ಪ್ರಜಾಪ್ರಭುತ್ವ ಸಂರಕ್ಷಣೆ ಜವಾಬ್ದಾರಿ ಎಲ್ಲರ ಮೇಲಿದೆ -ಶಾಸಕ ಕೋಳಿವಾಡ

KannadaprabhaNewsNetwork |  
Published : Sep 16, 2024, 01:51 AM IST
ಫೋಟೊ ಶೀರ್ಷಿಕೆ: 15ಆರ್‌ಎನ್‌ಆರ್2ರಾಣಿಬೆನ್ನೂರು ನಗರದ ಮಾಗೋಡ ರಸ್ತೆ ಕ್ರಾಸ್ ಬಳಿ ಅಂತಾರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಅತಿಥಿಗಳು ಮಾನವ ಸರಪಳಿ ರಚಿಸಿ ಕೈಗಳನ್ನು ಮೇಲೆತ್ತಿ ಜೈ ಹಿಂದ್, ಜೈ ಕರ್ನಾಟಕ ಘೋಷಣೆ ಕೂಗಿದರು. ಫೋಟೊ ಶೀರ್ಷಿಕೆ: 15ಆರ್‌ಎನ್‌ಆರ್2ಎರಾಣಿಬೆನ್ನೂರು ನಗರದ ಮಾಗೋಡ ರಸ್ತೆ ಕ್ರಾಸ್ ಬಳಿ ಅಂತಾರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳು, ಶಿಕ್ಷಕರು, ಸಾರ್ವಜನಿಕರು ಮಾನವ ಸರಪಳಿ ರಚಿಸಿರುವುದು. ಫೋಟೊ ಶೀರ್ಷಿಕೆ: 15ಆರ್‌ಎನ್‌ಆರ್2ಬಿರಾಣಿಬೆನ್ನೂರು ನಗರದ ಮಾಗೋಡ ರಸ್ತೆ ಕ್ರಾಸ್ ಬಳಿ ಅಂತಾರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳು ನೃತ್ಯ ಪ್ರದರ್ಶನ ಮಾಡಿದರು.  | Kannada Prabha

ಸಾರಾಂಶ

ನಮ್ಮ ದೇಶವು ಇಡೀ ವಿಶ್ವದಲ್ಲಿಯೇ ಅತೀ ದೊಡ್ಡದಾದ ಹಾಗೂ ಶಕ್ತಿಯುತವಾದ ಪ್ರಜಾಪ್ರಭುತ್ವವನ್ನು ಹೊಂದಿದೆ. ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ದೇಶ ನಮ್ಮದು. ಇಂತಹ ದೇಶದಲ್ಲಿರುವ ನಮ್ಮೆಲ್ಲರ ಮೇಲೆ ಸಂವಿಧಾನಾತ್ಮಕವಾಗಿ ಪ್ರಜಾಪ್ರಭುತ್ವವನ್ನು ಉಳಿಸಿ, ಬೆಳೆಸಿಕೊಂಡು ಹೋಗುವ ಗುರುತರ ಜವಾಬ್ದಾರಿ ಇದೆ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.

ರಾಣಿಬೆನ್ನೂರು: ನಮ್ಮ ದೇಶವು ಇಡೀ ವಿಶ್ವದಲ್ಲಿಯೇ ಅತೀ ದೊಡ್ಡದಾದ ಹಾಗೂ ಶಕ್ತಿಯುತವಾದ ಪ್ರಜಾಪ್ರಭುತ್ವವನ್ನು ಹೊಂದಿದೆ. ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ದೇಶ ನಮ್ಮದು. ಇಂತಹ ದೇಶದಲ್ಲಿರುವ ನಮ್ಮೆಲ್ಲರ ಮೇಲೆ ಸಂವಿಧಾನಾತ್ಮಕವಾಗಿ ಪ್ರಜಾಪ್ರಭುತ್ವವನ್ನು ಉಳಿಸಿ, ಬೆಳೆಸಿಕೊಂಡು ಹೋಗುವ ಗುರುತರ ಜವಾಬ್ದಾರಿ ಇದೆ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.ನಗರದ ಮಾಗೋಡ ರಸ್ತೆ ಕ್ರಾಸ್ ಬಳಿ ಜಿಲ್ಲಾಡಳಿತ, ಜಿಪಂ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಡೆದ 2024ರ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಏರ್ಪಡಿಸಲಾಗಿದ್ದ ಬೃಹತ್ ಮಾನವ ಸರಪಳಿ ನಿರ್ಮಾಣ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ನಮ್ಮ ದೇಶದಲ್ಲಿ 2.5 ಸಾವಿರ ರಾಜಕೀಯ ಪಕ್ಷಗಳು ಇವೆ. ಅದರಲ್ಲಿ 20 ಪಕ್ಷಗಳು ದೇಶದಲ್ಲಿ ಆಡಳಿತ ನಡೆಸುತ್ತಿವೆ. ದುರಂತವೆಂದರೆ 180ಕ್ಕೂ ಅಧಿಕ ಸಂಸದರು ಕ್ರಿಮಿನಲ್ ಮೊಕದ್ದಮೆ ಎದುರಿಸುತ್ತಿದ್ದಾರೆ. ನಿಜಕ್ಕೂ ಇದು ವಿಷಾದದ ಸಂಗತಿಯಾಗಿದ್ದು, ಇಂತಹ ವ್ಯವಸ್ಥೆಯನ್ನು ಬದಲಾಯಿಸುವ ಅಗತ್ಯವಿದೆ. ಶಿಕ್ಷಣದಿಂದ ಮಾತ್ರ ಪ್ರಜಾಪ್ರಭುತ್ವವನ್ನು ಉಳಿಸಿಕೊಂಡು ಹೋಗಲು ಸಾಧ್ಯ. ಈ ನಿಟ್ಟಿನಲ್ಲಿ ಸರ್ವರೂ ಜಾತೀಯತೆಯನ್ನು ಬಿಟ್ಟು ನಮ್ಮ ಸಂವಿಧಾನ, ನಮ್ಮ ಪ್ರಜಾಪ್ರಭುತ್ವ, ನಮ್ಮ ದೇಶ ಎಂಬ ಮನೋಭಾವನೆಯಿಂದ ಮುನ್ನಡೆಯಬೇಕು. ಅಂದಾಗ ನಾವು ಪ್ರಜಾಪ್ರಭುತ್ವ ದಿನ ಆಚರಿಸಿದ್ದಕ್ಕೂ ಸಾರ್ಥಕವಾಗುತ್ತದೆ. ಬುದ್ಧ, ಬಸವ, ಅಂಬೇಡ್ಕರ್ ಸಮಾನತೆಯ ಬಗ್ಗೆ ಹೋರಾಡಿದವರು ಅವರ ಆದರ್ಶಗಳನ್ನು ನಾವೆಲ್ಲರೂ ಪಾಲಿಸಬೇಕಿದೆ ಎಂದರು.ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಮಾತನಾಡಿ, ಅನಾದಿಕಾಲದಿಂದಲೂ ನಮ್ಮ ಸರಕಾರದ ವ್ಯವಸ್ಥೆ ಒಂದಿಲ್ಲೊಂದು ರೀತಿಯಲ್ಲಿತ್ತು. ಚುನಾವಣೆಯ ಮೂಲಕ ಕಾನೂನಾತ್ಮಕವಾಗಿ ಪ್ರತಿಯೊಬ್ಬ ಪ್ರಜೆಯು ಅನುಸರಿಸಿ ಬದಲಾವಣೆಯಲ್ಲಿ ಮಹತ್ತರವಾದ ಬೆಳವಣಿಗೆಗೆ ಕಾರಣೀಕರ್ತರಾಗಿದ್ದಾರೆ. ಸಂವಿಧಾನದಿಂದ ಬಲಿಷ್ಠವಾದ ಭಾರತವನ್ನು ನಿರ್ಮಾಣ ಮಾಡಲು ನಾವೆಲ್ಲರೂ ಒಂದಾಗಿ ನಮ್ಮ ದೇಶದ ಪ್ರಗತಿಗೆ ಮುಂದಾಗಬೇಕು ಎಂದರು.ಹಿರೇಕೆರೂರ ಶಾಸಕ ಯು.ಬಿ. ಬಣಕಾರ ಮಾತನಾಡಿ, ಪ್ರಜಾಪ್ರಭುತ್ವ ಒತ್ತು ಕೊಡುವ ದೃಷ್ಟಿಯಿಂದ ಆಚರಣೆ. ವಿಶ್ವದಲ್ಲಿ ಅತಿದೊಡ್ಡದಾದ ಲಿಖಿತವಾದ ಸಂವಿಧಾನ ರಚನೆ ಮಾಡಲಾಗಿದೆ. ಹಿರಿಯರ ಕಂಡಂತಹ ಪ್ರಜಾಪ್ರಭುತ್ವದ ಆಶಯವನ್ನು ಈಡೇರಿಸಬೇಕಾಗಿದೆ. ಈ ಸ್ವಾತಂತ್ರ‍್ಯ ಉಳಿಸಿಕೊಂಡು ಹೋಗುವ ನಿಟ್ಟಿನಲ್ಲಿ ನಾವೆಲ್ಲರೂ ಸಾಗೋಣ ಎಂದರು.ಪಂಚ ಗ್ಯಾರಂಟಿ ಯೋಜನೆಗಳ ರಾಜ್ಯ ಉಪಾಧ್ಯಕ್ಷ ಎಸ್.ಆರ್. ಪಾಟೀಲ, ಜಿಪಂ ಸಿಇಒ ಅಕ್ಷಯ್ ಶ್ರೀಧರ ಹಾಗೂ ಸ್ಥಳೀಯ ನಗರಸಭೆಯ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಶಾಲಾ-ಕಾಲೇಜಿನ ವಿದ್ಯಾರ್ಥಿಗಳು, ಶಿಕ್ಷಕರು ಭಾಗಿಯಾಗಿದ್ದರು.

ಸಾಂಸ್ಕೃತಿಕ ಕಾರ್ಯಕ್ರಮ: ಜಿಲ್ಲಾಧಿಕಾರಿ ಭಾರತ ಸಂವಿಧಾನ ಪ್ರಸ್ತಾವನೆಯ ಕುರಿತು ಪ್ರತಿಜ್ಞಾವಿಧಿ ಬೋಧಿಸಿದರು. ಆನಂತರ ವಿವಿಧ ತಾಲೂಕಿನ ಶಾಲಾ-ಕಾಲೇಜು ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆದವು. ಹಾಗೂ ವಿವಿಧ ಜಾನಪದ ಕಲಾ ತಂಡಗಳು ಭಾಗಿಯಾಗಿದ್ದವು. ಯಕ್ಲಾಸಪುರ ಗ್ರಾಮದ ಜನನಿ ಜಾನಪದ ಕಲಾತಂಡದ ಸದಸ್ಯರು ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಮತ್ತು ನಾಡಗೀತೆ ಹಾಡಿದರು.ಪ್ರಜಾಪ್ರಭುತ್ವ ದಿನಾಚರಣೆಯ ಮಾನವ ಸರಪಳಿಯು ತಾಲೂಕಿನ ಕುಮಾರಪಟ್ಟಣ ತುಂಗಭದ್ರಾ ನದಿಯಿಂದ ಗದಗ ಜಿಲ್ಲೆಯ ಬಾಲೆಹೊಸೂರಿನ ವರೆಗೆ ಜರುಗಿತು. ತಾಲೂಕಿನಿಂದ ಪ್ರತಿ 1 ಕಿ.ಮೀ. ಅಂತರದಲ್ಲಿ ಮಾನವ ಸರಪಳಿಯಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿ ಯಶಸ್ವಿಗೊಳಿಸಿದರು.

PREV

Recommended Stories

ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಕಡಿಮೆ ಗುಣದ ಔಷಧಿ ಎರಡೇ ದಿನಕ್ಕೇ ಮಾರುಕಟ್ಟೆಯಿಂದ ವಾಪಸ್‌: ಸಚಿವ