣಗೆರೆ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಗೆಲುವು ಸಾಧಿಸಿದ ಹಿನ್ನೆಲೆ ಹೊನ್ನಾಳಿಯಲ್ಲಿ ಕಾಂಗ್ರೆಸ್ ಯುವ ಮುಖಂಡರು ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಾರ್ವಜನಿಕರಿಗೆ ಸಿಹಿ ವಿತರಿಸಿ ವಿಜಯೋತ್ಸವ ಆಚರಿಸಿದರು.

- ಡಾ.ಪ್ರಭಾ ಗೆಲವು ಹಿನ್ನೆಲೆ ವಿಜಯೋತ್ಸವದಲ್ಲಿ ಎಚ್‌.ಬಿ.ಅಣ್ಣಪ್ಪ ಆರೋಪ- - - ಕನ್ನಡಪ್ರಭ ವಾರ್ತೆ ಹೊನ್ನಾಳಿ

ದಾವಣಗೆರೆ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಗೆಲುವು ಸಾಧಿಸಿದ ಹಿನ್ನೆಲೆ ಹೊನ್ನಾಳಿಯಲ್ಲಿ ಕಾಂಗ್ರೆಸ್ ಯುವ ಮುಖಂಡರು ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಾರ್ವಜನಿಕರಿಗೆ ಸಿಹಿ ವಿತರಿಸಿ ವಿಜಯೋತ್ಸವ ಆಚರಿಸಿದರು.

ಪುರಸಭೆ ಮಾಜಿ ಸದಸ್ಯ ಎಚ್.ಬಿ.ಅಣ್ಣಪ್ಪ ಈ ಸಂದರ್ಭ ಮಾತನಾಡಿ, ಕಳೆದೆರಡು ದಶಕಗಳಿಂದ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲವು ಸಾಧಿಸುತ್ತಿದ್ದರು. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ದಾವಣಗೆರೆ ಕ್ಷೇತ್ರ ಕಾಂಗ್ರೆಸ್‌ ಕೈ ವಶವಾದಂತಾಗಿದೆ ಎಂದು ಹೇಳಿದರು.

ಎರಡು ದಶಕದಿಂದ ಜಿಲ್ಲೆಯ ಜನತೆ ಬಿಜೆಪಿ ದುರಾಡಳಿತದಿಂದ ಬೇಸತ್ತಿದ್ದಾರೆ. ಈ ಬಾರಿ ವಿದ್ಯಾವಂತ, ಜಿಲ್ಲೆಯ ಅಭಿವೃದ್ಧಿ ಬಗ್ಗೆ ತಮ್ಮದೇ ಆದ ನಿರೀಕ್ಷೆ ಹೊಂದಿರುವ ಸಜ್ಜನ ರಾಜಕಾರಣಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಜಿಲ್ಲೆಯ ಜನ ಆಶೀರ್ವದಿಸಿ, ಅಭಿವೃದ್ಧಿ ಪರ್ವಕ್ಕೆ ನಾಂದಿ ಹಾಡಿದ್ದಾರೆ ಎಂದರು.

ವಿಜಯೋತ್ಸವದಲ್ಲಿ ಯುವ ಮುಖಂಡರು ಕಾಂಗ್ರೆಸ್ ಪಕ್ಷದ ಬೃಹತ್ ಧ್ವಜ ಹಿಡಿದು ಜೈಕಾರ ಕೂಗುತ್ತ ಹರ್ಷವನ್ನು ವ್ಯಕ್ತಪಡಿಸಿದರು. ಅನಂತರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಾರ್ವಜನಿಕರಿಗೆ ಸಿಹಿ ವಿತರಿಸಿದರು.

ಯುವ ಮುಖಂಡರಾದ ವಿಜಯೇಂದ್ರಪ್ಪ, ರಾಜೇಂದ್ರ, ಮಾದಪ್ಪ, ಯುವ ಕಾಂಗ್ರೆಸ್ ಮುಖಂಡ ಎಚ್.ಎಸ್. ರಂಚಿತ್, ಸರಳಿನಮನೆ ರಾಜು, ಮಂಜಪ್ಪ, ದ್ಯಾಮಜ್ಜಿ ಗಿರಿ, ತನ್ವೀರ್ ಅಹಮ್ಮದ್, ಚಮನ್ ಸಾಬ್ ಸೇರಿದಂತೆ ಇತರರು ಇದ್ದರು.

- - - -4ಎಚ್.ಎಲ್.ಐ1:

ದಾವಣಗೆರೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಗೆಲುವು ಸಾಧಿಸಿದ ಹಿನ್ನೆಲೆ ಹೊನ್ನಾಳಿಯ ಯುವ ಕಾಂಗ್ರೆಸ್ ಮುಖಂಡರು ಸಂಗೊಳ್ಳಿ ರಾಯಣ್ಣ ವೃತ್ತ ಬಳಿ ಪಟಾಕಿ ಸಿಡಿಸಿ, ಸಿಹಿ ವಿತರಿಸಿ ವಿಜಯೋತ್ಸವ ಆಚರಿಸಿದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ