ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ
ಶಾಲಾ ವಾಹನ ಚಾಲಕನಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿ ಮಗುವಿಗೆ ಜನ್ಮ ನೀಡಿರುವ ವಿದ್ಯಾರ್ಥಿನಿ ಕಲಿಯುತ್ತಿರುವ ಖಾಸಗಿ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ೧ರಿಂದ ೭ನೇ ತರಗತಿಯವರೆಗೆ ಶಾಲಾ ದಾಖಲಾತಿ ಸರಿ ಇದೆ. ಪ್ರೌಢಶಾಲೆಯ ದಾಖಲೆ ಸಮರ್ಪಕವಾಗಿಲ್ಲ. ಶಾಲಾ ವಾಹನಗಳಲ್ಲಿ ಸಿಸಿಟಿವಿ ಕ್ಯಾಮರಾ ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲ. ವಾಹನಕ್ಕೆ ಜಿಪಿಎಸ್ ವ್ಯವಸ್ಥೆ ಇಲ್ಲ. ವಾಹನಕ್ಕೆ ಆಯಾ ನೇಮಿಸಿಲ್ಲ. ಒಟ್ಟಾರೆ ಕರ್ನಾಟಕ ಮೋಟಾರ್ ವಾಹನ ಕಾಯ್ದೆಯ ನಿಯಮ ಮತ್ತು ಸುಪ್ರೀಂ ಕೋರ್ಟ್ ರೂಪಿಸಿರುವ ಮಾರ್ಗಸೂಚಿಯನ್ನು ಉಲ್ಲಂಘಿಸಲಾಗಿದೆ. ಇದರ ಬಗ್ಗೆ ಸಾರಿಗೆ ಅಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದರು.
ನಿರ್ಲಕ್ಷ್ಯ ತೋರಿದ ಶಾಲೆಯ ಮುಖ್ಯ ಶಿಕ್ಷಕ, ಸಂಸ್ಥೆಯ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಶಾಲಾ ದಾಖಲಾತಿಗಳನ್ನು ಪರಿಶೀಲಿಸುವಲ್ಲಿ ವಿಫಲರಾಗಿರುವ ಶಿಕ್ಷಣ ಇಲಾಖೆಯ ಇಸಿಒ ಮತ್ತು ಸಿಆರ್‌ಪಿ ಅವರೇ ಕಾರಣ ಕೇಳಿ ನೋಟಿಸ್ ನೀಡಬೇಕು. ಶಾಲೆಗೆ ಸಂಬಂಧಿಸಿದ ಶೈಕ್ಷಣಿಕ ದಾಖಲೆಗಳನ್ನು ಸಲ್ಲಿಸಬೇಕು ಎಂದು ಡಿಡಿಪಿಐ ಬಲರಾಂ ಅವರಿಗೆ ಸೂಚಿಸಿದರು. ಆಯೋಗಕ್ಕೆ ವಾಹನ ಚಾಲಕನನ್ನು ಕೂಡಲೇ ಬಂಧಿಸಿ ಎಂದು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ ಅವರು ಮಕ್ಕಳ ಚಲನವಲನದ ಕುರಿತು ಶಿಕ್ಷಕರು ಮತ್ತು ಪೋಷಕರು ಗಮನಹರಿಸಬೇಕು ಎಂದರು. ಡಿಡಿಪಿಐ ಬಲರಾಂ, ಡಿವೈಎಸ್ಪಿ ಕುಮಾರ್ ಸೇರಿ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.