ಕಾಂಗ್ರೆಸ್ ಜಾರಿಗೆ ತಂದ ಯೋಜನೆ ನಿಲ್ಲಿಸಲು ಸಾಧ್ಯವಿಲ್ಲ: ಸಚಿವ ತಿಮ್ಮಾಪುರ

KannadaprabhaNewsNetwork |  
Published : Mar 02, 2026, 03:15 AM IST
ಲೋಕಾಪುರ | Kannada Prabha

ಸಾರಾಂಶ

ಲೋಕಾಪುರ ಪಪಂ ವ್ಯಾಪ್ತಿಯ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆಯನ್ನು ಜಿಲ್ಲಾ ಉಸ್ತುವಾರಿ ಆರ್.ಬಿ. ತಿಮ್ಮಾಪುರ ಚಾಲನೆ ನೀಡಿದರು. ಸದುಗೌಡ ಪಾಟೀಲ, ಅಶೋಕ ಕಿವಡಿ, ಶಿವಾನಂದ ಉದಪುಡಿ, ಲಕ್ಷ್ಮಣ ಮಾಲಗಿ, ಸಂಗಪ್ಪ ಇಮ್ಮನ್ನವರ, ಭೀಮನಗೌಡ ಪಾಟೀಲ, ಗುರುರಾಜ ಉದಪುಡಿ ಇತರರು ಇದ್ದರು.

ಕನ್ನಡಪ್ರಭ ವಾರ್ತೆ ಲೋಕಾಪುರ

ಬಡವರ ಬದುಕಿನಲ್ಲಿ ಬದಲಾವಣೆ ತರಲು ಕಾಂಗ್ರೆಸ್ ಸರ್ಕಾರ ತಂದಿರುವ ಯೋಜನೆಗಳನ್ನು ನಿಲ್ಲಿಸಲು ಯಾವುದೇ ಸರ್ಕಾರಗಳಿಂದ ಸಾಧ್ಯವಿಲ್ಲ, ಇದು ಬಡವರ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಇರುವ ಬದ್ಧತೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದರು.

ಲೋಕಾಪುರ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿನ ₹೬೫೦ ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿ, ಕಾಂಗ್ರೆಸ್ ಸರಕಾರ ವಿವಿಧ ಜನಪರ ಯೋಜನೆಗಳ ಮೂಲಕ ಬಡವರ ಬದುಕಿನಲ್ಲಿ ಬದಲಾವಣೆ ತಂದಿದೆ. ವಿರೋಧ ಪಕ್ಷದವರಿಗೆ ಅಭಿವೃದ್ಧಿ ಅಂದರೆ ಕೇವಲ ರಸ್ತೆ ಸುಧಾರಣೆ ಮಾಡುವುದು, ಸಮುದಾಯ ಭವನ ನಿರ್ಮಿಸುವುದು, ಅಷ್ಟೇ ಬದಲಾವಣೆ ಎಂದು ತಿಳಿದುಕೊಂಡಿದ್ದಾರೆ.

ಆದರೆ ಕಾಂಗ್ರೆಸ್ ಸರಕಾರ ಜನಪರ ಯೋಜನೆಗಳೊಂದಿಗೆ ಬಡವರ ಹೊಟ್ಟೆ ತುಂಬುವ ಕೆಲಸ ಮಾಡಿದೆ. ಅಭಿವೃದ್ಧಿ ಹಣ ಇಲ್ಲ ಎಂದು ಬೊಬ್ಬೆ ಹಾಕುತ್ತಿರುವ ವಿರೋಧ ಪಕ್ಷದವರಿಗೆ ಬಡವರು ಸ್ವಾಭಿಮಾನದಿಂದ ಬದುಕು ಕಟ್ಟಿಕೊಡುವುದೇ ಕಾಂಗ್ರೆಸ್‌ ಸರ್ಕಾರದ ಬದ್ಧತೆ ಎಂದು ಹೇಳಿದರು.

ಬಡವರು ಮತ್ತು ಹಿಂದುಳಿದ ವರ್ಗದ ಜನರ ಜೀವನ ಮಟ್ಟ ಸುಧಾರಿಸಲು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಫಲಪ್ರದವಾಗಿದ್ದು, ಎಲ್ಲ ವರ್ಗದವರಿಗೆ ಆರ್ಥಿಕ ಸಬಲತೆ ತಂದುಕೊಟ್ಟಿವೆ. ಮಹಿಳೆಯರು ಉಚಿತವಾಗಿ ರಾಜ್ಯಾದ್ಯಂತ ಬಸ್ಸಿನಲ್ಲಿ ಉಚಿತ ಪ್ರಯಾಣದ ಸೌಲಭ್ಯ ಜಾರಿಗೊಂಡಿರುವ ಶಕ್ತಿ ಯೋಜನೆ ರಾಜ್ಯದ ಹಲವಾರು ಕುಟುಂಬಗಳಿಗೆ ಆರ್ಥಿಕ ನೆಮ್ಮದಿ ನೀಡಿದ್ದು, ಇದರಿಂದ ದೈನಂದಿನ ವರದಾನವಾಗಿ ಪರಿಣಮಿಸಿದೆ ಎಂದು ಹೇಳಿದರು.

ಶೀಘ್ರದಲ್ಲಿ ಲೋಕಾಪುರ ಪಟ್ಟಣಕ್ಕೆ ೨೪/೭ ಕುಡಿಯುವ ನೀರಿನ ಕಾಮಗಾರಿ ಪ್ರಮಾಣಿಕವಾಗಿ ಮಾಡಲು ₹೪೦ ಲಕ್ಷ ನೀಡಲು ಬದ್ಧ ಉಳಿದ ಹಣವನ್ನು ಪಟ್ಟಣ ಪಂಚಾಯಯತಿ ನಿರ್ವಹಿಸಲು ಸೂಚಿಸಿದರು.

ಮುಳಗಡೆ ರೈತರಿಗೆ ನೀರಾವರಿಗೆ ಎಕರೆಗೆ ₹೪೦ ಲಕ್ಷ, ಒಣಬೇಸಾಯ ಎಕರೆಗೆ ₹೩೦ ಲಕ್ಷ ಅಂತಿಮಗೊಳಿಸಲಾಗಿದೆ. ರೈತರು ಕಬ್ಬಿನ ಬೆಂಬಲ ಬೆಲೆಗೆ ಹೋರಾಟ ಮಾಡಿದಾಗ ಸರಕಾರ ಘೋಷಿಸಿದ ಟನ್ ಬೆಂಬಲ ಬೆಲೆ ₹೩೦೦ ಕೋಟಿ ರೈತರ ಖಾತೆಗೆ ಜಮಾ ಮಾಡಲಾಗಿದೆ.

ವಿರೋಧ ಪಕ್ಷದವರು ಜನರ ಬದುಕಿನ ಪ್ರಶ್ನೆಗಳನ್ನು ಪಕ್ಕಕ್ಕಿಟ್ಟು ಕೇವಲ ಕೋಮು ಭಾವನೆ ಕೆರಳಿಸುತ್ತಿದೆ. ಯುವಕರು ಯಾವುದಕ್ಕೂ ಬಲಿಯಾಗಬಾರದು ಎಂದು ಕಿವಿಮಾತು ಹೇಳಿದರು.

ಮುಖಂಡರಾದ ಮುಧೋಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದುಗೌಡ ಪಾಟೀಲ, ಲೋಕಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕಿವಡಿ, ಬಿಡಿಸಿಸಿ ಬ್ಯಾಂಕ ಮಾಜಿ ಉಪಾಧ್ಯಕ್ಷ ಶಿವಾನಂದ ಉದಪುಡಿ, ಕೆಎಂಎಫ್ ನಿರ್ದೇಶಕ ಲಕ್ಷ್ನಣ ಮಾಲಗಿ, ಎಪಿಎಂಸಿ ಅಧ್ಯಕ್ಷ ಸಂಗಪ್ಪ ಇಮ್ಮನ್ನವರ, ಗುರುರಾಜ ಉದಪುಡಿ, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಉಪಾಧ್ಯಕ್ಷ ರಫೀಕ್‌ ಬೈರಕದಾರ, ಲೋಕಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಭೀಮನಗೌಡ ಪಾಟೀಲ, ಪಿಕೆಪಿಎಸ್ ಮಾಜಿ ಅಧ್ಯಕ್ಷ ಆನಂದ ಹಿರೇಮಠ, ಮುತ್ತಪ್ಪ ಚೌಧರಿ, ರವಿ ರೊಡ್ಡಪ್ಪನವರ, ಕೆಡಿಪಿ ಸದಸ್ಯ ದುರಗಪ್ಪ ಕಾಳಮ್ಮನವರ, ಕುಮಾರ ಕಾಳಮ್ಮನವರ, ಲೋಕಣ್ಣ ಉಳ್ಳಾಗಡ್ಡಿ, ಪಪಂ ಮುಖ್ಯಾಧಿಕಾರಿ ಅಶೋಕ ಪೂಜೇರ, ರೆಹೆಮಾನ್ ತೊರಗಲ್, ಸುರೇಶ ಪೂಜಾರ, ಗಣಪತಿ ಗಸ್ತಿ, ಸುಲ್ತಾನ ಕಲಾದಗಿ, ವಿವಿಧ ಇಲಾಖೆಯ ಅಧಿಕಾರಿಗಳು, ಲೋಕಾಪುರ-ಠಾಣಿಕೇರಿ ಪಟ್ಟಣದ ಕಾಂಗ್ರೆಸ್ ಮುಖಂಡರು, ಸಾರ್ವಜನಿಕರು, ಪಪಂ ಸಿಬ್ಬಂದಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಹಿಳೆಯರ ಸೈನ್ಯ ಕಟ್ಟಿ ನಾಡರಕ್ಷಿಸಿದ್ದ ಮಲ್ಲಮ್ಮ
ಜನಸ್ನೇಹಿ‌ ಪೊಲೀಸ್ ಅಧಿಕಾರಿಗೆ ಸಹಸ್ರಾರು ಅಭಿಮಾನಿಗಳ ಕಂಬನಿ