ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ತಾಲೂಕು ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿ ಸದಸ್ಯ ಆಯ್ಕೆ ಪ್ರಕ್ರಿಯೆಯನ್ನು ಯಾವುದೇ ಪ್ರಕಟಣೆ, ಮಾಹಿತಿ ನೀಡಿದೆ ಏಕ ಪಕ್ಷೀಯವಾಗಿ ನಡೆಸಿದ್ದಾರೆ ಎಂದು ಆರೋಪಿಸಿ ರೈತ ಹೋರಾಟಗಾರ ಕಿರಂಗೂರು ಪಾಪು ಕೃಷಿ ಅಧಿಕಾರಿಯನ್ನು ಪ್ರಶ್ನಿಸಿದರು.ಪಟ್ಟಣದ ಕೃಷಿ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಚಂದಗಾಲು ಶಂಕರ್, ದಲಿತ ಮುಖಂಡ ನಂಜುಂಡ ಮೌರ್ಯ ಸೇರಿದಂತೆ ಇತರರೊಂದಗೆ ತೆರಳಿ ಸೋಮವಾರ ನಡೆದಿದ್ದ ಕಾರ್ಯಕಾರಿ ಸಮಿತಿ ಸದಸ್ಯರ ಆಯ್ಕೆ ಚುನಾವಣಾ ಪ್ರಕ್ರಿಯೆ ಬಗ್ಗೆ ಅಸಮಧಾನ ಹೊರ ಹಾಕಿದರು.
ಕಳೆದ 3 ಅವಧಿಯಲ್ಲಿ ಕೆಲವರು ಕೃಷಿಕ ಸಮಾಜದ ಸದಸ್ಯರಾಗಿಯೇ ಮುಂದುವರೆಯುತ್ತಿದ್ದಾರೆ. ಅಲ್ಲದೆ ಈ ಬಾರಿ ಒಂದೇ ಗ್ರಾಮದ ಮೂರು ಮಂದಿಯನ್ನು ಸದಸ್ಯರಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ. ತಾಲೂಕಿನಾದ್ಯಂತ ಹಲವು ಮಂದಿ ಕೃಷಿಕ ಸಮಾಜದ ಸದಸ್ಯರಾಗಲು ಕಾಯ್ದುಕುಳಿತಿದ್ದಾರೆ ಎಂದರು.ಇಲಾಖೆ ಸೂಚನಾ ಫಲಕದಲ್ಲಿ ಮಾಹಿತಿ ಹಾಕಿರುವುದಾಗಿ ಅಧಿಕಾರಿಗಳು ಹೇಳುತ್ತಿದ್ದಾರೆ. ತಾಲೂಕಿನ ಎಷ್ಟು ಮಂದಿ ಕಚೇರಿಗೆ ಬಂದು ಸೂಚನಾ ಫಲಕ ವೀಕ್ಷಿಸಲು ಸಾಧ್ಯ ಎಂದು ಪ್ರಶ್ನಿಸಿದರು.
ಪತ್ರಿಕಾ ಪ್ರಕಟಣೆ ಸೇರಿದಂತೆ ಯಾವುದೇ ಪ್ರಚಾರ ನೀಡದೇ ಏಕಾ ಏಕಿ ಆಯ್ಕೆ ಪ್ರಕ್ರಿಯೆ ನಡೆಸಿರುವುದರಿಂದ ಭಾರಿ ನಿರಾಸೆಯಾಗಿದೆ. ಈ ಆಯ್ಕೆ ಪ್ರಕ್ರಿಯೆಯನ್ನು ಕೈ ಬಿಟ್ಟು ಮತ್ತೊಂದು ದಿನಾಂಕ ನಿಗದಿ ಪಡಿಸಿ ಮರು ಆಯ್ಕೆ ನಡೆಸುವಂತೆ ಒತ್ತಾಯಿಸಿದರು.ಇಂದು ಹಲವೆಡೆ ವಿದ್ಯುತ್ ವ್ಯತ್ಯಯ
ಮಂಡ್ಯ:66/11 ಕೆ.ವಿ ಕೆ.ಐ.ಎ.ಡಿ.ಬಿ ತೂಬಿನಕೆರೆ ಮತ್ತು ತುಂಬಕೆರೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಡಿಸೆಂಬರ್ 11 ರಂದು ವಿದ್ಯುತ್ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಡಿ.12 ರಂದು ಹಲವೆಡೆ ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ನಗರ ಪ್ರದೇಶಗಳಾದ ಗುತ್ತಲು, ಫ್ಯಾಕ್ಟರಿ ವೃತ್ತ, ಕೈಗಾರಿಕ ಬಡಾವಣೆಗಳು, ಎಂ.ಸಿ.ರಸ್ತೆ, ತಾವರೆಗೆರೆ, ನೆಹರು ನಗರ, ಉದಯಗಿರಿ, ಸಾದತ್ ಮೊಹಲ್ಲ, ಚನ್ನಯ್ಯ ಬಡಾವಣೆ, ಸಿದ್ಧಾರ್ಥ ಬಡಾವಣೆ, ಬೆಂಗಳೂರು ಮುಖ್ಯ ರಸ್ತೆಯ ಹೆಬ್ಬಾಳ ಹಾಗೂ ಗ್ರಾಮಾಂತರ ಪ್ರದೇಶಗಳಾದ ಶ್ರೀನಿವಾಸಪುರ ಗೇಟ್, ಹನಕೆರೆ ಐ.ಪಿ ವ್ಯಾಪ್ತಿ, ಕೀಲಾರ ಐ.ಪಿ ವ್ಯಾಪ್ತಿ, ಬಸವನಪುರ ಐ.ಪಿ. ವ್ಯಾಪ್ತಿ, ಬೂದನೂರು, ಭೂತನ ಹೊಸೂರು, ಚನ್ನಪ್ಪನ ದೊಡ್ಡಿ, ಹಂಬರಹಳ್ಳಿ, ತುಂಬಕೆರೆ ವಿದ್ಯುತ್ ವಿತರಣಾ ಕೇಂದ್ರದ ಗ್ರಾಮಾಂತರ ಪ್ರದೇಶ: ಹೊಡಾಘಟ್ಟ, ಕೀಲಾರ, ಹನಕೆರೆ, ಹಳೆ ಬೂದನೂರು, ಹೊಸಬೂದನೂರು, ಈಚಗೆರೆ, ಹಂಬರಹಳ್ಳಿ, ಆಲಕೆರೆ, ನಲ್ಲಹಳ್ಳಿ, ಕಚ್ಚಿಗೆರೆ, ಶ್ರೀನಿವಾಸಪುರ ಗೇಟ್, ಹೊನಗಾನಹಳ್ಳಿಮಠ, ತುಂಬಕೆರೆ, ಚಾಮಲಾಪುರ, ಉಮ್ಮಡಹಳ್ಳಿ, ಬಸವನಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮಂಡ್ಯ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.