ಅಕ್ರಮ ಗಣಿಗಾರಿಕೆ ವಿರುದ್ದ ಸಿಡಿದೆದ್ದ ಜನತೆ

KannadaprabhaNewsNetwork |  
Published : May 10, 2026, 02:15 AM IST
ಅಕ್ರಮ ಗಣಿಗಾರಿಕೆ ನಡೆಯುತ್ತಿರುವ ಪ್ರದೇಶಕ್ಕೆ ಆದರಹಳ್ಳಿ ಗ್ರಾಮಸ್ಥರು ತೆರಳಿ ಪ್ರತಿಭಟನೆ ನಡೆಸುತ್ತಿರುವುದು. | Kannada Prabha

ಸಾರಾಂಶ

ಆದರಹಳ್ಳಿ ಗ್ರಾಮದಲ್ಲಿ ಕಳೆದ 15-20 ವರ್ಷಗಳಿಂದ ಕ್ರಷರ್ ಮಾಲೀಕರು ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆಗೆ ಸೇರಿದ ಜಮೀನಿನಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದಾರೆ. ಗ್ರಾಮದ ಪಕ್ಕದಲ್ಲಿ ಇರುವ ಅರಣ್ಯ ಇಲಾಖೆಯ ಗುಡ್ಡದ ಬಂಡೆ ಕಲ್ಲುಗಳನ್ನು ಸ್ಫೋಟಿಸಲು ಸಿಡಿಮದ್ದು ಬಳಸುತ್ತಿದ್ದಾರೆ.

ಲಕ್ಷ್ಮೇಶ್ವರ:

ಗ್ರಾಮದ ಮೀಸಲು ಅರಣ್ಯ ಪ್ರದೇಶದಲ್ಲಿಯೇ ಅಕ್ರಮ ಗಣಿಗಾರಿಕೆ ಅವ್ಯಾಹತವಾಗಿ ನಡೆಯುತ್ತಿದ್ದರು ಅಧಿಕಾರಿಗಳು ಕಣ್ಣುಚ್ಚಿ ಕುಳಿತಿದ್ದರಿಂದ ಸಿಡಿದೆದ್ದ ಆದರಹಳ್ಳಿ ಗ್ರಾಮಸ್ಥರು ಶನಿವಾರು ಪ್ರತಿಭಟನೆ ನಡೆಸಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಆದರಹಳ್ಳಿ ಗ್ರಾಮದಲ್ಲಿ ಕಳೆದ 15-20 ವರ್ಷಗಳಿಂದ ಕ್ರಷರ್ ಮಾಲೀಕರು ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆಗೆ ಸೇರಿದ ಜಮೀನಿನಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದಾರೆ. ಗ್ರಾಮದ ಪಕ್ಕದಲ್ಲಿ ಇರುವ ಅರಣ್ಯ ಇಲಾಖೆಯ ಗುಡ್ಡದ ಬಂಡೆ ಕಲ್ಲುಗಳನ್ನು ಸ್ಫೋಟಿಸಲು ಸಿಡಿಮದ್ದು ಬಳಸುತ್ತಿದ್ದಾರೆ. ಇದರಿಂದ ಗ್ರಾಮದ ಮನೆಗಳು ಬಿರುಕು ಬಿಟ್ಟಿವೆ ಎಂದು ಆರೋಪಿಸಿದರು.

ಬೃಹತ್‌ ಭಾರದೊಂದಿಗೆ ನಿತ್ಯ ನೂರಾರು ಟಿಪ್ಪರ್‌ಗಳು ಗ್ರಾಮದಲ್ಲಿ ಓಡಾಡುತ್ತಿರುವುದು ಧೂಳು ಉಂಟಾಗಿ ಅನೇಕ ರೋಗ-ರುಜಿನಗಳಿಗೆ ಜನರು ತುತ್ತಾಗುತ್ತಿದ್ದಾರೆ. ಟಿಪ್ಪರ್‌ಗಳು ನಿಗದಿಕ್ಕಿಂತ ಹೆಚ್ಚಿನ ಪ್ರಮಾಣದ ಲೋಡ್‌ ಮಾಡಿಕೊಂಡು ಹೋಗುತ್ತಿರುವುದರಿಂದ ರಸ್ತೆಗಳು ಹಾಳಾಗಿವೆ. ಇದರಿಂದ ವಾಹನಗಳ ಸವಾರರು ಕೈಯಲ್ಲಿ ಜೀವ ಹಿಡಿದುಕೊಂಡು ಪ್ರಮಾಣಿಸುವಂತೆ ಆಗಿದೆ. ಇನ್ನೊಂದೆಡೆ ಭಾರಿ ಪ್ರಮಾಣದ ಸಿಡಿ ಮದ್ದು ಸಿಡಿಸುತ್ತಿರುವುದರಿಂದ ಕೊಳವೆ ಬಾವಿಗಳ ಜಲಾಶಯದ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿವೆ. ಇಷ್ಟೆಲ್ಲ ಅನಾಹುತ ಆಗುತ್ತಿದ್ದರು ಅಧಿಕಾರಿಗಳ ಮೌನವಹಿಸಿರುವುದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಆದರಹಳ್ಳಿ ಗ್ರಾಮವು ಕಪ್ಪತ್ತಗುಡ್ಡ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಬರುವುದರಿಂದ ಸರ್ಕಾರ ಕಪ್ಪತ್ತಗುಡ್ಡದ ಅರಣ್ಯ ಪ್ರದೇಶದಿಂದ 10 ಕಿಮಿ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಡೆಸಲು ಅವಕಾಶ ನೀಡಿಲ್ಲ. ಆದರೂ ಇಲ್ಲಿ ಗಣಿಗಾರಿಕೆ ನಡೆಯುತ್ತಿದ್ದರೂ ಅಧಿಕಾರಿಗಳು ಮೌನ ವಹಿಸಿರುವುದು ಏಕೆ ಎಂದು ಪ್ರಶ್ನಿಸಿದ್ದಾರೆ.

ಜಿಲ್ಲಾಧಿಕಾರಿ, ಅರಣ್ಯ ಇಲಾಖೆ ಮತ್ತು ಗಣಿ ಇಲಾಖೆ ಅಧಿಕಾರಿಗಳು ಮಧ್ಯಪ್ರವೇಶಿಸಿ ಈ ಅಕ್ರಮ ಚಟುವಟಿಕೆ ನಿಲ್ಲಿಸಬೇಕು. ಜಿಲ್ಲಾಧಿಕಾರಿಗಳು ಖುದ್ದು ಭೇಟಿ ನೀಡಿ ಪರಿಶೀಲಿಸಿ ಸೂಕ್ತ ಕ್ರಮ ಜರುಗಿಸಬೇಕು. ಅಕ್ರಮ ಗಣಿಗಾರಿಕೆ ಸ್ಫೋಟದಿಂದ ಹಾನಿಯಾದ ಮನೆಗಳಿಗೆ ಸೂಕ್ತ ಪರಿಹಾರ ನೀಡಬೇಕೆಂದು ಪ್ರತಿಭಟನಾನಿರತರು ಆಗ್ರಹಿಸಿದ್ದಾರೆ.

ಈ ವೇಳೆ ಕಿರಣ ಲಮಾಣಿ, ಉಮೇಶ ಲಮಾಣಿ, ನರಸಪ್ಪ ಡಾವು, ಕೃಷ್ಣ ನಾಯಕ, ರಮೇಶ ಲಮಾಣಿ, ದೇವಪ್ಪ ಲಮಾಣಿ, ಆನಂದ ಲಮಾಣಿ, ಪ್ರಕಾಶ ಲಮಾಣಿ, ಶೇಖಪ್ಪ ಲಮಾಣಿ, ಶಂಕ್ರಪ್ಪ ಲಮಾಣಿ, ಮಹಾಂತೇಶ ಲಮಾಣಿ, ರವಿ ಲಮಾಣಿ, ದುಂಡಪ್ಪ ಲಮಾಣಿ, ಅಪ್ಪಣ್ಣ ಲಮಾಣಿ, ಪ್ರಕಾಶ ಲಮಾಣಿ ಸೇರಿದಂತೆ ಅನೇಕ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

₹1 ಕೋಟಿ ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣ: ಕನಕ ಶ್ರೀ
ತೆಗ್ಗಿನಮಠದಿಂದ ಅನ್ನ, ಅಕ್ಷರ ಜತೆ ಧರ್ಮಕಾರ್ಯ: ಸಂಸದ ಇ.ತುಕಾರಾಂ