ಸಹವಾಸ ದೋಷದಿಂದ ಮಕ್ಕಳಲ್ಲಿ ದುಶ್ಚಟದ ಪ್ರಮಾಣ ಹೆಚ್ಚುತ್ತಿದೆ: ಬಾಲಕೃಷ್ಣ ಭಟ್ ಕಳವಳ

KannadaprabhaNewsNetwork |  
Published : Dec 20, 2025, 01:45 AM IST
ನರಸಿಂಹರಾಜಪುರ ತಾಲೂಕಿನ ಬಿ.ಎಚ್.ಕೈಮರದ ಐ.ಟಿ.ಐ ಕಾಲೇಜಿನಲ್ಲಿ ಧ.ಗ್ರಾ.ಯೋಜನೆ ಹಾಗೂ ಜಿಲ್ಲಾ ಜನ ಜಾಗ್ರತಿ ವೇದಿಕೆಯಿಂದ ನಡೆದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಜಿಲ್ಲಾ ಜನ ಜಾಗ್ರತಿ ವೇದಿಕೆ ಉಪಾಧ್ಯಕ್ಷ ಬಾಲಕೃಷ್ಣಭಟ್ ಉದ್ಘಾಟಿಸಿದರು. | Kannada Prabha

ಸಾರಾಂಶ

ನರಸಿಂಹರಾಜಪುರಇತ್ತೀಚಿನ ದಿನಗಳಲ್ಲಿ ಸಹವಾಸ ದೋಷದಿಂದ ಮಕ್ಕಳಲ್ಲಿ ದುಶ್ಚಟದ ಪ್ರಮಾಣ ಹೆಚ್ಚುತ್ತಿದೆ ಎಂದು ಜಿಲ್ಲಾ ಜನ ಜಾಗೃತಿ ವೇದಿಕೆ ಉಪಾಧ್ಯಕ್ಷ ಬಾಲಕೃಷ್ಣ ಭಟ್ ಕಳವಳ ವ್ಯಕ್ತಪಡಿಸಿದರು.

- ಧ.ಗ್ರಾ.ಯೋಜನೆಯಿಂದ ಬಿ.ಎಚ್.ಕೈಮರದ ಐ.ಟಿ.ಐ.ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ, ನರಸಿಂಹರಾಜಪುರ

ಇತ್ತೀಚಿನ ದಿನಗಳಲ್ಲಿ ಸಹವಾಸ ದೋಷದಿಂದ ಮಕ್ಕಳಲ್ಲಿ ದುಶ್ಚಟದ ಪ್ರಮಾಣ ಹೆಚ್ಚುತ್ತಿದೆ ಎಂದು ಜಿಲ್ಲಾ ಜನ ಜಾಗೃತಿ ವೇದಿಕೆ ಉಪಾಧ್ಯಕ್ಷ ಬಾಲಕೃಷ್ಣ ಭಟ್ ಕಳವಳ ವ್ಯಕ್ತಪಡಿಸಿದರು.

ಬಿ.ಎಚ್.ಕೈಮರದ ಐ.ಟಿ.ಐ ಕಾಲೇಜಿನಲ್ಲಿ ಬುಧವಾರ ಧರ್ಮಸ್ಥಳ ಗ್ರಾಮಮಾಭಿವೃದ್ಧಿ ಯೋಜನೆ ಹಾಗೂ ಜಿಲ್ಲಾ ಜನ ಜಾಗೃತಿ ವೇದಿಕೆ ಸಹಯೋಗದಲ್ಲಿ ನಡೆದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ದುಶ್ಚಟದ ಪರಿಣಾಮದ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸಲು ಶಾಲಾ, ಕಾಲೇಜುಗಳಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಮಕ್ಕಳು ಚಿಕ್ಕಂದಿನಿಂದಲೇ ಉತ್ತಮ ಸಂಸ್ಕಾರ ಬೆಳೆಸಿಕೊಳ್ಳಬೇಕು. ತಂದೆ, ತಾಯಿ ಹಾಗೂ ಗುರು ಹಿರಿಯರಿಗೆ ಗೌರವ ನೀಡಬೇಕು. ಪ್ರಾರಂಭದಲ್ಲಿ ಶೋಕಿಗಾಗಿ ದುಶ್ಚಟ ಕಲಿಯುತ್ತಾರೆ. ನಂತರ ದುಶ್ಚಟಗಳೇ ಅವರ ಜೀವನವನ್ನು ಹಾಳು ಮಾಡುತ್ತದೆ. ಆದ್ದರಿಂದ ಶಾಲಾ, ಕಾಲೇಜುಗಳಲ್ಲಿ ಒಳ್ಳೆಯ ಮಿತ್ರರ ಸಹವಾಸ ಮಾಡಬೇಕು ಎಂದು ಕರೆ ನೀಡಿದರು.

ಮುಖ್ಯ ಅತಿಥಿಯಾಗಿದ್ದ ಕಟ್ಟಿನಮನೆ ಸರ್ಕಾರಿ ಪ್ರೌಢ ಶಾಲೆ ಮುಖ್ಯೋಪಾಧ್ಯಾಯ ಮಂಜುನಾಥ್ ಗೌಡ ಮಾತನಾಡಿ, ಮಕ್ಕಳಲ್ಲಿ ಜ್ಞಾನ ಸಂಪಾದನೆ ಅತಿ ಮುಖ್ಯ. ಜ್ಞಾನ ಸಂಪಾದನೆ ಆಗಬೇಕಾದರೆ ಹೆಚ್ಚು ಪುಸ್ತಕ ಓದಬೇಕು. ಮಹಾತ್ಮರ ಜೀವನ ಚರಿತ್ರೆಯನ್ನು ಅಧ್ಯಯನ ಮಾಡಬೇಕು. ಅವರ ಜೀವನದ ಆದರ್ಶಗಳನ್ನು ನಮ್ಮ ಜೀವನದಲ್ಲೂ ಅಳವಡಿಸಿ ಕೊಳ್ಳಬೇಕು. ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಇಡೀ ರಾಜ್ಯಕ್ಕೆ ಮಾದರಿಯಾಗಿದ್ದಾರೆ ಎಂದರು.

ಸಭೆಯಲ್ಲಿ ಉಪಸ್ಥಿತರಿದ್ದ ಐಟಿಐ ಕಾಲೇಜಿನ ತರಬೇತಿ ಅಧಿಕಾರಿ ರವಿರಾಜ್ ಮಾತನಾಡಿ, ನಾನು ಧರ್ಮಸ್ಥಳದ ರತ್ನ ಮಾನಸ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಣ ಪಡೆದಿದ್ದೆ. ಅಲ್ಲಿನ ಶಿಕ್ಷಣ ನನ್ನ ಬದುಕನ್ನು ರೂಪಿಸಿತು ಎಂದು ನೆನಪಿಸಿಕೊಂಡರು. ಸಭೆಯಲ್ಲಿ ಧ.ಗ್ರಾ.ಯೋಜನೆ ಕೈಮರ ವಲಯ ಮೇಲ್ವಿಚಾರಕ ತೀರ್ಥರಾಜ್, ಸೇವಾ ಪ್ರತಿನಿಧಿ ಅನ್ನಪೂರ್ಣ,ಕಾಲೇಜಿನ ಕಿರಿಯ ತರಬೇತಿ ಅಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಣಸೆ, ಹಲಸು, ನೇರಳೆಗೆ ಮಂಡಳಿ ರಚಿಸಿ: ದೇವೇಗೌಡ
ಗುಮ್ಮ ಬಂದ ಗುಮ್ಮ, ಮಕ್ಕಳಿಗೆ ಹೊಡೆಯೋ ಗುಮ್ಮ!