ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಎನ್.ಜಿ.ರಮೇಶ್, ಶ.ಸಾ.ಪ. ಅಧ್ಯಕ್ಷ ಟಿ.ದಾದಾಪೀರ್ ಗೆ ಸನ್ಮಾನ
ಬಡವರಿಗೆ ಮತ್ತು ದೀನದಲಿತರಿಗೆ ಸಹಾಯ ಮಾಡಬೇಕು ಎಂದು ಬೆಂಗಳೂರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ರಾಜ್ಯ ಸಮಿತಿ ಸದಸ್ಯ, ಹಿರಿಯ ವಕೀಲ ಎಸ್.ಸುರೇಶ್ ಚಂದ್ರ ಹೇಳಿದ್ದಾರೆ.ಮಂಗಳವಾರ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ವಿವಿಧ ಸಂಘಟನೆಳಿಂದ ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಎನ್.ಜಿ.ರಮೇಶ್ ಮತ್ತು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ತರೀಕೆರೆ ತಾಲೂಕು ಘಟಕದ ಅಧ್ಯಕ್ಷ ಟಿ.ದಾದಾಪೀರ್ ಅವರಿಗೆ ಏರ್ಪಡಿಸಿದ್ದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.ಎನ್.ಜಿ.ರಮೇಶ್ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷರಾಗಿರುವುದು ಹಾಗೂ ಸಾಹಿತಿ ಟಿ. ದಾದಾಪೀರ್ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ತರೀಕೆರೆ ತಾಲೂಕು ಘಟಕಕ್ಕೆ ಅಧ್ಯಕ್ಷರಾಗಿರುವುದು ಸಂತೋಷ ತಂದಿದೆ. ಇಬ್ಬರು ಮಹನೀಯರು ಉತ್ತಮ ಕಾರ್ಯಗಳನ್ನು ನಿರ್ವಹಿಸಲಿ ಎಂದು ಶುಭ ಕೋರಿದರು.
ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ರವಿ ಮಾತನಾಡಿ ಎನ್.ಜಿ.ರಮೇಶ್ ಅವರು ನನಗೆ ಆತ್ಮಿಯರು, ಅವರು ಗ್ರಾಮ ಪಂಚಾಯಿತಿ ಸದಸ್ಯರಾಗಿ ಉತ್ತಮ ಕೆಲಸ ಕಾರ್ಯ ನಿರ್ನಹಿಸುತ್ತಿದ್ದಾರೆ. ಇದೀಗ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಗೆ ಅಧ್ಯಕ್ಷರಾಗಿರುವುದು, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ಸಾಹಿತಿ ಟಿ.ದಾದಾಪೀರ್ ನೇಮಕವಾಗಿರುವುದು ಸಂತೋಷ ತಂದಿದೆ ಎಂದು ಹೇಳಿದರು.ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಕೃಷ್ಣಾನಾಯಕ್ ಮಾತನಾಡಿ ಎನ್.ಜಿ.ರಮೇಶ್ ಬಹಳ ಕಷ್ಟಪಟ್ಟು ಪತ್ರಿಕಾ ರಂಗ ದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇದೀಗ ಕ್ಷೇತ್ರದ ಶಾಸಕ ಜಿ.ಎಚ್.ಶ್ರೀನಿವಾಸ್ ಇವರನ್ನು ಗುರುತಿಸಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ, ಉತ್ತಮ ಕಾರ್ಯ ನಿರ್ವಹಿಸಲಿ ಎಂದು ಆಶಿಸಿದರು.ಜಯಕರ್ನಾಟಕ ಸಂಘಟನೆ ತಾಲೂಕು ಅಧ್ಯಕ್ಷ ಜಗದೀಶ್ ಮಾತನಾಡಿ ಕಷ್ಟಪಟ್ಟರೆ ಸಾಧನೆ ಸಾಧ್ಯ. ಶಾಸಕ ಜಿ.ಎಚ್.ಶ್ರೀನಿವಾಸ್ ಅವರ ನೇತೃತ್ವದಲ್ಲಿ ಎನ್.ಜಿ.ರಮೇಶ್ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಗೆ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ. ಅ.ಭಾ. ಶ.ಸಾ.ಪರಿಷತ್ತು ತಾಲೂಕು ಅದ್ಯಕ್ಷರಾಗಿ ಸಾಹಿತಿ ಟಿ.ದಾದಾಪೀರ್ ನೇಮಕವಾಗಿದ್ದಾರೆ. ಇಬ್ಬರು ಮಹನೀಯರನ್ನು ಗುರುತಿಸಿ ಸನ್ಮಾನಿಸಿರುವುದು ಸಂತೋಷ ತಂದಿದೆ ಎಂದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ನಾಗೇಂದ್ರಪ್ಪ, ಪತ್ರಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.10ಕೆಟಿಆರ್.ಕೆ.4ಃ