ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಸಾಗಿದೆ: ರಾಹುಲ್ ಬಾಲ್

KannadaprabhaNewsNetwork |  
Published : Jul 27, 2026, 02:15 AM IST
ಸ್ನೇಹಲ್ | Kannada Prabha

ಸಾರಾಂಶ

ಕಾಂಗ್ರೆಸ್ ಪಕ್ಷದ ಜಿಲ್ಲಾ ಸಮಿತಿ ಅಧ್ಯಕ್ಷರ ನೇಮಕಕ್ಕೆ ಸಂಬಂಧಿಸಿದಂತೆ ಆಯ್ಕೆ ಪ್ರಕ್ರಿಯೆ ಸಾಗಿದ್ದು, ಶಿಫಾರಸ್ಸು ವರದಿ ಆಧಾರದಲ್ಲಿ ಜಿಲ್ಲಾಧ್ಯಕ್ಷರ ಹೆಸರನ್ನು ವರಿಷ್ಠರು ಅಂತಿಮಗೊಳಿಸಲಿದ್ದಾರೆ ಎಂದು ಎಐಸಿಸಿ ಕಾರ್ಯದರ್ಶಿ, ಜಿಲ್ಲಾ ವೀಕ್ಷಕ ರಾಹುಲ್ ಬಾಲ್ ಹೇಳಿದ್ದಾರೆ.

- ಹೆಸರು ಕೊಡುವುದಷ್ಟೇ ನನ್ನ ಕೆಲಸ, ಅಂತಿಮಗೊಳಿಸುವುದು ಹೈಕಮಾಂಡ್‌

- - -

ಕನ್ನಡಪ್ರಭ ವಾರ್ತೆ ದಾವಣಗೆರೆ

ಕಾಂಗ್ರೆಸ್ ಪಕ್ಷದ ಜಿಲ್ಲಾ ಸಮಿತಿ ಅಧ್ಯಕ್ಷರ ನೇಮಕಕ್ಕೆ ಸಂಬಂಧಿಸಿದಂತೆ ಆಯ್ಕೆ ಪ್ರಕ್ರಿಯೆ ಸಾಗಿದ್ದು, ಶಿಫಾರಸ್ಸು ವರದಿ ಆಧಾರದಲ್ಲಿ ಜಿಲ್ಲಾಧ್ಯಕ್ಷರ ಹೆಸರನ್ನು ವರಿಷ್ಠರು ಅಂತಿಮಗೊಳಿಸಲಿದ್ದಾರೆ ಎಂದು ಎಐಸಿಸಿ ಕಾರ್ಯದರ್ಶಿ, ಜಿಲ್ಲಾ ವೀಕ್ಷಕ ರಾಹುಲ್ ಬಾಲ್ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾಧ್ಯಕ್ಷರ ಆಯ್ಕೆ ಕುರಿತಂತೆ ಕೆಪಿಸಿಸಿ ಅಧ್ಯಕ್ಷರು, ಶಾಸಕಾಂಗ ನಾಯಕರು, ಎಐಸಿಸಿ ಸದಸ್ಯರೊಂದಿಗೆ ಪ್ರತ್ಯೇಕವಾಗಿ ಚರ್ಚೆ ನಡೆಸಲಿದ್ದಾರೆ. ಮುಂಬರುವ ದಿನಗಳಲ್ಲಿ ಬ್ಲಾಕ್ ಹಾಗೂ ಮಂಡಲ ಮಟ್ಟದಲ್ಲೂ ಇದೇ ರೀತಿ ಪ್ರಕ್ರಿಯೆ ಅಧ್ಯಕ್ಷರ ಆಯ್ಕೆಗೆ ಪಾಲಿಸಲಾಗುವುದು. ಜಿಲ್ಲಾಧ್ಯಕ್ಷ ಹುದ್ದೆಗೆ ಸ್ಪರ್ಧಿಸಲು ಅಥವಾ ಸೇವೆ ಸಲ್ಲಿಸಲಿಚ್ಚಿಸುವ ಆಸಕ್ತ ಅರ್ಹ ಹಾಗೂ ನಿಷ್ಟಾವಂತ ನಾಯಕರು ನೇರವಾಗಿ ಅರ್ಜಿ ನಮೂನೆ ಪಡೆದುಕೊಳ್ಳಬಹುದು ಎಂದು ತಿಳಿಸಿದರು.

ಪಕ್ಷದ ಕೆಲಸಕ್ಕಾಗಿ ಹೊರ ಜಿಲ್ಲೆ, ಹೊರ ರಾಜ್ಯಗಳಲ್ಲಿರುವ ನಾಯಕರು ವಾಟ್ಸಪ್ ಅಥವಾ ಫೋನ್ ಮೂಲಕ ಸಂಪರ್ಕಿಸಿ, ತಮ್ಮ ವಿವರ ನೀಡಿದರೆ, ಅರ್ಹತೆ ಪರಿಶೀಲಿಸಿ, ಅಂತಹವರಿಗೆ ವಾಟ್ಸಪ್ ಮೂಲಕವೂ ಅರ್ಜಿ ತಲುಪಿಸುವ ವ್ಯವಸ್ಥೆ ಮಾಡಲಾಗುವುದು. ಇದು ಪಕ್ಷದ ಆಂತರಿಕ ಪ್ರಕ್ರಿಯೆಯಾಗಿದ್ದು, ಅರ್ಜಿ ನಮೂನೆಯು ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗವಾಗಿ ಹರಿದಾಡಬಾರದು ಎಂದು ಅವರು ಹೇಳಿದರು.

ಸೋಷಿಯಲ್ ಮೀಡಿಯಾದಲ್ಲಿ ಪ್ರಚಾರ ಮಾಡದೇ, ಪಕ್ಷದ ಶಿಸ್ತು, ಗೌರವ ಕಾಯ್ದುಕೊಳ್ಳುವುದು ಅತಿ ಮುಖ್ಯ. ಸಂಘಟನೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವ ಮನಸ್ಸಿನಲ್ಲಿರುವ ಎಲ್ಲ ನಾಯಕರು ಹಾಗೂ ಕಾರ್ಯಕರ್ತರು ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ರಾಹುಲ್ ಬಾಲ್‌ ತಿಳಿಸಿದರು.

ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಕೀಲ್ ಸನದಿ ಮಾತನಾಡಿ, ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಅತ್ಯಂತ ಬಲಿಷ್ಠ ಹಾಗೂ ತಂತ್ರಬದ್ಧವಾಗಿ ಸಂಘಟಿಸುವ ಉದ್ದೇಶದಿಂದ ಸಂಘಟನಾ ಸೃಜನ್ ಅಭಿಯಾನಕ್ಕೆ ದಾವಣಗೆರೆಯಿಂದಲೇ ಅಧಿಕೃತವಾಗಿ ಚಾಲನೆ ನೀಡಲಾಗಿದೆ. ಎಐಸಿಸಿ ಅಧಿವೇಶದಲ್ಲಿ ಕೈಗೊಂಡ ನಿರ್ಣಯದಂತೆ ದೇಶಾದ್ಯಂತ ಸುಮಾರು 20ಕ್ಕೂ ಹೆಚ್ಚು ರಾಜ್ಯಗಳಲ್ಲಿ ಅಭಿಯಾನ ಕೈಗೊಳ್ಳಲಾಗಿದೆ. 14 ರಾಜ್ಯಗಳಲ್ಲಿ ಜಿಲ್ಲಾಧ್ಯಕ್ಷರ ನೇಮಕ ಪ್ರಕ್ರಿಯೆ ಪೂರ್ಣವಾಗಿದೆ ಎಂದರು.

ಕೆಲವೇ ನಾಯಕರ ಮಟ್ಟದಲ್ಲಿ ಆಗುತ್ತಿದ್ದ ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ತಿಲಾಂಜಲಿ ಹಾಡಲಾಗಿದೆ. ಇನ್ನು ಮುಂದೆ ಪ್ರತಿಯೊಬ್ಬ ಸಕ್ರಿಯ ಕಾರ್ಯಕರ್ತನ ಧ್ವನಿಗೆ ಆದ್ಯತೆ ನೀಡುವ ಜೊತೆಗೆ ಎಲ್ಲಾ ಜಾತಿ, ಧರ್ಮ ಹಾಗೂ ಪ್ರದೇಶದ ಜನರಿಗೆ ಸ್ವೀಕಾರಾರ್ಹವಾದ ಸಕ್ರಿಯ ನಾಯಕರನ್ನು ಆಯ್ಕೆ ಮಾಡಲಾಗುವುದು. ಜಿಲ್ಲಾ ಉಸತುವಾರಿ ರಾಹುಲ್ ಬಾಲ್‌ ಜಿಲ್ಲೆಯ ಪ್ರತಿ ಬ್ಲಾಕ್‌ಗೂ ಭೇಟಿ ನೀಡಿ, ಸ್ಥಳೀಯ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸುವರು. ಡಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಲ್ಲಿಕೆಯಾಗುವ ಅರ್ಜಿಗಳಲ್ಲಿ ಸೂಕ್ತ 6 ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಿ, ಎಐಸಿಸಿಗೆ ಸಲ್ಲಿಸಲಿದ್ದಾರೆ ಎಂದು ತಿಳಿಸಿದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಬಿ.ಮಂಜಪ್ಪ, ಪ್ರಧಾನ ಕಾರ್ಯದರ್ಶಿ, ದೂಡಾ ಅದ್ಯಕ್ಷ ದಿನೇಶ ಕೆ.ಶೆಟ್ಟಿ, ಕೆಪಿಸಿಸಿ ಉಪಧ್ಯಕ್ಷ ಎಪ್.ಎಸ್.ಜಕ್ಕಪ್ಪನವರ್‌, ವೀಕ್ಷಕರಾದ ಅನಿತಾಕುಮಾರಿ, ಮಂಜುನಾಥ ಶುನಗಾರ್‌ ಇತರರು ಇದ್ದರು.

- - -

(ಕೋಟ್‌)

ದೇಶದಲ್ಲಿ ನೀಟ್ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದು, ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಹೋರಾಟಕ್ಕೆ ಸಿಕ್ಕ ದೊಡ್ಡ ಜಯವಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಿಂದ ಕಂಗಾಲಾಗಿದ್ದ ವಿದ್ಯಾರ್ಥಿಗಳ ಧ್ವನಿಗೆ ಈಗ ಬೆಲೆ ಸಿಕ್ಕಿದೆ. ಈ ರಾಜೀನಾಮೆ ಬಹಳ ಮುಂಚೆಯೇ ಬರಬೇಕಿತ್ತು.

- ರಾಹುಲ್ ಬಾಲ್, ಕಾರ್ಯದರ್ಶಿ, ಎಐಸಿಸಿ.

- - -

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿಷಮುಕ್ತ ಬೇಸಾಯದಿಂದಲೇ ರೈತನಿಗೆ ಕೃಷಿಯಲ್ಲಿ ನೆಮ್ಮದಿ
ಶ್ರೀಶೈಲೇಶ್ವರ ವಿದ್ಯಾಕೇಂದ್ರದಲ್ಲಿ ಕಾರ್ಗಿಲ್ ವಿಜಯ್ ದಿವಸ್