ಕನ್ನಡಪ್ರಭ ವಾರ್ತೆ, ಬೆಂಗಳೂರು
ಜೂ.28 ರಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಗುವಿಗೆ ಪೋಲಿಯೊ ಲಸಿಕೆ ನೀಡುವ ಮೂಲಕ ಚಾಲನೆ ನೀಡಲಿದ್ದಾರೆ. ಜೂ.28 ರಂದು ಲಸಿಕೆ ತಪ್ಪಿಸಿಕೊಂಡ ಮಕ್ಕಳಿಗಾಗಿ ಎರಡು ದಿನ ವಿಶೇಷ ವ್ಯವಸ್ಥೆ ಮಾಡಲಿದ್ದು, ಆ ಬಗ್ಗೆ ಪ್ರತ್ಯೇಕವಾಗಿ ಮಾಹಿತಿ ನೀಡಲಾಗುವುದು ಎಂದರು.
ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರ, ಪೋಲಿಯೊಹನಿ ಕಾರ್ಯಕ್ರಮಕ್ಕೆ ರಾಜ್ಯದಲ್ಲಿ 36,076 ಬೂತ್ ಸಿದ್ಧಪಡಿಸುತ್ತಿದ್ದು, ಗುಡ್ಡಗಾಡು ಪ್ರದೇಶಗಳನ್ನು ತಲುಪಲು 988 ಸಂಚಾರಿ ತಂಡ ರಚಿಸಲಾಗಿದೆ.2125 ಟ್ರಾನ್ಸಿಟ್ ತಂಡವು ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ ಸೇರಿದಂತೆ ವಿವಿಧ ಸಾರ್ವಜನಿಕ ಪ್ರದೇಶಗಳಲ್ಲಿ ಲಸಿಕೆ ವಿತರಿಸಲಿವೆ. ಈ ಕಾರ್ಯಕ್ರಮಕ್ಕೆ 1.14 ಲಕ್ಷ ಕಾರ್ಯಕರ್ತರನ್ನು ಬಳಸಿಕೊಳ್ಳಲಾಗುತ್ತಿದೆ. ಯಾವುದೇ ಮಗು ಲಸಿಕೆಯಿಂದ ವಂಚಿತವಾಗಬಾರದು ಎಂಬುದು ನಮ್ಮ ಗುರಿ ಎಂದು ಹೇಳಿದರು.
ರಾಜ್ಯದ ಎಲ್ಲ ಆಸ್ಪತ್ರೆಗಳು, ಗ್ರಾಮೀಣ ಪ್ರದೇಶ, ಗುಡ್ಡಗಾಡು ಪ್ರದೇಶ ಸೇರಿದಂತೆ ವಿವಿಧೆಡೆ ಲಸಿಕೆ ಹಾಕಲು ವ್ಯವಸ್ಥೆ ಮಾಡಲಾಗಿದೆ. ಪೋಲಿಯೊ ಹನಿ ಸಂಪೂರ್ಣ ಸುರಕ್ಷಿತವಾಗಿದ್ದು, ಕೆಲವರು ಸುಳ್ಳು ವದಂತಿಗಳನ್ನು ಹಬ್ಬಿಸಬಹುದು. ಹೀಗಾಗಿ ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಯು.ಟಿ. ಖಾದರ್ ಮನವಿ ಮಾಡಿದರು.ಲಸಿಕಾ ಕೇಂದ್ರ ಪತ್ತೆಗೆ ಆ್ಯಪ್:
ಲಸಿಕಾ ಕಾರ್ಯಕರ್ತರು - 1,14,213