ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ರಾಜ್ಯ ಬಾಲಭವನ ಸೊಸೈಟಿ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಹಾಗೂ ತಾಲೂಕು ಬಾಲ ಭವನ ಸಮಿತಿ ಸಹಯೋಗದಲ್ಲಿ ಶನಿವಾರ ನಗರದ ರೋಟರಿ ವಿದ್ಯಾಲಯದಲ್ಲಿ ನಡೆದ ಮಕ್ಕಳ ಕಲಾ ಪ್ರತಿಭೆ ಕಾರ್ಯಕ್ರಮ ಉದ್ಘಾಟಸಿ ಅವರು ಮಾತನಾಡಿದರು.
ಸ್ಪರ್ಧೆಗಳಲ್ಲಿ ಬಹುಮಾನ ಪಡೆಯುವುದಕ್ಕಿಂತ ಭಾಗವಹಿಸುವುದು ಬಹಳ ಮುಖ್ಯ. ಮಕ್ಕಳಿಗೆ ಚಿತ್ರಕಲೆ,ಗಾಯನ, ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತ ಮಕ್ಕಳಿಗೆ ಬಹುಮಾನವನ್ನು ನೀಡಲಾಗುತ್ತಿದೆ. ಓದಿನ ಜೊತೆಗೆ ಪಠ್ಯೇತರ ಚಟುವಟಿಕೆಯಲ್ಲಿ ಭಾಗವಹಿಸಿದರೆ ಏಕಾಗ್ರತೆ ಮತ್ತು ನೆನಪಿನ ಶಕ್ತಿ ಹೆಚ್ಚಾಗುತ್ತದೆ ಎಂದರು.ಬಾಲ ಭವನ ಕಾರ್ಯದರ್ಶಿ ಹಾಗೂ ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿ ವೀಣಾ ಮಾತನಾಡಿ, ರಾಜ್ಯಾದ್ಯಂತ ಇಂದು ಕಲಾ ಪ್ರತಿಭೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದರಿಂದ ಮಕ್ಕಳಲ್ಲಿ ಅಡಗಿರುವ ಕಲೆಯನ್ನು ಗುರುತಿಸಿ, ಪ್ರೋತ್ಸಾಹಿಸಲು ಸಹಕಾರಿಯಾಗಿದೆ. ಶಾಲೆಯ ಪಾಠದ ಜೊತೆಗೆ ಸೃಜನಾತ್ಮಕ ಚಟುವಟಿಕೆಗಳಿಗೆ ವೇದಿಕೆ ಕಲ್ಪಿಸಲಾಗಿದೆ ಎಂದರು.
ಪ್ರಾಸ್ತಾವಿಕವಾಗಿ ಜಿಲ್ಲಾ ಬಾಲಭವನ ಕಾರ್ಯಕ್ರಮ ಸಂಯೋಜಕ ಡಿ.ಕುಮಾರ್ ಮಾತನಾಡಿ, ಆರು ತಾಲೂಕುಗಳಲ್ಲಿ ಎಂಟು ಕಾರ್ಯಕ್ರಮ ಹಮ್ಮಿಕೊಂಡು ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಬಹುಮಾನವನ್ನು ನೀಡಲಾಗುತ್ತಿದೆ. ಇದಕ್ಕೆ ರಾಜ್ಯಬಾಲ ಭವನ ಸೊಸೈಟಿಯ ಅಧ್ಯಕ್ಷ ಬಿ.ಆರ್.ನಾಯ್ಡು, ಸಿಇಒ ಡಾ.ಆಕಾಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿಜಯ ಕುಮಾರ್.ಕೆ.ಎಚ್ ಸೂಕ್ತ ಮಾರ್ಗದರ್ಶನ ನೀಡಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಮಹಿಳಾ ಮೇಲ್ವಿಚಾರಕಿ ಪಾವನ, ಸಿರಿ ಸಂಪಿಗೆ ಸಂಸ್ಥೆಯ ಸಂಪನ್ಮೂಲ ವ್ಯಕ್ತಿ ಕೆ.ಪವಿತ್ರ,ಮುಖ್ಯ ಶಿಕ್ಷಕಿ ಉಮಾದೇವಿ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.