ಸರ್ಕಾರದ ವಿರುದ್ಧ ಮಾತನಾಡುವವರ ಬಾಯಿಮುಚ್ಚಿಸುವ ಹುನ್ನಾರ

KannadaprabhaNewsNetwork |  
Published : Dec 25, 2025, 02:30 AM IST
24ಎಂಡಿಜಿ1,ಮುಂಡರಗಿ ಪಟ್ಟಣದಲ್ಲಿ ಬಿಜೆಪಿ ಮುಂಡರಗಿ ಮಂಡಲ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

ಸರ್ಕಾರದ ವಿರುದ್ಧ ಮಾತನಾಡುವವರ ಬಾಯಿ ಮುಚ್ಚಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತರುತ್ತಿರುವ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ ವಿರೋಧಿಸಿ ಬಿಜೆಪಿ ಮುಂಡರಗಿ ಮಂಡಲ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿ, ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಮುಂಡರಗಿ: ಸರ್ಕಾರದ ವಿರುದ್ಧ ಮಾತನಾಡುವವರ ಬಾಯಿ ಮುಚ್ಚಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತರುತ್ತಿರುವ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ ವಿರೋಧಿಸಿ ಬಿಜೆಪಿ ಮುಂಡರಗಿ ಮಂಡಲ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿ, ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಕರಬಸಪ್ಪ ಹಂಚಿನಾಳ, ಆನಂದಗೌಡ ಪಾಟೀಲ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕವನ್ನು ಜಾರಿಗೊಳಿಸಬಾರದು. ಇದು ಭಾರತದ ಸಂವಿಧಾನಕ್ಕೆ ವಿರುದ್ಧವಾಗಿದೆ. ಸಂವಿಧಾನದಲ್ಲಿ ಎಲ್ಲರಿಗೂ ಮಾತನಾಡುವ ಹಕ್ಕಿದೆ. ಸಾರ್ವಜನಿಕರ ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ. ದ್ವೇಷ ಭಾಷಣಕ್ಕೆ ನೀಡಿರುವ ವ್ಯಾಖ್ಯಾನವೇ ಅಸ್ಪಷ್ಟವಾಗಿದೆ. ಸರ್ಕಾರದ ನೀತಿಗಳ ವಿರುದ್ಧ ಟೀಕೆ, ಸಾಮಾಜಿಕ ಚರ್ಚೆ, ವ್ಯಂಗ್ಯ ಮಾಡುವುದು ಅಥವಾ ಸತ್ಯ ಹೇಳುವುದನ್ನೂ ಕೂಡ ದ್ವೇಷ ಎಂದು ಪರಿಗಣಿಸುವುದು ಸರಿಯಲ್ಲ. ಇದನ್ನು ಯಾವುದೆ ಕಾರಣಕ್ಕೂ ಜಾರಿಗೊಳಿಸಬಾರದು ಎಂದು ಒತ್ತಾಯಿಸಿದರು.

ಮಹಿಳಾ ಘಟಕದ ಅಧ್ಯಕ್ಷೆ ಪವಿತ್ರಾ ಕಲ್ಲಕುಟಗರ ಮಾತನಾಡಿ, ಇದು ಪ್ರಜಾಪ್ರಭುತ್ವದ ಮೂಲತತ್ವಕ್ಕೆ ಹಾನಿ ಅಷ್ಟೇ ಅಲ್ಲ, ಪ್ರಜಾಪ್ರಭುತ್ವದ ಕತ್ತು ಹಿಸುಕುವ ಯತ್ನವಾಗಿದೆ. ಸರ್ಕಾರ ತಕ್ಷಣವೇ ಇದನ್ನು ಕೈ ಬಿಡಬೇಕು ಎಂದರು.

ಗ್ರೇಡ್-2 ತಹಸೀಲ್ದಾರ್ ಕೆ. ರಾಧಾ ಮನವಿ ಸ್ವೀಕರಿಸಿದರು.

ಕುಮಾರಸ್ವಾಮಿ ಹಿರೇಮಠ, ಬಸವರಾಜ ಬಿಳಿಮಗ್ಗದ, ಕೊಟ್ರೇಶ ಅಂಗಡಿ, ಪರುಶುರಾಮ ಕರಡಿಕೊಳ್ಳ, ಎಸ್.ಎಸ್. ಗಡ್ಡದ, ಶಿವಕುಮಾರ ಕುರಿ, ಪವನ್ ಮೇಟಿ, ಸಿದ್ದು ದೇಸಾಯಿ, ದೇವು ಹಡಪದ, ರವಿಗೌಡ ಪಾಟೀಲ, ಶಿವನಗೌಡ ಗೌಡರ, ಚಿನ್ನಪ್ಪ ವಡ್ಡಟ್ಟಿ, ಮಲ್ಲಿಕಾರ್ಜುನ ಹಣಜಿ, ರಮೇಶ ಹುಳಕಣ್ಣವರ, ಶ್ರೀನಿವಾಸ ಅಬ್ಬಿಗೇರಿ, ಮೈಲಾರಪ್ಪ ಕಲಕೇರಿ, ಯಲ್ಲಪ್ಪ ಗಣಾಚಾರಿ, ರವಿ ಲಮಾಣಿ, ಬಸವರಾಜ ಚಿಗಣ್ಣವರ, ಮಂಜುನಾಥ ಮುಧೋಳ, ಶಂಕರ ಉಳ್ಳಾಗಡ್ಡಿ, ಸೋಮರಡ್ಡಿ ಮುದ್ದಾಬಳ್ಳಿ, ಅಮರಗೋಳ ಹಿರೇಮಠ, ಜ್ಯೋತಿ ಹಾನಗಲ್ಲ, ಅರುಣಾ ಪಾಟೀಲ, ವೀಣಾ ಬೂದಿಹಾಳ, ರಾಧಾ ಬಾರಿಕೇರ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಂಭ್ರಮದ ಕ್ರಿಸ್‌ಮಸ್‌ ಆಚರಣೆಗೆ ಕ್ಷಣಗಣನೆ
ಮಹಿಳೆ, ಮಕ್ಕಳ ಮೇಲಿನ ದೌರ್ಜನ್ಯ ತಡೆಯಲು ಶ್ರಮಿಸಲಿ: ಮಂಜುನಾಥ ಕಂಬಳಿ