ಕನ್ನಡ ಸಾಹಿತ್ಯದ ಶಕ್ತಿ ಅಗಣಿತ: ಡಾ.ಬೆಸೂರು ಮೋಹನ್ ಪಾಳೇಗಾರ್

KannadaprabhaNewsNetwork |  
Published : Oct 30, 2025, 02:45 AM IST
ಕನ್ನಡ ಭಾಷೆಯ ಕಾವ್ಯ ಮತ್ತು ಸಾಹಿತ್ಯವನ್ನು ಬೇರೆ ಭಾಷೆಗಳಿಗೆ ತರ್ಜುಮೆ ಮಾಡಲು ಕಷ್ಟಕರ | Kannada Prabha

ಸಾರಾಂಶ

ಕನ್ನಡ ಭಾಷೆಯ ಸಾಹಿತ್ಯವನ್ನು ಬೇರೆ ಭಾಷೆಗಳಿಗೆ ತರ್ಜುಮೆ ಮಾಡಲು ಬಹಳ ಕಷ್ಟವಾಗುತ್ತದೆ. ಇದು ಕನ್ನಡ ಸಾಹಿತ್ಯದ ಶಕ್ತಿ ಎಂದು ಡಾ. ಬೆಸೂರು ಮೋಹನ್‌ ಹೇಳಿದರು.

ಕನ್ನಡಪ್ರಭವಾರ್ತೆ ಸೋಮವಾರಪೇಟೆ

ಕನ್ನಡ ಭಾಷೆಯ ಕಾವ್ಯ ಮತ್ತು ಸಾಹಿತ್ಯವನ್ನು ಬೇರೆ ಭಾಷೆಗಳಿಗೆ ತರ್ಜುಮೆ ಮಾಡಲು ಬಹಳಷ್ಟು ಕಷ್ಟವಾಗುತ್ತದೆ. ಇದು ಕನ್ನಡ ಸಾಹಿತ್ಯದ ಶಕ್ತಿ ಎಂದು ಸಾಹಿತಿ ಮತ್ತು ಜಾನಪದ ವಿದ್ವಾಂಸರಾದ ಡಾ.ಬೆಸೂರು ಮೋಹನ್ ಪಾಳೇಗಾರ್ ಅಭಿಪ್ರಾಯಿಸಿದರು.

ಕನ್ನಡ ಸಾಹಿತ್ಯ ಪರಿಷತ್ ಸೋಮವಾರಪೇಟೆ ತಾಲೂಕು, ಮಹಿಳಾ ಸಹಕಾರ ಸಂಘ, ಅಕ್ಷಯ ಮಹಿಳಾ ಪತ್ತಿನ ಸಹಕಾರ ಸಂಘ, ಅಕ್ಕನ ಬಳಗ ಆಶ್ರಯದಲ್ಲಿ ಇಲ್ಲಿನ ಮಹಿಳಾ ಸಮಾಜದಲ್ಲಿ ಭಾನುವಾರ ನಡೆದ ಹಿರಿಯ ಸಾಹಿತಿ ಜಲಜಾ ಶೇಖರ್ ಅವರ ಬರೆದಿರುವ “ಕನ್ನಡಿಯ ಪ್ರತಿಬಿಂಬ” ಕವನ ಸಂಕಲನ ಮತ್ತು “ದೂರದ ತೀರ ಯಾನ” ಪ್ರವಾಸ ಕಥನ ಪುಸ್ತಕಗಳನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಕೃತಿ ಮತ್ತು ಕಾವ್ಯವನ್ನು ವಿಮರ್ಶೆಯ ಹೆಸರಿನಲ್ಲಿ ವಿಪರೀತ ಟೀಕೆ ಮಾಡಿದರೆ, ಒಬ್ಬ ಸಾಹಿತಿ ಮತ್ತು ಕವಿ, ಸಾಹಿತ್ಯ ಕೃಷಿಯನ್ನೇ ತ್ಯಜಿಸುವ ಸಂಭವಿರುತ್ತದೆ. ಪ್ರತಿಯೊಬ್ಬರು ಅವರ ಭಾಷಾ ಜ್ಞಾನಕ್ಕೆ ಅನುಗುಣವಾಗಿ ಬರೆದಿರುತ್ತಾರೆ. ಅದು ಸಾಮಾನ್ಯ ಓದುಗನಿಗೆ ಅರ್ಥವಾದರೆ ಸಾಕು ಎಂದು ಅಭಿಪ್ರಾಯಿಸಿದರು.ಸಾಹಿತಿ ಜಲಜಾ ಶೇಖರ್ ಅವರ ಕೃತಿಗಳನ್ನು ಓದುವಾಗ ಲೇಖಕರ ಒಳನೋಟ, ಭಾವ ಜಗತ್ತು, ಬರವಣಿಗೆಯ ವಿಭಿನ್ನಶೈಲಿ, ಭಾಷಾ ವಿನ್ಯಾಸ, ವಿಷಯ ವೈವಿಧ್ಯತೆ ಓದುಗರಿಗೂ ರುಚಿಸುತ್ತದೆ ಎಂದು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿದ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಜಿಲ್ಲಾಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ಕನ್ನಡ ಭಾಷಾ ಬೆಳವಣಿಗೆಯಲ್ಲಿ ಶಿಕ್ಷಕರಾಗಿ, ಸಾಹಿತಿಯಾಗಿ ಜಲಜಾ ಶೇಖರ್ ಅವರು ತಮ್ಮ ಕೊಡುಗೆ ನೀಡಿದ್ದಾರೆ. ಈಗಾಗಲೇ ಏಳು ಕೃತಿಗಳನ್ನು ಪ್ರಕಟಿಸಿದ್ದಾರೆ. ಅವರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ಗೌರವ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಅವರ ಕನ್ನಡ ಸಾಹಿತ್ಯ ಸೇವೆ ಮುಂದುವರಿಯಲಿ ಎಂದು ಹಾರೈಸಿದರು.ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ಡಿ.ವಿಜೇತ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಎಸ್.ಎ.ಮುರಳೀಧರ್, ಅಕ್ಷಯ ಪತ್ತಿನ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆ ಬೇಬಿ ಚಂದ್ರಹಾಸ್, ಅಕ್ಕನ ಬಳಗ ಅಧ್ಯಕ್ಷೆ ಗೀತಾ ರಾಜು, ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷರಾದ ಜೆ.ಸಿ.ಶೇಖರ್, ಎಚ್.ಜೆ.ಜವರಪ್ಪ, ಕೃತಿಗಳ ಲೇಖಕಿ ಜಲಜಾ ಶೇಖರ್, ಮಹಿಳಾ ಸಹಕಾರ ಸಂಘದ ಕಾರ್ಯದರ್ಶಿ ಆಶಾ ಶುಭಾಕರ್, ಕಸಾಪ ಗೌರವ ಕಾರ್ಯದರ್ಶಿಗಳಾದ ಜ್ಯೋತಿ ಅರುಣ್, ಎ.ಪಿ.ವೀರರಾಜು, ಕಂಪ್ಯೂಟರ್ ಕೇಂದ್ರದ ಮಾಲೀಕ ಪ್ರದೀಪ್ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

500 ನಾಯಿಗಳಿಗೆ ಚಿಕನ್‌ ರೈಸ್ ನೀಡಲು ವರ್ಷಕ್ಕೆ 1.83 ಕೋಟಿ
ಯಲಹಂಕದಲ್ಲಿ ‘ಚೀನಾದ ಹ್ಯಾಂಗ್‌ಝೌ’ ಮಾದರಿ ರೈಲು ನಿಲ್ದಾಣ