ಪ್ರಾಮಾಣಿಕ ನ್ಯಾಯ ಕಲ್ಪಿಸುವುದೇ ಕಾನೂನಿನ ಧ್ಯೇಯ

KannadaprabhaNewsNetwork |  
Published : Jul 05, 2026, 02:45 AM IST
(ಫೋಟೊಬಿಕೆಟಿ5,  ಪದವಿ ಪ್ರದಾನ ಮಾಡಲಾಯಿತು) | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬಾಗಲಕೋಟೆಜನರಿಗೆ ಪ್ರಾಮಾಣಿಕವಾಗಿ ನ್ಯಾಯ ಒದಗಿಸುವುದೇ ಕಾನೂನಿನ ಪ್ರಮುಖ ಉದ್ದೇಶವಾಗಿದ್ದು, ಕಾನೂನು ಪದವೀಧರರು ಸಮಾಜದಲ್ಲಿ ನ್ಯಾಯ, ನೈತಿಕತೆ ಮತ್ತು ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿಯುವ ಜವಾಬ್ದಾರಿ ಹೊತ್ತು ಕಾರ್ಯನಿರ್ವಹಿಸಬೇಕು ಎಂದು ಬೆಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶೆ ಪ್ರಭಾವತಿ ಹಿರೇಮಠ ಹೇಳಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಜನರಿಗೆ ಪ್ರಾಮಾಣಿಕವಾಗಿ ನ್ಯಾಯ ಒದಗಿಸುವುದೇ ಕಾನೂನಿನ ಪ್ರಮುಖ ಉದ್ದೇಶವಾಗಿದ್ದು, ಕಾನೂನು ಪದವೀಧರರು ಸಮಾಜದಲ್ಲಿ ನ್ಯಾಯ, ನೈತಿಕತೆ ಮತ್ತು ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿಯುವ ಜವಾಬ್ದಾರಿ ಹೊತ್ತು ಕಾರ್ಯನಿರ್ವಹಿಸಬೇಕು ಎಂದು ಬೆಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶೆ ಪ್ರಭಾವತಿ ಹಿರೇಮಠ ಹೇಳಿದರು.

ನಗರದ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜಿನ ಗ್ಯಾಲರಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಬಿವಿವಿ ಸಂಘದ ಎಸ್.ಸಿ. ನಂದಿಮಠ ಕಾನೂನು ಮಹಾವಿದ್ಯಾಲಯದ 2023-2026ನೇ ಸಾಲಿನ ಪದವಿ ಪ್ರದಾನ ಸಮಾರಂಭದಲ್ಲಿ 114 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಅವರು ಮಾತನಾಡಿದರು.

ವಿಶೇಷ ಸಾರ್ವಜನಿಕ ನಿವೃತ್ತ ಅಭಿಯೋಜಕ ಕೆ.ಜಿ.ಪುರಾಣಿಕಮಠ ಮಾತನಾಡಿ, ಕಾನೂನು ವೃತ್ತಿಯಲ್ಲಿ ಪ್ರಾಮಾಣಿಕತೆ, ಸೇವಾ ಮನೋಭಾವ ಮತ್ತು ವೃತ್ತಿ ನಿಷ್ಠೆ ಅತ್ಯಂತ ಮುಖ್ಯವಾಗಿದ್ದು, ಸಮಾಜದ ವಿಶ್ವಾಸವನ್ನು ಉಳಿಸಿಕೊಳ್ಳುವಂತೆ ಪದವೀಧರರಿಗೆ ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಘದ ಗೌರವ ಕಾರ್ಯದರ್ಶಿ ಮಹೇಶ ಅಥಣಿ ಮಾತನಾಡಿ, ಗುಣಮಟ್ಟದ ಕಾನೂನು ಶಿಕ್ಷಣದ ಮೂಲಕ ಸಮಾಜಮುಖಿ ವಕೀಲರನ್ನು ರೂಪಿಸುವ ಕಾರ್ಯವನ್ನು ಸಂಘ ನಿರಂತರವಾಗಿ ನಡೆಸುತ್ತಿದೆ ಎಂದರು.

ಕಾಲೇಜು ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ ಗುರುಬಸವ ಸೂಳಿಭಾವಿ, ಸಂಘದ ಡಳಿತಾಧಿಕಾರಿ ವಿ.ಆರ್. ಶಿರೋಳ ಉಪಸ್ಥಿತರಿದ್ದರು. ಸಮಾರಂಭದಲ್ಲಿ ಒಟ್ಟು 114 ಪದವೀಧರರು ಕಾನೂನು ಪದವಿ ಸ್ವೀಕರಿಸಿದರು. ಪ್ರಾಚಾರ್ಯ ಡಾ.ಎಂ.ಪಿ.ಚೆಂದ್ರಿಕಾ ಸ್ವಾಗತಿಸಿದರು. ಶ್ರದ್ಧಾ ಕಮತಗಿ ಹಾಗೂ ನರಸಿಂಹರಾವ ದೇಸಾಯಿ ಕಾರ್ಯಕ್ರಮ ನಿರೂಪಿಸಿದರು. ಡಾ.ಸುದೀಂದ್ರ ವಂದಿಸಿದರು.

ಕಾರ್ಯಕ್ರಮದಲ್ಲಿ ಸಂಘದ ಸದಸ್ಯರು, ವಿವಿಧ ಕಾಲೇಜು ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷರು, ಪ್ರಾಧ್ಯಾಪಕರು, ಪಾಲಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾನೂನು ಆಳಕ್ಕೆ ಇಳದಷ್ಟು ಅದು ಸರಳವಾಗುತ್ತದೆ. ಕಾನೂನು ಪದವಿದರಿಗೆ ಸಾಕಷ್ಟು ಅವಕಾಶಗಳಿವೆ. ವಕೀಲ ವೃತ್ತಿಯಲ್ಲಿ ಹೆಸರಿನ ಜತೆ ಆದಾಯವು ಸಹ ಬರುತ್ತದೆ. ಆದರೆ, ನಾವು ಪ್ರಾಮಾಣಿಕವಾಗಿ ಜನರಿಗೆ ನ್ಯಾಯ ಒದಗಿಸುವ ಮೂಲಕ ಸಮಾಜದಲ್ಲಿ ಮಾದರಿಯಾಗಬೇಕು.

-ಪ್ರಭಾವತಿ ಹಿರೇಮಠ, ನಿವೃತ್ತ ನ್ಯಾಯಾಧೀಶೆ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತಾಳಿಕೋಟೆ ಪುರಸಭೆಯಿಂದ ಭೀಮನಬಾವಿ ಸ್ವಚ್ಛತಾ ಕಾರ್ಯ
ಪ್ರಸ್ತುತ ದಿನದಲ್ಲಿ ಸಂಸ್ಕಾರಯುತ ಶಿಕ್ಷಣ ಅತ್ಯವಶ್ಯಕ