ಶೋಷಿತರ ಪರ ಧ್ವನಿ ಎತ್ತುವುದೇ ಸಂಘಟನೆಯ ಉದ್ದೇಶ: ಡಿ.ವಿ.ನಾರಾಯಣಸ್ವಾಮಿ

KannadaprabhaNewsNetwork |  
Published : Sep 18, 2025, 01:10 AM IST
17ಬಿಜಿಪಿ-1 | Kannada Prabha

ಸಾರಾಂಶ

ಮಹಾನಾಯಕ ಡಾ.ಬಿ.ಆರ್. ಅಂಬೇಡ್ಕರ್ ಸೇನೆ ಕಳೆದ 5 ವರ್ಷಗಳಿಂದ ಬಡವರ, ದಲಿತರ, ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸಿ, ಅವರ ಸಮಸ್ಯೆಗಳಿಗೆ ನ್ಯಾಯ ಒದಗಿಸುವ ಕೆಲಸ ಮಾಡಿಕೊಂಡು ಬರುತ್ತಿದೆ.

ಕನ್ನಡಪ್ರಭ ವಾರ್ತೆ ಬಾಗೇಪಲ್ಲಿ

ಅಂಬೇಡ್ಕರ್ ಆಶಯದಂತೆ ಬಡವರು, ದಲಿತರು, ಕಾರ್ಮಿಕರು ಸೇರಿದಂತೆ ಜಾತ್ಯತೀತವಾಗಿ ಎಲ್ಲಾ ಸಮುದಾಯಗಳ ಶೋಷಿತರ ಪರವಾಗಿ ಧ್ವನಿ ಎತ್ತಿ ಸಾಮಾಜಿಕ ನ್ಯಾಯ ಒದಗಿಸುವುದೇ ನಮ್ಮ ಸಂಘಟನೆಯ ಮುಖ್ಯ ಉದ್ದೇಶವಾಗಿದೆ ಎಂದು ಮಹಾನಾಯಕ ಬಿ.ಆರ್.ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ಡಿ.ವಿ.ನಾರಾಯಣಸ್ವಾಮಿ ತಿಳಿಸಿದರು.

ಪಟ್ಟಣದ ಪತ್ರಕರ್ತರ ಭವನದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಹಾನಾಯಕ ಡಾ.ಬಿ.ಆರ್. ಅಂಬೇಡ್ಕರ್ ಸೇನೆ ಕಳೆದ 5 ವರ್ಷಗಳಿಂದ ಬಡವರ, ದಲಿತರ, ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸಿ, ಅವರ ಸಮಸ್ಯೆಗಳಿಗೆ ನ್ಯಾಯ ಒದಗಿಸುವ ಕೆಲಸ ಮಾಡಿಕೊಂಡು ಬರುತ್ತಿದೆ. ನಮ್ಮ ಸಂಘಟನೆ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವುದಲ್ಲದೆ ಅಂಬೇಡ್ಕರ್ ಆಶಯದಂತೆ ಜಾತ್ಯತೀತವಾಗಿ ಎಲ್ಲಾ ಸಮುದಾಯಗಳನ್ನು ಒಗ್ಗೂಡಿಸಿಕೊಂಡು ಸಂಘಟಿಸುವುದಾಗಿ ತಿಳಿಸಿದರು.

ಚಿಕ್ಕಬಳ್ಳಾಪುರ ಸೇರಿ ರಾಜ್ಯದ 19 ಜಿಲ್ಲೆಗಳಲ್ಲಿ ಸಂಘಟನೆ ಮಾಡಲಾಗಿದೆ. ಅತೀ ಶೀಘ್ರದಲ್ಲಿಯೇ ರಾಜ್ಯದ ಉಳಿದ ಎಲ್ಲಾ ಜಿಲ್ಲೆಗಳಲ್ಲಿಯೂ ಸಂಘಟಿಸುವ ಗುರಿಯನ್ನು ಹೊಂದಿರುವುದಾಗಿ ತಿಳಿಸಿದರಲ್ಲದೆ, ತಾಲೂಕು ಮಟ್ಟದಲ್ಲಿ ಶಾಖೆಗಳನ್ನು ಪ್ರಾರಂಭಿಸಿ, ಗ್ರಾಮೀಣ ಪ್ರದೇಶಗಳಲ್ಲಿ ತಳಮಟ್ಟದಿಂದ ಸಂಘಟಿಸಲು ನೂತನ ಪದಾಧಿಕಾರಿಗಳು ಕೈಜೋಡಿಸಬೇಕೆಂದರು. ಮಹಾನಾಯಕ ಬಿ.ಆರ್.ಅಂಬೇಡ್ಕರ್ ಸೇನೆಯ ಬಾಗೇಪಲ್ಲಿ ತಾಲೂಕು ನೂತನ ಪದಾಧಿಕಾರಿಗಳನ್ನು ಬಾಗೇಪಲ್ಲಿಯ ಅಂಬೇಡ್ಕರ್ ಭವನದಲ್ಲಿ ನಡೆದ ಸಭೆಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದರು.

ಸೇನೆಯ ತಾಲೂಕು ಅಧ್ಯಕ್ಷರನ್ನಾಗಿ ಎನ್.ನಾರಾಯಣಸ್ವಾಮಿ, ಉಪಾಧ್ಯಕ್ಷರಾಗಿ ಯಲ್ಲಂಪಲ್ಲಿ ಶ್ರೀನಿವಾಸ್ ಕುಮಾರ್, ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್, ಕಾರ್ಯದರ್ಶಿ ಮಂಜುನಾಥ್, ಸಹಕಾರ್ಯದರ್ಶಿ ಬಂಡಿನರಸಿಂಹಪ್ಪ, ಸಂಘಟನಾ ಕಾರ್ಯದರ್ಶಿಗಳಾಗಿ ಮಣಿ ಕುಮಾರ್, ರಾಮಕೃಷ್ಣ, ಗಂಗರಾಜು, ಎಂ.ಆರ್.ನರಸಿಂಹಮೂರ್ತಿ, ಜಂಟಿಕಾರ್ಯದರ್ಶಿ ರಾಮಕೃಷ್ಣ, ಕಾರ್ಮಿಕ ಘಟಕದ ಅಧ್ಯಕ್ಷ ಪಾತಪಾಳ್ಯ ಗಂಗರಾಜು, ಕಾರ್ಯಾಧ್ಯಕ್ಷ ಪೆನಮಲ ನರಸಿಂಹಪ್ಪ ಹಾಗೂ ಮಹಿಳಾ ಘಟಕದ ತಾಲೂಕು ಅಧ್ಯಕ್ಷೆ ಜಿ.ಗಂಗುಲಮ್ಮ, ಪ್ರಧಾನ ಕಾರ್ಯದರ್ಶಿ, ಪಿ.ಎನ್.ವನಜಾ, ಉಪಾಧ್ಯಕ್ಷೆ ಭೂದೇವಿ, ರಮಾದೇವಿ, ಕಾರ್ಯದರ್ಶಿ ರಾಧಮ್ಮ, ಸಹಕಾರ್ಯದರ್ಶಿ ಸುನಂದ, ಖಜಾಂಚಿ ಅಶ್ವಿನಿ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ರೂಪ, ಉಪಾಧ್ಯಕ್ಷೆ ಮಿಲ್ಟ್ರೀ ನಾಗರತ್ನಮ್ಮ, ಕಾರ್ಯಾಧ್ಯಕ್ಷೆ ಜ್ಯೋತಿರವರನ್ನು ಅವಿರೋಧವಾಗಿ ಆಯ್ಕೆ ಮಾಡಿರುವುದಾಗಿ ತಿಳಿಸಿದರು.

ಮಹಾನಾಯಕ ಬಿ.ಆರ್.ಅಂಬೇಡ್ಕರ್ ಸೇನೆಯ ಜಿಲ್ಲಾಧ್ಯಕ್ಷ ಎಂ.ಸಿ ತಿಮ್ಮರಾಜು, ಪ್ರಧಾನ ಕಾರ್ಯದರ್ಶಿ ಎಸ್.ಬಿ.ಮಂಜುನಾಥ್ ಸೇರಿ ಸಂಘಟನೆಯ ಮುಖಂಡರು ಇದ್ದರು.

------- ಬಾಗೇಪಲ್ಲಿ ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಹಾನಾಯಕ ಡಾ.ಬಿ.ಆರ್.ಅಂಬೇಡ್ಕರ್ ಸೇನೆಯ ರಾಜ್ಯಾಧ್ಯಕ್ಷ ಡಿ.ವಿ.ನಾರಾಯಣಸ್ವಾಮಿ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

500 ನಾಯಿಗಳಿಗೆ ಚಿಕನ್‌ ರೈಸ್ ನೀಡಲು ವರ್ಷಕ್ಕೆ 1.83 ಕೋಟಿ
ಯಲಹಂಕದಲ್ಲಿ ‘ಚೀನಾದ ಹ್ಯಾಂಗ್‌ಝೌ’ ಮಾದರಿ ರೈಲು ನಿಲ್ದಾಣ