ಸರ್ಕಾರದ ಯೋಜನೆ ತಲುಪಿಸುವುದೇ ಪ್ರಜಾಸೇವಾ ಆಂದೋಲನದ ಉದ್ದೇಶ

KannadaprabhaNewsNetwork |  
Published : Sep 06, 2026, 02:45 AM IST
ಪೋಟೊ5.25ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಚಿಕ್ಕವಂಕಲಕುಂಟ ಗ್ರಾಮದ ಬುದ್ಧ, ಬಸವ, ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿದ್ದ ಪ್ರಜಾಸೇವಾ ಆಂದೋಲನ ಸಭೆಯನ್ನು ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಪಿ.ಮೋಹನರಾಜ್ ಉದ್ಘಾಟಿಸಿದರು.ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಚಿಕ್ಕವಂಕಲಕುಂಟ ಗ್ರಾಮದ ಬುದ್ಧ, ಬಸವ, ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿದ್ದ ಪ್ರಜಾಸೇವಾ ಆಂದೋಲನ ಸಭೆಯಲ್ಲಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಪಿ.ಮೋಹನರಾಜ್ ಮಾತನಾಡಿದರು. | Kannada Prabha

ಸಾರಾಂಶ

ಸರ್ಕಾರದ ಪ್ರತಿಯೊಂದು ಯೋಜನೆಯ ಪ್ರಯೋಜನವನ್ನು ಗ್ರಾಮದ ಪ್ರತಿಯೊಂದು ಮನೆಗೂ ತಲುಪಿಸುವುದು ಆಂದೋಲನದ ಪ್ರಮುಖ ಉದ್ದೇಶವಾಗಿದೆ. ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಅವುಗಳನ್ನು ಗುಣಾತ್ಮಕವಾಗಿ ವಿಲೇವಾರಿ ಮಾಡಲು ವಿಶೇಷ ಆದ್ಯತೆ ನೀಡಲಾಗುತ್ತಿದೆ.

ಕೊಪ್ಪಳ:

ರಾಜ್ಯದ ಪ್ರತಿಯೊಬ್ಬ ಪ್ರಜೆಯನ್ನು ಸರ್ಕಾರ ತಲುಪಬೇಕು. ಸಾರ್ವಜನಿಕರ ಅಹವಾಲುಗಳನ್ನು ಆಲಿಸಲು ಸರ್ಕಾರ ಸಿದ್ಧವಿದೆ ಎಂಬ ಸಂದೇಶವನ್ನು ಮನೆ-ಮನೆಗೆ ತಲುಪಿಸುವ ಉದ್ದೇಶದಿಂದ ಪ್ರಜಾಸೇವಾ ಆಂದೋಲನ ಸಭೆಗಳನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಪಿ.ಮೋಹನರಾಜ್ ಹೇಳಿದರು.

ಜಿಲ್ಲೆಯ ಯಲಬುರ್ಗಾ ತಾಲೂಕಿನ ಚಿಕ್ಕವಂಕಲಕುಂಟ ಗ್ರಾಮದ ಬುದ್ಧ, ಬಸವ, ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿದ್ದ ಪ್ರಜಾಸೇವಾ ಆಂದೋಲನ ಸಭೆ ಉದ್ಘಾಟಿಸಿ ಮಾತನಾಡಿದರು.

ಸರ್ಕಾರದ ಪ್ರತಿಯೊಂದು ಯೋಜನೆಯ ಪ್ರಯೋಜನವನ್ನು ಗ್ರಾಮದ ಪ್ರತಿಯೊಂದು ಮನೆಗೂ ತಲುಪಿಸುವುದು ಆಂದೋಲನದ ಪ್ರಮುಖ ಉದ್ದೇಶವಾಗಿದೆ. ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಅವುಗಳನ್ನು ಗುಣಾತ್ಮಕವಾಗಿ ವಿಲೇವಾರಿ ಮಾಡಲು ವಿಶೇಷ ಆದ್ಯತೆ ನೀಡಲಾಗುತ್ತಿದೆ. ಜನರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಪ್ರಜಾಸೇವಾ ಇಲಾಖೆಯನ್ನು ಪ್ರತ್ಯೇಕವಾಗಿ ರಚಿಸಿರುವುದು ಈ ಆಂದೋಲನದ ವಿಶೇಷತೆಯಾಗಿದೆ ಎಂದು ತಿಳಿಸಿದರು.

ಗ್ರಾಮಕ್ಕೆ ಆಗಮಿಸಿದ ಉಸ್ತುವಾರಿ ಕಾರ್ಯದರ್ಶಿ ಕೆ.ಪಿ.ಮೋಹನರಾಜ್ ಅವರು ಗ್ರಾಮದ ಆರಾಧ್ಯ ದೇವರಾದ ಮಾರುತೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು.

ಬಳಿಕ ಕೃಷಿ, ತೋಟಗಾರಿಕೆ, ಅರಣ್ಯ, ಪಶುಸಂಗೋಪನೆ, ರೇಷ್ಮೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕೌಶಲ್ಯಾಭಿವೃದ್ಧಿ, ಸಮಾಜ ಕಲ್ಯಾಣ, ಸಾರಿಗೆ, ಆಹಾರ, ನಗರಾಭಿವೃದ್ಧಿ, ಶಿಕ್ಷಣ, ಆಯುಷ್ ಹಾಗೂ ಆರೋಗ್ಯ ಸೇರಿದಂತೆ ವಿವಿಧ ಇಲಾಖೆಗಳ ಯೋಜನೆಗಳ ಮಾಹಿತಿ ಒಳಗೊಂಡ ಮಳಿಗೆಗಳನ್ನು ಉದ್ಘಾಟಿಸಿ ವೀಕ್ಷಿಸಿದರು.

ಫಲಾನುಭವಿಗಳಿಗೆ ಸವಲತ್ತು ವಿತರಣೆ:

ಸಭೆಯಲ್ಲಿ ವಿವಿಧ ಇಲಾಖೆಗಳ ವತಿಯಿಂದ ಅರ್ಹ ಫಲಾನುಭವಿಗಳಿಗೆ ಆದೇಶ ಪತ್ರಗಳನ್ನು ವಿತರಿಸಲಾಯಿತು. ಸುಕನ್ಯಾ ಸಮೃದ್ಧಿ ಯೋಜನೆಯ ಪಾಸ್‌ಬುಕ್‌ಗಳನ್ನೂ ವಿತರಿಸಲಾಯಿತು.

ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣಿತ್ ನೇಗಿ, ಸಹಾಯಕ ಆಯುಕ್ತ ಮೆಹೆಬೂಬ್ ಜಿಲಾನಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ನಿರ್ಮಲಾ, ಜಿಪಂ ಯೋಜನಾ ನಿರ್ದೇಶಕ ಶಾಮಸುಂದರ ಕಾಂಬ್ಳೆ, ಜಂಟಿ ಕೃಷಿ ನಿರ್ದೇಶಕ ಜಿ.ಡಿ. ಕೃಷ್ಣಮೂರ್ತಿ, ತೋಟಗಾರಿಕೆ ಜಂಟಿ ನಿರ್ದೇಶಕ ಕೃಷ್ಣ ಸಿ. ಉಕ್ಕುಂದ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಂಜುನಾಥ ಗುಂಡೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಈಶ್ವರ ಸವಡಿ, ತಹಸೀಲ್ದಾರ್ ಪ್ರಕಾಶ ನಾಸಿ, ತಾಪಂ ಇಒ ನೀಲಗಂಗಾ ಬಬಲಾದ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಲೀಡ್ ಬ್ಯಾಂಕ್ ವ್ಯವಸ್ಥಾಪಕರು, ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅ. 22ರ ವರೆಗೆ ಮತದಾರ ಚೀಟಿ ತಿದ್ದುಪಡಿಗೆ ಅವಕಾಶ
ಬಸ್ ನಿಲ್ಲದಿದ್ದರೆ ಹೆದ್ದಾರಿ ಬಂದ್: ಗ್ರಾಮಸ್ಥರ ಎಚ್ಚರಿಕೆ