ದಸರಗುಪ್ಪೆ ರೈತ ಡಿ.ಪ್ರಭಾಕರ್ ನಡೆಸುತ್ತಿರುವ ಧರಣಿ 8ನೇ ದಿನಕ್ಕೆ

KannadaprabhaNewsNetwork |  
Published : Mar 25, 2025, 12:52 AM IST
24ಕೆಎಂಎನ್ ಡಿ15 | Kannada Prabha

ಸಾರಾಂಶ

ತಾಲೂಕಿನ ಕಿರಂಗೂರು ಗ್ರಾಮದ ಬಳಿ ನಾಲಾ ಏರಿ ಹಾಗೂ ಸಾರ್ವಜನಿಕ ರಸ್ತೆ ಒತ್ತುವರಿ ತೆರವಿಗಾಗಿ ಕಳೆದ 8 ದಿನಗಳಿಂದ ಪಟ್ಟಣದ ತಾಲೂಕು ಕಚೇರಿ ಎದುರು ರೈತ ದಸರಗುಪ್ಪೆ ಗ್ರಾಮದ ರೈತ ಡಿ.ಪ್ರಭಾಕರ್ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹಕ್ಕೆ ಮಂಡ್ಯ ರಕ್ಷಣಾ ವೇದಿಕೆ ಬೆಂಬಲ ಸೂಚಿಸಿ ಅಧಿಕಾರಿಗಳ ನಡೆಯನ್ನು ಖಂಡಿಸಿದರು.

ಕನ್ನಡಪ್ರಭವಾರ್ತೆ ಶ್ರೀರಂಗಪಟ್ಟಣ

ತಾಲೂಕಿನ ಕಿರಂಗೂರು ಗ್ರಾಮದ ಬಳಿ ನಾಲಾ ಏರಿ ಹಾಗೂ ಸಾರ್ವಜನಿಕ ರಸ್ತೆ ಒತ್ತುವರಿ ತೆರವಿಗಾಗಿ ಕಳೆದ 8 ದಿನಗಳಿಂದ ಪಟ್ಟಣದ ತಾಲೂಕು ಕಚೇರಿ ಎದುರು ರೈತ ದಸರಗುಪ್ಪೆ ಗ್ರಾಮದ ರೈತ ಡಿ.ಪ್ರಭಾಕರ್ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹಕ್ಕೆ ಮಂಡ್ಯ ರಕ್ಷಣಾ ವೇದಿಕೆ ಬೆಂಬಲ ಸೂಚಿಸಿ ಅಧಿಕಾರಿಗಳ ನಡೆಯನ್ನು ಖಂಡಿಸಿದರು.

ವೇದಿಕೆ ಅಧ್ಯಕ್ಷ ಶಂಕರ್‌ ಬಾಬು ಮಾತನಾಡಿ, ಪಟ್ಟಣದ ತಾಲೂಕು ಕಚೇರಿ ಎದುರು ಕಳೆದ 8 ದಿನಗಳಿಂದ ಏಕಾಂಗಿಯಾಗಿ ರೈತರೊಬ್ಬರು ಸತ್ಯಾಗ್ರಹ ಧರಣಿ ನಡೆಸುತ್ತಿದ್ದರೂ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ತಾಲೂಕು ಆಡಳಿತ ಇತ್ತ ತಿರುಗಿಯೂ ನೋಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ತಮ್ಮ ಇಳಿ ವಯಸ್ಸಿನಲ್ಲೂ ಬಿಸಿಲನ್ನು ಲೆಕ್ಕಿಸದೇ ಶಾಂತಿಯುತ ಪ್ರತಿಭಟನೆ ಮೂಲಕ ಒತ್ತುವರಿಯಾಗಿರುವ ಸಾರ್ವಜನಿಕ ರಸ್ತೆ ಬಗ್ಗೆ ಧ್ವನಿ ಎತ್ತಿದ್ದಾರೆ. ಇದರಲ್ಲಿ ಅಧಿಕಾರಿಗಳ ವೈಪಲ್ಯ ಎದ್ದು ಕಾಣುತ್ತಿದೆ. ಕಳೆದ 21 ವರ್ಷಗಳಿಂದ ಸಾರ್ವಜನಿಕ ಹಿತಾಶಕ್ತಿ ಪರವಾಗಿ ಪ್ರಭಾಕರ್ ರವರು ಕಚೇರಿಗೆ ಅಲೆದಿದ್ದಾರೆ ವಿನಃ ಅವರಿಗೆ ನ್ಯಾಯ ದೊರೆಕಿಲ್ಲ. ಬದಲಿಗೆ ಅವರನ್ನು ಇಂದು ಬೀದಿಯಲ್ಲಿ ಕೂರಿಸುವಂತೆ ಕೆಲಸ ಮಾಡಿದ್ದಾರೆ ಎಂದು ಕಿಡಿಕಾರಿದರು.

ಇನ್ನು ಮುಂದಾದರೂ ಸಹ ಜಿಲ್ಲಾಧಿಕಾರಿಗಳು, ಉಪವಿಭಾಗಾಧಿಕಾರಿಗಳ ಮಟ್ಟದಲ್ಲಿ ನೀರಾವರಿ ಇಲಾಖೆ ಅಧಿಕಾರಿಗಳು ಹಾಗೂ ತಾಲೂಕು ಆಡಳಿತ ಸ್ಥಳ ಪರಿಶೀಲಿಸಿ ಸಂಬಂಧಿಸಿದ ಅಧಿಕಾರಿಗಳ ಮೂಲಕ ಸಮಸ್ಯೆ ಬಗೆಹರಿಸಬೇಕು. ಇಲ್ಲದಿದ್ದರೆ ವಿವಿಧ ಸಂಘಟನೆಗಳ ಜೊತೆಗೂಡಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.

ರೈತ ಡಿ.ಪ್ರಭಾಕರ್ ಮಾತನಾಡಿ, ಕಳೆದ ಎಂಟು ದಿನಗಳಿಂದ ಏಕಾಂಗಿಯಾಗಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹಕ್ಕೆ ಹಲವು ಸಂಘ ಸಂಸ್ಥೆಗಳ ಮುಖಂಡರು, ರೈತರು ಸ್ವಯಂ ಪ್ರೇರಿತವಾಗಿ ಬಂದು ಬೆಂಬಲ ನೀಡುತ್ತಿವೆ. ಅವರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ತಾಲೂಕು ಆಡಳಿತದ ಅಧಿಕಾರಿಗಳು ಕೇವಲ ಒಂದೆರಡು ಬಾರಿ ಧರಣಿ ಸ್ಥಳಕ್ಕೆ ಬಂದು ಒಂದೆರಡು ತಿಂಗಳಲ್ಲಿ ಬಗೆಹರಿಸುತ್ತೇವೆ. ಪ್ರತಿಭಟನೆ ಹಿಂಪಡೆಯುವಂತೆ ಪೊಳ್ಳು ಭರವಸೆ ನೀಡುತ್ತಿದ್ದಾರೆ ವಿನಃ ಶಾಶ್ವತವಾಗಿ ಸಮಸ್ಯೆ ಪರಿಹಾರಕ್ಕೆ ಮುಂದಾಗುತ್ತಿಲ್ಲ. ಹಾಗಾಗಿ ಇನ್ನೂ ಐದಾರು ದಿನಗಳವರೆಗೆ ಕಾಯ್ದು ನೋಡುತ್ತೇವೆ. ನಂತರ ಅಮರಣಾಂತರ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಲ್ಲಮಾವಟಿ ಭಗವತಿ ದೇವಸ್ಥಾನದಲ್ಲಿ ಶಡಾಧರ ಪೂಜಾ ಸಂಪನ್ನ
ಕಡಿಮೆ ಬೆಳೆ ವಿಮಾ ಮೊತ್ತ ಸರಿಪಡಿಸಿ ಮರು ಪಾವತಿಗೆ ಆಗ್ರಹ