ಕಮಲನಗರ: ಸರ್ಕಾರಿ ಸೇವೆಗಳನ್ನು ಜನರ ಬಳಿಗೆ ತಲುಪಿಸುವ ಹಾಗೂ ಸಾರ್ವಜನಿಕ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವ ಉದ್ದೇಶದಿಂದ ಪ್ರಜಾ ಸೇವಾ ಆಂದೊಲನ ಎಂಬ ನೂತನ ಕಾರ್ಯಕ್ರಮವನ್ನು ಸರ್ಕಾರ ಹಮ್ಮಿಕೊಂಡಿದೆ ಎಂದು ತಹಸೀಲ್ದಾರ್ ಅಮಿತಕುಮಾರ ಕುಲಕರ್ಣಿ ಹೇಳಿದರು.
ಕಾರ್ಯಕ್ರಮದಲ್ಲಿ ನಿವೇಶನ, ರಸ್ತೆ, ಚರಂಡಿ, ಕುಡಿಯುವ ನೀರು, ಪಹಣಿ, ಪಿಂಚಣಿ, ವಸತಿ ಯೋಜನೆ, ವಿದ್ಯುತ್ ಸೇರಿದಂತೆ ವಿವಿಧ ಮೂಲಸೌಕರ್ಯ ಹಾಗೂ ಸರ್ಕಾರಿ ಸೌಲಭ್ಯಗಳಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಾರ್ವಜನಿಕರು ಮನವಿ ಸಲ್ಲಿಸಿದರು.
ಸ್ವೀಕರಿಸಲಾದ ಅರ್ಜಿಗಳನ್ನು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ವಹಿಸಿ, ಸಮಸ್ಯೆಗಳನ್ನು ಪರಿಶೀಲಿಸಿ ನಿಯಮಾನುಸಾರ ಶೀಘ್ರ ಪರಿಹಾರ ಕಲ್ಪಿಸುವಂತೆ ಸೂಚಿಸಲಾಯಿತು.ಈ ಸಂದರ್ಭದಲ್ಲಿ ಗ್ರೇಡ್-2 ತಹಸೀಲ್ದಾರ್ ರಮೇಶ ಪೆದ್ದೆ, ತಾ.ಪಂ ಇಒ ಹನಮಂತರಾಯ ಕೌಟಗೆ, ಪಿಎಸ್‌ಐ ಶೇಖ ಶಾ ಪಟೇಲ್, ಪಿಡಿಒ ಮನೋಹರ ಇತರೆ ಇಲಾಖೆಯ ಸಿಬ್ಬಂದಿ ಹಾಗೂ ಠಾಣಾಕುಶನೂರ ಸುತ್ತಮುತ್ತಲಿನ ಗ್ರಾಮಸ್ಥರು ಹಾಜರಿದ್ದರು.