ವಾಲ್ಮೀಕಿ ರಚಿಸಿರುವ ರಾಮಾಯಣ ಗ್ರಂಥ ನಮ್ಮೆಲ್ಲರ ಜೀವನಕ್ಕೆ ಮಾರ್ಗದರ್ಶಿ: ಡಾ.ಅಶೋಕ್

KannadaprabhaNewsNetwork |  
Published : Oct 27, 2026, 02:00 AM IST
26ಕೆಎಂಎನ್ ಡಿ12 | Kannada Prabha

ಸಾರಾಂಶ

ದೇಶದಲ್ಲಿ ನಮ್ಮ ಸಂಸ್ಕೃತಿ, ಧಾರ್ಮಿಕತೆ, ಆಚಾರ ವಿಚಾರಗಳು ಇನ್ನೂ ಗಟ್ಟಿಯಾಗಿ ಉಳಿದುಕೊಳ್ಳಲು ವಾಲ್ಮೀಕಿಯಂತಹ ಮಹನೀಯರ ಕೊಡುಗೆ ಅಪಾರ. ಜಗತ್ತನ್ನೇ ಮುಖ್ಯವಾಹಿನಿಗೆ ಕರೆತರುವ ಪ್ರಯತ್ನ ಮಾಡಿದವರು ಮಹರ್ಷಿ ವಾಲ್ಮೀಕಿ.

ಕನ್ನಡಪ್ರಭ ವಾರ್ತೆ ನಾಗಮಂಗಲ

ಪೂರ್ವ ಜೀವನದಲ್ಲಿ ಕ್ರೂರವಾದ ಹಿನ್ನೆಲೆ ಹೊಂದಿದ್ದ ವಾಲ್ಮೀಕಿ ಮಹರ್ಷಿಗಳು ತದನಂತರ ಮನಃಪರಿವರ್ತನೆಗೊಂಡು ಮಹಾ ಕಾವ್ಯವನ್ನೇ ರಚಿಸಿದ ಮಹನೀಯರಾದರು. ಜೀವನದ ಮೌಲ್ಯಗಳನ್ನೊಳಗೊಂಡಿರುವ ಪವಿತ್ರ ರಾಮಾಯಣ ಗ್ರಂಥ ನಮ್ಮೆಲ್ಲರ ಜೀವನಕ್ಕೆ ಮಾರ್ಗದರ್ಶಿಯಾಗಿದೆ ಎಂದು ತಹಸೀಲ್ದಾರ್ ಲೆಫ್ಟಿನೆಂಟ್ ಕರ್ನಲ್ ಡಾ.ಅಶೋಕ್ ಹೇಳಿದರು.

ಪಟ್ಟಣದ ತಾಲೂಕು ಆಡಳಿತಸೌಧದ ಒಳಾಂಗಣದಲ್ಲಿ ತಾಲೂಕು ಆಡಳಿತ, ತಾಪಂ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಪುರಸಭೆ ಹಾಗೂ ಬೆಳ್ಳೂರು ಪಟ್ಟಣ ಪಂಚಾಯ್ತಿ ಸಹಭಾಗಿತ್ವದಲ್ಲಿ ಸೋಮವಾರ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವದಲ್ಲಿ ಮಾತನಾಡಿದರು.

ದೇಶದಲ್ಲಿ ನಮ್ಮ ಸಂಸ್ಕೃತಿ, ಧಾರ್ಮಿಕತೆ, ಆಚಾರ ವಿಚಾರಗಳು ಇನ್ನೂ ಗಟ್ಟಿಯಾಗಿ ಉಳಿದುಕೊಳ್ಳಲು ವಾಲ್ಮೀಕಿಯಂತಹ ಮಹನೀಯರ ಕೊಡುಗೆ ಅಪಾರ. ಜಗತ್ತನ್ನೇ ಮುಖ್ಯವಾಹಿನಿಗೆ ಕರೆತರುವ ಪ್ರಯತ್ನ ಮಾಡಿದವರು ಮಹರ್ಷಿ ವಾಲ್ಮೀಕಿ. ಸಂಸ್ಕೃತದಲ್ಲಿ ಮೊಟ್ಟ ಮೊದಲು ಅವರು ರಚಿಸಿರುವ ರಾಮಾಯಣವೆಂಬ ಮಹಾಗ್ರಂಥದ ಚರಿತ್ರೆಯನ್ನು ಪ್ರತಿಯೊಬ್ಬರೂ ಅರ್ಥೈಸಿಕೊಂಡು ಪರಿವರ್ತನಾ ಜೀವನ ನಡೆಸುವ ಮೂಲಕ ಗುರಿಸಾಧನೆಗೆ ಮುಂದಾಗಬೇಕು ಎಂದರು.

ಸರ್ಕಾರವು ವಾಲ್ಮೀಕಿ ಸಮುದಾಯದ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ನೀಡುತ್ತಾ ಬಂದಿದೆ. ಅವುಗಳನ್ನು ಎಲ್ಲರೂ ಸದುಪಯೋಗಪಡಿಸಿಕೊಂಡು ಉನ್ನತಿ ಸಾಧಿಸಬೇಕು. ಸಮುದಾಯದ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ಕೊಡಿಸಲು ಪೋಷಕರು ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

ಪ್ರಪಂಚಕ್ಕೆ ಹಲವು ಪ್ರಥಮಗಳನ್ನು ಕೊಟ್ಟ ದೇಶ ನಮ್ಮದು. ಇಂತ ಶ್ರೇಷ್ಠ ಭೂಮಿಯಲ್ಲಿ ಜನಿಸಿರುವುದೇ ನಮ್ಮ ಪುಣ್ಯ. ನಾವು ಜ್ಞಾನವನ್ನು ಎಲ್ಲರೊಂದಿಗೆ ಹಂಚಿಕೊಳ್ಳಬೇಕು. ಆಗ ಮಾತ್ರ ಜ್ಞಾನದ ವೃದ್ಧಿ ಸಾಧ್ಯ. ವಾಲ್ಮೀಕಿ ಅವರ ಬದುಕಿನಲ್ಲಿ ಹಲವು ಅಡೆತಡೆಗಳು ಬಂದರೂ ಸಹ ಅವರಲ್ಲಿದ್ದ ಶ್ರದ್ಧೆ ಶಿಸ್ತಿನಿಂದ ಯಶಸ್ಸು ಸಾಧಿಸಿದರು. ಆದ್ದರಿಂದ ಪ್ರತಿಯೊಬ್ಬರ ಬದುಕಿನಲ್ಲೂ ಹತ್ತು ಹಲವು ತಿರುವುಗಳು ಇರುತ್ತವೆ. ಅವುಗಳನ್ನು ನಿಮ್ಮ ಗುರಿಯೆಡೆಗೆ ತಿರುಗಿಸಿ ಸಾಧನೆ ಮಾಡುವುದೇ ಮುಖ್ಯವಾಗಿರಿಸಿಕೊಳ್ಳಬೇಕು ಎಂದರು.

ತಾಲೂಕಿನ ಕದಬಹಳ್ಳಿಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಉಪನ್ಯಾಸಕಿ ಅನಿತಾ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಗಣ್ಯರು ಮತ್ತು ಅಧಿಕಾರಿಗಳು ಪುಷ್ಪಾರ್ಚನೆ ಮಾಡಿ ಪೂಜೆ ಸಲ್ಲಿಸಿದರು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಮುದಾಯದ ಸಾಧಕರು ಮತ್ತು ಕಳೆದ ಸಾಲಿನ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ತಾಲೂಕು ಆಡಳಿತದಿಂದ ಸನ್ಮಾನಿಸಲಾಯಿತು.

ಈ ವೇಳೆ ತಾಪಂ ಇಒ ಬಿ.ಎಸ್.ಸತೀಶ್, ತಾಲೂಕು ಆರೋಗ್ಯಾಧಿಕಾರಿ ಡಾ.ನಾರಾಯಣ್, ಸಮಾಜ ಕಲ್ಯಾಣಾಧಿಕಾರಿ ರಾಘವೇಂದ್ರ, ಸಿಡಿಪಿಒ ಕೃಷ್ಣಮೂರ್ತಿ, ಪಟ್ಟಣ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಎಚ್.ಎಂ.ಶಿವಕುಮಾರ್, ಜಿಲ್ಲಾ ದಸಂಸ ಮುಖಂಡ ಎಂ.ನಾಗರಾಜಯ್ಯ ಸೇರಿದಂತೆ ಸಮುದಾಯದ ಮುಖಂಡರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಾಲ್ಮೀಕಿ ರಾಮಾಯಣ ಪ್ರಸ್ತುತ ಜೀವನಕ್ಕೂ ದಾರೀದೀಪ
ವಾಲ್ಮೀಕಿ ಕಾವ್ಯದ ಆದರ್ಶಗಳು ಮನುಕುಲದ ನೆಮ್ಮದಿಗೆ ದಾರಿದೀಪ: ಎರ್ರಿಸ್ವಾಮಿ