ಶಿಕ್ಷಣ ಹಾಗೂ ಸಂಘಟನೆಯಿಂದ ಮಾತ್ರ ಸಮಾಜದ ಪ್ರಗತಿ ಸಾಧ್ಯವಾಗುತ್ತದೆ ಡಾ.ಬಸವರಮಾನಂದ ಸ್ವಾಮೀಜಿ ಹೇಳಿದರು.
ಪಾವಗಡ: ಶಿಕ್ಷಣ ಹಾಗೂ ಸಂಘಟನೆಯಿಂದ ಮಾತ್ರ ಸಮಾಜದ ಪ್ರಗತಿ ಸಾಧ್ಯವಾಗುತ್ತದೆ ಡಾ.ಬಸವರಮಾನಂದ ಸ್ವಾಮೀಜಿ ಹೇಳಿದರು.
ಪಟ್ಟಣದ ಎಸ್‌ಎಸ್‌ಕೆ ಬಯಲು ರಂಗಮಂದಿರದಲ್ಲಿ ಶ್ರೀ ನಂದಗೋಕುಲ ಗೆಳೆಯರ ಬಳಗ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಶೇ 80ರಷ್ಟು ಆಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಗಣ್ಯರಿಗೆ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.
ಶಿಕ್ಷಣವು ಯಶಸ್ವಿಯ ತಪಸ್ಸಿದ್ದಂತೆ. ಪ್ರತಿಯೊಬ್ಬರು ವಿದ್ಯಾವಂತರಾಗಬೇಕು. ಸಂಘಟಿತರಾಗಿ ಹೋರಾಟದ ಮೂಲಕ ಸೌಲಭ್ಯ ಪಡೆದುಕೊಳ್ಳಬೇಕು. ಸರ್ಕಾರದ ಸೌಲಭ್ಯ ಸದ್ಬಳಿಕೆ ಮಾಡಿಕೊಳ್ಳಬೇಕು. ಕೌಶಲ್ಯ ತರಬೇತಿಯತ್ತ ಆಸಕ್ತಿವಹಿಸಿ ಅರ್ಥಿಕ ಸಾಮಾಜಿಕ ಹಾಗೂ ರಾಜಕೀಯ ಪ್ರಗತಿ ಕಾಣುವಂತೆ ಸಲಹೆ ನೀಡಿದರು.
ಮಾಜಿ ಸಚಿವ ರಘುವೀರ ರೆಡ್ಡಿ ಮಾತನಾಡಿ, ಗೊಲ್ಲ ಸಮಾಜ ಸಂಘಟಿತರಾಗಿ ಪ್ರಗತಿ ಕಾಣಬೇಕು. ನಮ್ಮ ಹೆಜ್ಜೆ ಪ್ರಗತಿದತ್ತ ಸಾಗಿದರೆ ಮಾತ್ರ ಸಮಾಜ ಅಭಿವೃದ್ಧಿ ಕಾಣಲು ಸಾಧ್ಯವಿದೆ ಎಂದರು.
ತಾಲೂಕು ಯಾದವ ಸಮಾಜದ ಅಧ್ಯಕ್ಷ ಮುಗದಾಳಬೆಟ್ಟ ನರಸಿಂಹಯ್ಯ ಮಾತನಾಡಿ, ಪ್ರತಿಯೊಬ್ಬರು ತಮ್ಮ ಮಕ್ಕಳಿಗೆ ಶಿಕ್ಷಣ ನೀಡಬೇಕು ಎಂದರು.
ಪಿಎಸ್‌ಐ ಕಾರನಾಗನಹಟ್ಟಿಯ ಚಂದ್ರಶೇಖರ್ ಮಾತನಾಡಿ, ಗೊಲ್ಲ ಸಮಾಜದ ಅರ್ಥಿಕ ಹಾಗೂ ಸಾಮಾಜಿಕ ಪರಿವರ್ತನೆಯತ್ತ ಸಾಗಬೇಕು ಎಂದರು.
ಚಲನಚಿತ್ರ ಹಿನ್ನಲೆ ಗಾಯಕ ಹಾಗೂ ಜಾನಪದ ವಿವಿಯ ಸಿಂಡಿಕೇಟ್ ಸದಸ್ಯ ಮೋಹನ್‌ಕುಮಾರ್, ಸಮಾಜ ಸಾಂಸ್ಕ್ರತಿಕ ಹಾಗೂ ಜಾನಪದ ನೆಲೆಗಟ್ಟಿನ ಬಗ್ಗೆ ಸಮಗ್ರವಾಗಿ ವಿವರಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.