ರೈಲು ನಿಲ್ದಾಣಕ್ಕೆ ಶಿವಕುಮಾರ ಸ್ವಾಮೀಜಿ ಹೆಸರು

KannadaprabhaNewsNetwork |  
Published : Jan 22, 2025, 12:31 AM IST
ತುಮಕೂರಿನ ಸಿದ್ಧಗಂಗಾ ಮಠಕ್ಕೆ ಆಗಮಿಸಿದ ಕೇಂದ್ರ ಸಚಿವ ಸೋಮಣ್ಣ ಅವರನ್ನು ಗೌರವಿಸಿದ ಸಿದ್ಧಲಿಂಗ ಸ್ವಾಮೀಜಿ | Kannada Prabha

ಸಾರಾಂಶ

ನಗರದ ರೈಲು ನಿಲ್ದಾಣವನ್ನು 100 ಕೋಟಿ ರು. ವೆಚ್ಚದಲ್ಲಿ ನವೀಕರಣಗೊಳಿಸಿ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಹೆಸರನ್ನು ಇಡಲಾಗುವುದು ಎಂದು ಕೇಂದ್ರದ ಜಲಶಕ್ತಿ ಹಾಗೂ ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.

ಕನ್ನಡಪ್ರಭ ವಾರ್ತೆ, ತುಮಕೂರುನಗರದ ರೈಲು ನಿಲ್ದಾಣವನ್ನು 100 ಕೋಟಿ ರು. ವೆಚ್ಚದಲ್ಲಿ ನವೀಕರಣಗೊಳಿಸಿ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಹೆಸರನ್ನು ಇಡಲಾಗುವುದು ಎಂದು ಕೇಂದ್ರದ ಜಲಶಕ್ತಿ ಹಾಗೂ ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು. ಅವರು ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಆಯೋಜಿಸಲಾಗಿದ್ದ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಅವರ 6ನೇ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಮಾಜದಲ್ಲಿ ಆಶ್ರಯವಿಲ್ಲದ ಎಲ್ಲ ವರ್ಗದವರಿಗೆ ಆಶ್ರಯ ನೀಡಿ ಅನ್ನ, ಅಕ್ಷರ, ದಾಸೋಹವನ್ನು ಉಣಬಡಿಸುವ ಮೂಲಕ ಡಾ. ಶಿವಕುಮಾರ ಸ್ವಾಮೀಜಿಯವರು ವಿಶ್ವಕ್ಕೆ ಮಾದರಿಯಾಗಿದ್ದಾರೆ. ತಾವು ಉನ್ನತ ಸ್ಥಾನಕ್ಕೇರಲು ಶ್ರೀಗಳ ಆಶೀರ್ವಾದವೇ ಕಾರಣ. ಸಿದ್ಧಗಂಗಾ ಶ್ರೀಗಳಾದ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಯವರ ಸಂಸ್ಮರಣಾ ದಿನವನ್ನು ದಾಸೋಹ ದಿನವನ್ನಾಗಿ ಘೋಷಿಸಿ ರಾಜ್ಯದಾದ್ಯಂತ ಆಚರಣೆಯನ್ನು ಕಾರ್ಯರೂಪಕ್ಕೆ ತರಬೇಕೆಂದು ಸರ್ಕಾರಕ್ಕೆ ಮನವಿ ಮಾಡಿದರು.

ಶಾಸಕರಾದ ಜಿ.ಬಿ.ಜ್ಯೋತಿಗಣೇಶ್ ಹಾಗೂ ಬಿ. ಸುರೇಶ್ ಗೌಡ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ, ಮೇಘಾಲಯದ ಹಿರಿಯ ಅಧಿಕಾರಿ ಬ್ರಹ್ಮದತ್ ಸೇರಿದಂತೆ ಶ್ರೀ ಮಠದ ಆಡಳಿತಾಧಿಕಾರಿಗಳು, ವಿವಿಧ ಇಲಾಖಾಧಿಕಾರಿಗಳು, ಅಸಂಖ್ಯಾತ ಭಕ್ತಾಧಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸದೃಢ ಆರೋಗ್ಯಕ್ಕೆ ಹಲ್ಲು ಸದೃಢವಾಗಿರಲಿ
ಬೆಳಗಾವಿ ಜಿಲ್ಲೆ ವಿಭಜನೆ ಇರಾದೆ ಸಿಎಂಗಿದೆ