ನವಭಾರತದ ನಿರ್ಮಾಣ ಜವಾಬ್ದಾರಿ ಯುವಕರದ್ದು

KannadaprabhaNewsNetwork |  
Published : Jan 17, 2025, 12:45 AM IST
ತುಮಕೂರು ವಿವಿ ಸ್ವಾಮಿ ವಿವೇಕಾನಂದ ಅಧ್ಯಯನ ಪೀಠ ವಿವಿ ಕಲಾ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಯುವ ದಿನಾಚರಣೆಯಲ್ಲಿ ಸ್ವಾಮಿಜಪಾನಂದಜೀ ಮಹಾರಾಜ್, ಪ್ರೊ. ಎಂ. ವೆಂಕಟೇಶ್ವರಲು.,ಡಾ. ಕೆ.ಆರ್. ಪದ್ಮಿನಿ, ನಿತ್ಯಾನಂದ ವಿವೇಕವಂಶಿ, ನಾಹಿದಾಜಮ್‌ಜಮ್., ಪ್ರೊ. ಪ್ರಸನ್ನಕುಮಾರ್‌ ಕೆ.ಇದ್ದಾರೆ. | Kannada Prabha

ಸಾರಾಂಶ

ನವ ಭಾರತ ನಿರ್ಮಾಣಕ್ಕೆ ಯುವಜನತೆ ಮುಂದಾಗಬೇಕು. ಭಾರತವನ್ನು ಸುಭದ್ರವನ್ನಾಗಿ ಮಾಡುವ ಜವಾಬ್ದಾರಿ ಎಲ್ಲರದು ಎಂದು ಪಾವಗಡದ ಶ್ರೀ ರಾಮಕೃಷ್ಣ ಸೇವಾಶ್ರಮದ ಅಧ್ಯಕ್ಷ ಸ್ವಾಮಿ ಜಪಾನಂದಜೀ ಮಹಾರಾಜ್ ಹೇಳಿದರು.

ಕನ್ನಡಪ್ರಭ ವಾರ್ತೆ, ತುಮಕೂರುನವ ಭಾರತ ನಿರ್ಮಾಣಕ್ಕೆ ಯುವಜನತೆ ಮುಂದಾಗಬೇಕು. ಭಾರತವನ್ನು ಸುಭದ್ರವನ್ನಾಗಿ ಮಾಡುವ ಜವಾಬ್ದಾರಿ ಎಲ್ಲರದು ಎಂದು ಪಾವಗಡದ ಶ್ರೀ ರಾಮಕೃಷ್ಣ ಸೇವಾಶ್ರಮದ ಅಧ್ಯಕ್ಷ ಸ್ವಾಮಿ ಜಪಾನಂದಜೀ ಮಹಾರಾಜ್ ಹೇಳಿದರು.ವಿಶ್ವವಿದ್ಯಾನಿಲಯ ಕಲಾ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದ ಅಧ್ಯಯನ ಪೀಠದ ವತಿಯಿಂದ ಗುರುವಾರ ಆಯೋಜಿಸಿದ್ದ ಸ್ವಾಮಿ ವಿವೇಕಾನಂದರ 162 ನೇ ಜನ್ಮ ಮಹೋತ್ಸವದ ಹಾಗೂ ರಾಷ್ಟ್ರೀಯ ಯುವ ದಿನಾಚರಣೆ ನೆರವೇರಿಸಿ ಮಾತನಾಡಿದಅವರು, ದೇಶಕ್ಕೋಸ್ಕರ ಜೀವನದುದ್ದಕ್ಕೂ ಪ್ರಾರ್ಥನೆ ಮಾಡಿ, ದೇಶವು ಪಾಶ್ಚಿಮಾತ್ಯರ ಹಿಡಿತದಿಂದ ಮುಕ್ತಿ ಪಡೆಯಬೇಕು ಎಂದು ಹೋರಾಡಿದ ಮಹಾನ್ ವ್ಯಕ್ತಿ ವಿವೇಕಾನಂದರು ಎಂದರು. ನನ್ನ ದೇಶಕ್ಕೆ ನಾನು ಏನು ಮಾಡಬಲ್ಲೆ, ನನ್ನ ಸಂಸ್ಕೃತಿಗೆ ನನ್ನಕೊಡುಗೆ ಏನು, ಎಂದು ನೀವೇ ಪ್ರಶಿಸಿಕೊಳ್ಳಿ. ಮಂಗಳಕ್ಕೆ ಹೋದ ನಾವು ಮನದ ಅಂಗಳಕ್ಕೆ ಹೋಗುವುದಕ್ಕೆ ವಿಫಲ ಆಗುತ್ತಿದ್ದೇವೆ ಎಂದರು.ಶಾಲೆಯ ಶಿಕ್ಷಣದಲ್ಲಿ ಅಗತ್ಯ ವಿಚಾರಗಳಿಗಿಂತ ಅನಗತ್ಯ ವಿಚಾರಗಳನ್ನು ತುಂಬುತ್ತಿದ್ದಾರೆ. ಸ್ವಾಮಿ ವಿವೇಕಾನಂದರವರ ವಿಚಾರಧಾರೆ ಕಣಕಣದಲ್ಲಿ ಬರಬೇಕು. ಯುವಜನತೆ ಶಕ್ತಿಯ ಜ್ವಾಲೆಗಳಾಗಬೇಕು ಎಂದರು.ಶಿಕ್ಷಣ ತಜ್ಞರಾದ ಕೆ.ಆರ್.ಪದ್ಮಿನಿ ಮಾತನಾಡಿ ಸ್ವಾಮಿ ವಿವೇಕಾನಂದರು ಪರೀಕ್ಷಿಸದೆ ಯಾವುದನ್ನೂ ಒಪ್ಪಿಕೊಳ್ಳುತ್ತಿರಲಿಲ್ಲ. ಏಕಾಗ್ರತೆ ಎಂಬುದು ಜೀವನದ ಮುಖ್ಯಘಟಕ ಎಂದರು.ವಿವೇಕ ವಂಶಿ ಸಂಸ್ಥೆಯ ನಿತ್ಯಾನಂದ ವಿವೇಕ ವಂಶಿ ಮಾತನಾಡಿ, ದೇಶ ಬದಲಿಸಬೇಕೆಂದರೆ ಮೊದಲು ಮನುಷ್ಯರನ್ನು ಬದಲಾಯಿಸಬೇಕು. ವಿವೇಕಾನಂದ ಅವರನ್ನು ಎಲ್ಲಾ ದೇಶಗಳು ಒಪ್ಪಿಕೊಳ್ಳುತ್ತವೆ. ಆಂತರಿಕವಾಗಿ ಬಲಿಷ್ಠರಾಗಿ ಪ್ರತಿಯೊಂದು ಆತ್ಮವು ಆಂತರ್ಯದಲ್ಲಿ ಜೀವಂತವಾಗಿದೆ. ಅದು ಅದಮ್ಯ ಶಕ್ತಿಯ ಗಡಿಯಾಗಬೇಕು ಎಂದು ಹೇಳಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ತುಮಕೂರು ವಿವಿಯ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು, ವಿವೇಕಾನಂದರು ತಮ್ಮ ಸ್ವಾರ್ಥದ ಬಗ್ಗೆ ಚಿಂತಿಸಿರಲಿಲ್ಲ. ಸದಾದೇಶದ ಶಕ್ತಿಯನ್ನು ಪ್ರೇರೇಪಿಸಿದರು. ನಾವು ನಮ್ಮ ಶಕ್ತಿಯನ್ನುದೇಶಕ್ಕೆ ಹೇಗೆ ಹಂಚಿಕೆ ಮಾಡಬೇಕು ಎಂದು ತಿಳಿಸಿದರು.ತುಮಕೂರು ವಿವಿಯ ಕುಲಸಚಿವೆ ನಾಹಿದಾ ಜಮ್‌ಜಮ್, ಪರೀಕ್ಷಾಂಗ ಕುಲಸಚಿವ ಪ್ರೊ. ಪ್ರಸನ್ನಕುಮಾರ್‌ ಕೆ., ಕಲಾ ಕಾಲೇಜಿನ ಪ್ರಾಂಶುಪಾಲ ಪ್ರೊ. ಬಿ ಕರಿಯಣ್ಣ., ವಿವೇಕಾನಂದ ಅಧ್ಯಯನ ಪೀಠ ಸಂಯೋಜಕ ಡಾ.ಚೇತನ್ ಪ್ರತಾಪ್‌ ಕೆ.ಎನ್. ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!