ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುವ ಶಕ್ತಿ ತಾಯಿಯಲ್ಲಿದೆ-ಗುರುಬಸವ ಸ್ವಾಮೀಜಿ

KannadaprabhaNewsNetwork |  
Published : Mar 09, 2026, 02:15 AM IST
ಫೋಟೊ ಶೀರ್ಷಿಕೆ: 8ಆರ್‌ಎನ್‌ಆರ್2ರಾಣಿಬೆನ್ನೂರಿನ ಬಿಎಜೆಎಸ್‌ಎಸ್ ಪದವಿ ಮಹಾವಿದ್ಯಾಲಯದಲ್ಲಿ ಏರ್ಪಡಿಸಿದ್ದ ಅಂತಾರಾಷ್ಟಿçÃಯ ಮಹಿಳಾ ದಿನಾಚರಣೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕಿಯರಿಗೆ ಸನ್ಮಾನ ಸಮಾರಂಭವನ್ನು ಬಿಎಜೆಎಸ್‌ಎಸ್ ಸಮೂಹ ಶಿಕ್ಷಣ ಸಂಸ್ಥೆ ಆಡಳಿತಾಧಿಕಾರಿ ಡಾ.ಆರ್.ಎಂ.ಕುಬೇರಪ್ಪ ಉದ್ಘಾಟಿಸಿದರು.  | Kannada Prabha

ಸಾರಾಂಶ

ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುವ ಶಕ್ತಿ ತಾಯಿಯಲ್ಲಿದ್ದು, ಮನೆಯಿಂದಲೇ ಮಕ್ಕಳಿಗೆ ಸಂಸ್ಕಾರ ನೀಡಬೇಕು ಎಂದು ನಗರದ ದೊಡ್ಡಪೇಟೆ ವಿರಕ್ತಮಠದ ಗುರುಬಸವ ಸ್ವಾಮಿಗಳು ನುಡಿದರು.

ರಾಣಿಬೆನ್ನೂರು: ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುವ ಶಕ್ತಿ ತಾಯಿಯಲ್ಲಿದ್ದು, ಮನೆಯಿಂದಲೇ ಮಕ್ಕಳಿಗೆ ಸಂಸ್ಕಾರ ನೀಡಬೇಕು ಎಂದು ನಗರದ ದೊಡ್ಡಪೇಟೆ ವಿರಕ್ತಮಠದ ಗುರುಬಸವ ಸ್ವಾಮಿಗಳು ನುಡಿದರು. ನಗರದ ಹಲಗೇರಿ ರಸ್ತೆ ಬಿಎಜೆಎಸ್‌ಎಸ್ ಪದವಿ ಮಹಾವಿದ್ಯಾಲಯದಲ್ಲಿ ಭಾನುವಾರ ಸಾವಿತ್ರಿಬಾಯಿ ಫುಲೆ ರಾಷ್ಟ್ರೀಯ ಶಿಕ್ಷಕಿಯರ ಫೆಡರೇಶನ್, ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ರಾಜ್ಯ, ಜಿಲ್ಲಾ ಮತ್ತು ತಾಲೂಕು ಘಟಕಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕಿಯರಿಗೆ ಸನ್ಮಾನ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ಮಕ್ಕಳಿಗೆ ಸರಿಯಾದ ಸಂಸ್ಕಾರ ಸಿಗದಿದ್ದಲ್ಲಿ ಅವರು ನಿಮ್ಮ ಕೈಯಲ್ಲಿ ಸಿಗುವುದಿಲ್ಲ. ಹೊರ ದೇಶದ ಭಯೋತ್ಪಾದರನ್ನು ಎದುರಿಸಬಹುದು. ಆದರೆ ಮನೆಯಲ್ಲಿರುವ ಮಕ್ಕಳೇ ಭಯೋತ್ಪಾದಕರಾದರೇ ಅವರನ್ನು ನಿಭಾಯಿಸುವುದು ಅಸಾಧ್ಯ. ಏಕಾಂಗಿತನ ಮಹಿಳೆಯಲ್ಲಿ ಚಿಂತೆ ಉಂಟು ಮಾಡುತ್ತದೆ. ಕೂಡು ಕುಟುಂಬದಲ್ಲಿ ಆಕೆ ಸುಖವಾಗಿ ಬಾಳಬಲ್ಲಳು ಎಂದರು. ಬಿಎಜೆಎಸ್‌ಎಸ್ ಸಮೂಹ ಶಿಕ್ಷಣ ಸಂಸ್ಥೆ ಆಡಳಿತಾಧಿಕಾರಿ ಡಾ.ಆರ್.ಎಂ. ಕುಬೇರಪ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ತಾಲೂಕು ಅಧ್ಯಕ್ಷೆ ರೇಣುಕಾ ಬಸೆನಾಯಕರ ಅಧ್ಯಕ್ಷತೆ ವಹಿಸಿದ್ದರು. ಸ್ಥಳೀಯ ಎಸ್‌ಜೆಎಂ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಶಶಿಕಲಾ ಕಮ್ಮಾರ ಉಪನ್ಯಾಸ ನೀಡಿದರು. ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಜಿಲ್ಲಾಧ್ಯಕ್ಷೆ ರಾಜೇಶ್ವರಿ ಸಜ್ಜೇಶ್ವರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೀತಾ ಸುತ್ತಕೋಟಿ, ಕ್ಷೇತ್ರ ಸಮನ್ವಯಾಧಿಕಾರಿ ಮಂಜನಾಯ್ಕ್ ಎಲ್, ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘದ ಅಧ್ಯಕ್ಷ ಡಾ. ಮಾಲತೇಶ ಚಲವಾದಿ, ವಾಸಣ್ಣ ಕುಸಗೂರ, ಮಂಜುನಾಥ ಕೆ.ಆರ್. ಸರೋಜಿನಿ ಭರಮಗೌಡ್ರ, ಇಸ್ಮಾಯಿಲ್ ಐರಣಿ, ಜಯಶ್ರೀ ಮುರಡೆಪ್ಪನವರ, ಸುಭಾಸ ಕುರುಬರ, ಗಿರೀಶ ಪದಕಿ, ಎ.ಬಿ. ರತ್ನಮ್ಮ, ಬಿರಪ್ಪ ಅಣಜಿ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮುತ್ತೂಟ್ ಫಿನ್‌ಕಾರ್ಪ್‌ನ ವಡಗಾಂವ ಶಾಖೆಯಲ್ಲಿ ಮಹಿಳಾ ದಿನಾಚರಣೆ
‘ಥ್ಯಾಂಕ್ಸ್‌ ಅಪ್ಪ’ ಕಾದಂಬರಿ ಪ್ರತಿ ಮನೆಯಲ್ಲೂ ಇರಲಿ: ನ್ಯಾ.ಸಂತೋಷ್‌